“ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಕೇಂದ್ರದ ಸೇವೆಗೆ ಹೋದರೆ, ಮುಖ್ಯಸ್ಥರ ಬದಲಾವಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸೇವೆಗೆ ತೆರಳುವ ಪಟ್ಟಿಯಲ್ಲಿ ಎಸ್‌ಐಟಿ ಮುಖ್ಯಸ್ಥರಾಗಿರುವ ಪ್ರಣಬ್ ಮೊಹಂತಿ ಅವರ ಹೆಸರಿದೆ.
ಈ ಹಿನ್ನೆಲೆ ಎಸ್‌ಐಟಿ ಮುಖ್ಯಸ್ಥರ ಬದಲಾವಣೆ ಆಗುತ್ತಾ ಎನ್ನುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮೊಹಂತಿ ಅವರು ಕೇಂದ್ರ ಸೇವೆಗೆ ಹೋದರೆ ವಿಶೇಷ ತನಿಖಾ ದಳ (ಎಸ್ಐಟಿ) ಮುಖ್ಯಸ್ಥರ ಬದಲಾವಣೆ ಆಗುತ್ತದೆ ಎಂದು ಹೇಳಿದರು.
ಗೃಹ ಸಚಿವ ಪರಮೇಶ್ವರ್ ಅರು ಮಾತನಾಡಿ, ಎಸ್‌ಐಟಿ ಮುಖ್ಯಸ್ಥರ ಬದಲಾವಣೆ ಕುರಿತು ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪೋಸ್ಟ್ ಗಳು ಹರಿದಾಡುತ್ತಿವೆ ಎಂದು ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ರಚಿಸಲು ನಿರ್ಧರಿಸಿದಾಗ, ಡಿಜಿ ದರ್ಜೆಯ ಅಧಿಕಾರಿಯೊಬ್ಬರು ಅದರ ಮುಖ್ಯಸ್ಥರಾಗಬೇಕೆಂದು ಬಯಸಿದೆವು.
ಪ್ರಸ್ತುತ ಮುಖ್ಯಸ್ಥರನ್ನು ಬದಲಾಯಿಸಲು ಸರ್ಕಾರ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲವಾದರೂ, ತಪ್ಪು ಮಾಹಿತಿ ಹರಡಲಾಗುತ್ತಿದೆ.
ಈ ವಿಷಯವು ಡಿಪಿಎಆರ್ ಮತ್ತು ಮುಖ್ಯಮಂತ್ರಿಗಳ ವ್ಯಾಪ್ತಿಗೆ ಬರುತ್ತದೆ ಎಂದು ತಿಳಿಸಿದರು. ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಪ್ರಣವ್ ಮೊಹಂತಿಯವರ ಹೆಸರಿದೆ
. ಅವರನ್ನು ಕೇಂದ್ರದ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಇಲ್ಲಸಲ್ಲದ ಪೋಸ್ಟ್’ಗಳನ್ನು ಮಾಡಲಾಗುತ್ತಿದೆ.
ಇದು ಸರಿ ಕಾಣಿಸುವುದಿಲ್ಲ. ಪ್ರಕರಣದಲ್ಲಿ ಸರ್ಕಾರದ ಆಸಕ್ತಿ ಏನಿದೆ? ಎಸ್‌ಐಟಿ ಯಾಕೆ ರಚಿಸಿದ್ದೆವು?. ಪ್ರಕರಣದಲ್ಲಿ ಸತ್ಯಾಂಶ ಹೊರಬರಬೇಕು ಎಂಬುದಷ್ಟೇ ಸರ್ಕಾರಕ್ಕೆ ಮುಖ್ಯ. ಈ ನಿಟ್ಟಿನಲ್ಲಿ ಎಸ್‌ಐಟಿ ಮಾಡಿದ್ದೇವೆ. ಎಸ್‌ಐಟಿ ತನಿಖೆ ನಡೆಸಿ, ವರದಿ ಸಲ್ಲಿಸಿದ ನಂತರ ಸತ್ಯಾಸತ್ಯತೆ ಹೊರಬರುತ್ತವೆ.
ನಮಗೆ ಬೇಕಿರುವುದು ಅಷ್ಟೇ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಯಾರನ್ನು ರಕ್ಷಣೆ ಮಾಡಬೇಕು, ಯಾರನ್ನೋ ಸಿಕ್ಕಿಹಾಕಿಸಬೇಕು ಎಂಬ ಅಜೆಂಡಾ ಸರ್ಕಾರಕ್ಕೆ ಖಂಡಿತವಾಗಿಯೂ ಇಲ್ಲ.
ಯಾರೂ ಕೂಡ ಅದನ್ನು ತಪ್ಪು ಭಾವನೆಯಿಂದ ನೋಡಬಾರದು. ಪಾರದರ್ಶಕವಾಗಿ ತನಿಖೆ ಮಾಡಬೇಕು ಎಂದು ಹೇಳಿದ್ದೇವೆ. ಇದು ಸರ್ಕಾರಕ್ಕಿರುವ ಅಜೆಂಡಾ ಎಂದರು
Leave a comment