ಅಲ್ ಖೈದಾ ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು ಮಹಿಳೆಯನ್ನು ಬಂಧಿಸಿದ ಗುಜರಾತ್ ಎಟಿಎಸ್

68
ಬೆಂಗಳೂರು: ಭಯೋತ್ಪಾದನಾ ಚಟುವಟಿಕೆ ಹಾಗೂ ಭಯೋತ್ಪಾದಕರಿಗೆ ಬೆಂಬಲ ನೀಡಿದ ಆರೋಪದಡಿ ನಗರದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಮಹಿಳೆಯನ್ನು ಗುಜರಾತ್‌ನ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ನಗರದಲ್ಲಿ ಬಂಧಿಸಿದ್ದಾರೆ ಜಾರ್ಖಂಡ್ ಮೂಲದ ಶಮಾ ಪರ್ವೀನ್ ಬಂಧಿತ ಮಹಿಳೆ.


ಹೆಬ್ಬಾಳದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸಹೋದರನ ಮನೆಯಲ್ಲಿ ಶಮಾ ಪರ್ವೀನ್ ನೆಲಸಿದ್ದಳು. ಆಕೆ ಎಲ್ಲಿಯೂ ಕೆಲಸಕ್ಕೆ ಹೋಗುತ್ತಿರಲಿಲ್ಲ.‌ ನಗರದ ಮನೋರಾಯನಪಾಳ್ಯ ಪ್ರದೇಶದಲ್ಲಿದ್ದ ಸಹೋದರನ ಮನೆಯಲ್ಲೇ ಕಾಲಕಳೆಯುತ್ತಿದ್ದಳು ಎಂದು ಮೂಲಗಳು ತಿಳಿಸಿವೆ.

ಬೆಂಗಳೂರಿನಲ್ಲಿ ಅಲ್ ಖೈದಾ ಜಾಲವನ್ನು ಬಲಪಡಿಸುವಲ್ಲಿ ಆಕೆಯ ಪಾತ್ರವಿದೆ ಎಂದು ATS ತನಿಖೆಯು ಬಹಿರಂಗಪಡಿಸಿದೆ. ಆರೋಪಿಯಿಂದ ಡಿಜಿಟಲ್ ಉಪಕರಣಗಳು, ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್‌ಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಶಮಾ ಪರ್ವೀನ್ ಪದವೀಧರೆಯಾಗಿದ್ದು, ಅವರು ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದಳು. ಆಕೆ ಅಲ್ ಖೈದಾದಲ್ಲಿ ಕೆಲಸ ಮಾಡುತ್ತಿದ್ದರು. ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಗುಂಪಿನ ಸಿದ್ಧಾಂತವನ್ನು ಬಹಿರಂಗವಾಗಿ ಬೆಂಬಲಿಸುತ್ತಿದ್ದಳು ಎಂದು ಆರೋಪಿಸಲಾಗಿದೆ.

ಆಕೆ ಪ್ರಮುಖ ಅಲ್ ಖೈದಾ ಕಾರ್ಯಕರ್ತನ ವೀಡಿಯೊಗಳನ್ನು ಹಂಚಿಕೊಂಡಿದ್ದಳು . ಯುವಕರನ್ನು ಭಯೋತ್ಪಾದನೆಗೆ ಪ್ರೋತ್ಸಾಹಿಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಗುಜರಾತ್ ಎಟಿಎಸ್ ಈ ಹಿಂದೆ ನಾಲ್ವರು ಅಲ್ ಖೈದಾ ಕಾರ್ಯಕರ್ತರಾದ ಮೊಹಮ್ಮದ್ ಫೈಕ್, ಎಂಡಿ ಫರ್ದೀನ್ ,ಸೈಫುಲ್ಲಾ ಖುರೇಷಿ ಮತ್ತು ಜೀಶನ್ ಅಲಿ ಎಂಬುರವನ್ನು ಬಂಧಿಸಿತ್ತು.

ಆರೋಪಿಗಳ ತನಿಖೆಯ ಸಮಯದಲ್ಲಿ ಬಂಧಿತರು ಮತ್ತು ಶಮಾ ಪರ್ವೀನ್ ನಡುವಿನ ಸಂಪರ್ಕದ ಬಗ್ಗೆ ಪೊಲೀಸರು ತಿಳಿದುಕೊಂಡರು. ನಂತರ ಸಾಕ್ಷ್ಯಗಳ ಆಧಾರದ ಮೇಲೆ, ಎಟಿಎಸ್ ತಂಡವು ಕರ್ನಾಟಕ್ಕೆಬಂದು ಆಕೆಯನ್ನು ಬಂಧಿಸಿತು.

ಬೆಂಗಳೂರಿನ ನ್ಯಾಯಾಲಯದ ನ್ಯಾಯಾಧೀಶರ ಎದುರು ಶಂಕಿತ ಮಹಿಳೆಯನ್ನು ಅಧಿಕಾರಿಗಳು ಹಾಜರು‌ ಪಡಿಸಿದ್ದರು. ಬಳಿಕ ಪ್ರಕರಣ ವರ್ಗಾವಣೆ ಆದೇಶ ಪಡೆದುಕೊಂಡು ಶಂಕಿತೆಯನ್ನು ಗುಜರಾತ್‌ಗೆ ಕರೆದೊಯ್ದಿದ್ದಾರೆ ಎಂದು ಮೂಲಗಳು‌ ತಿಳಿಸಿವೆ.

ಭಯೋತ್ಪಾದನಾ ಚಟುವಟಿಕೆಗಳಿಗೆ ಬೆಂಬಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದ ಹಾಗೂ ಉಗ್ರ ಚಟುವಟಿಕೆಗೆ ಪ್ರೇರೇಪಣೆ ನೀಡುತ್ತಿದ್ದ ಆರೋಪದಡಿ ಬಂಧಿಸಲಾಗಿದೆ‌.‌ ಸ್ಥಳೀಯವಾಗಿ ಯಾರಾದರೂ ಶಂಕಿತ ಮಹಿಳೆಯ ಜತೆಗೆ‌ ಗುರುತಿಸಿಕೊಂಡಿದ್ದರೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ

Leave a comment

Leave a Reply

Your email address will not be published. Required fields are marked *

Related Articles

ಟಿಸಿಎಸ್ ನಲ್ಲಿ ಕಾರ್ಪೊರೇಟ್ ಜಿಹಾದ್ ಲೈಂಗಿಕ ಕಿರುಕುಳ ಪ್ರಕರಣ ಬುರ್ಖಾ ಧರಿಸುವಂತೆ ಕಿರುಕುಳ ಹಿಂದೂ ಧರ್ಮ ನಿಂದನೆ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟಕ್ಕೆ ಸಂಚು ನಾಲ್ವರು ಉಗ್ರರ ಬಂಧನ ತಪ್ಪಿದ ಬಾರಿ ದುರಂತ

“ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಮಹಾಸ್ಫೋಟಕ್ಕೆ ಸಂಚು ನಡೆದಿದೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು...

ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧಿಸಿ ಸಂಸತ್ತಿನಲ್ಲಿ ಕೋಲಾಹಲ ಎಬ್ಬಿಸಿದ ವಿಪಕ್ಷಗಳು

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಗುರುವಾರ ಆರಂಭದ ದಿನವೇ ತೀವ್ರ ರಾಜಕೀಯ ವಾಗ್ವಾದ, ಕೋಲಾಹಲ ಉಭಯ...

ಬಿಹಾರ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಭಾರತೀಯ ಜನತಾ ಪಕ್ಷದ  ನಾಯಕ ಸಾಮ್ರಾಟ್ ಚೌಧರಿ ಅವರು ಇಂದು ಬುಧವಾರ ಬಿಹಾರದ 24ನೇ ಮುಖ್ಯಮಂತ್ರಿಯಾಗಿ...