ಚಿಕ್ಕಮಗಳೂರು: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಜೊತೆ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಸರಿ ಶಾಲು ಧರಿಸಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವುದು ಹಲವರ ಹುಬ್ಬೇರುವಂತೆ ಮಾಡಿದೆ. ಹಿಂದೂವಾಗಿ, ದಲಿತೆಯಾಗಿ ಮೂಡಿಗೆರೆಯಲ್ಲಿ ಜನಿಸಿದ್ದೇನೆ.
ಮುಂದೆ ಬಿಜೆಪಿಗೆ ಹೋಗ್ತಿನೊ, ಕಾಂಗ್ರೆಸ್ಸಿನಲ್ಲೇ ಉಳಿತಿನೋ, ಬಿಎಸ್‌ಪಿ ಅಥವಾ ಎಸ್‌ಡಿಪಿಐ ಸೇರುತ್ತೇನೋ ಎಂಬ ಪ್ರಶ್ನೆಗೆ ಮೂರು ವರ್ಷ ಕಾಯೋಣ ಎಂದು ನಯನಾ ಮೋಟಮ್ಮ ಹೇಳಿದರು.
ಮೂಡಿಗೆರೆಯಲ್ಲಿ ಹಿಂದೂ ಮಹಾಸಭಾ ಗಣಪತಿ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಅವರು, ಇಂದು ಕೇಸರಿ ಶಾಲು ಹಾಕಿ ಬಂದಿದ್ದೇನೆ. ಪಕ್ಷದ ಕಾರ್ಯಕರ್ತರೂ ಬಂದಿದ್ದಾರೆ.
ಈ ಬಗ್ಗೆ ಹಲವರಿಗೆ ಪ್ರಶ್ನೆಗಳಿವೆ. ನದಿ ಎಂದರೆ ಕಾಂಗ್ರೆಸ್ಸಾ, ದಡ ಎಂದರೆ ಬಿಜೆಪಿಯಾ ಎಂಬ ಶಂಕೆ ಬೇಡ ಎಂದರು. ಕೇಸರಿ ಶಾಲು ಹಾಕಿ ಬಂದಿದ್ದೇನೆ. ಪಕ್ಷದ ಕಾರ್ಯಕರ್ತರೂ ಬಂದಿದ್ದಾರೆ. ಈ ಬಗ್ಗೆ ಹಲವರಿಗೆ ಪ್ರಶ್ನೆಗಳಿವೆ
ನಾನು ಗಣಪತಿಗಾಗಿ, ಧರ್ಮಕ್ಕಾಗಿ ಬಂದಿದ್ದೇನೆ. ಶಾಸಕಿಯಾಗಿ ಪಕ್ಷ ಪ್ರತಿನಿಧಿಸುವುದು ಆ ನಂತರ, ಈಗ ಗಣಪತಿ ಸಮಿತಿಯ ಕಾರ್ಯಾಧ್ಯಕ್ಷೆಯಾಗಿ ಇಲ್ಲಿಗೆ ಬಂದಿದ್ದೇನೆ.
ಆದ್ದರಿಂದ ಯಾವ ಪಕ್ಷದವರಿಗೂ ಪ್ರಶ್ನೆಗಳು ಉಳಿಯಬಾರದು ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ಶಾಸಕಿಯಾಗಿಯೂ ನಿಂತಿದ್ದೇನೆ. ಅದನ್ನು ಗುರುತಿಸಿಕೊಳ್ಳಲೇಬೇಕು. ಅದರ ಜೊತೆಗೆ ಸಾಕಷ್ಟು ಅಸ್ತಿತ್ವಗಳು ಇವೆ.
ಅದನ್ನೆಲ್ಲಾ ಸೇರಿಸಿಕೊಂಡು ನಯನಾ ಮೋಟಮ್ಮ ಆಗಿದ್ದೇನೆ ಎಂದರು. ಯಾರೂ ಕೂಡ ಹುಟ್ಟುವಾಗಲೇ ಇಂತಹ ಜಾತಿ-ಧರ್ಮ, ಹೆಣ್ಣು-ಗಂಡು ಎಂದು ಹುಟ್ಟಿರುವುದಿಲ್ಲ ಎಂದರು”
Leave a comment