ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ತೀರ್ಪು ವಿಶೇಷ ನ್ಯಾಯಾಲಯದಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

79

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.


ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ದೋಷಿ ಎಂದು ಜನಪ್ರತಿನಿಧಿಗಳ ನ್ಯಾಯಾಲಯ ಶುಕ್ರವಾರ ಮಹತ್ವದ ತೀರ್ಪುನೀಡಿದೆ.

26 ಸಾಕ್ಷಿಗಳ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ  ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ತೀರ್ಪು ನೀಡಿದೆ.
ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜಲ್ವ್ ರೇವಣ್ಣ ಕಳೆದ ಕಳೆದ 14 ತಿಂಗಳಿನಿಂದ ಸೆರೆಮನೆಯಲ್ಲಿ ಬಂಧಿಯಾಗಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ಹಲವು ಸೆಕ್ಷನ್ಗಳ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಐಪಿಸಿ ಸೆಕ್ಷನ್ 376 (2)(k) ಅಡಿ ಮಹಿಳೆಯ ಮೇಲೆ ಹಕ್ಕು ಚಲಾಯಿಸುವ ಸ್ಥಿತಿಯಲ್ಲಿದ್ದು ಅತ್ಯಾಚಾರ ಎಸಗಲಾಗಿದೆ.

376 (2) (n) ಅಡಿ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ. 354(A) ಲೈಂಗಿಕತೆ ಬೇಡಿಕೆ ಇಡುವುದು. 354 (B) ಮಹಿಳೆಯನ್ನು ವಿವಸ್ತ್ರಗೊಳಿಸುವುದು. 354 (c) ಮಹಿಳೆಯ ಅಶ್ಲೀಲ ದೃಶ್ಯ ಚಿತ್ರೀಕರಿಸುವುದು.

506 ಜೀವ ಬೆದರಿಕೆ, 201 ಸಾಕ್ಷ್ಯನಾಶದ ಅಡಿ ದೋಷಾರೋಪ ಹೊರಿಸಲಾಗಿದೆ. ನ್ಯಾಯಧೀಶರಾದ ಸಂತೋಷ್ ಗಜಾನನ ಭಟ್ ಅವರು ವಿಚಾರಣೆ ಪೂರ್ಣಗೊಳಿಸಿ ಇಂದಿಗೆ ತೀರ್ಪು ಕಾಯ್ದಿರಿಸಿದ್ದರು. ಅದರಂತೆ ಇಂದು ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದಾರೆ. ನಾಳೆ ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ

Leave a comment

Leave a Reply

Your email address will not be published. Required fields are marked *

Related Articles

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಾರ್ಜ್ ಕುರಿಯನ್

“ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಅಂತ್ಯವಾದ...

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...