ಧರ್ಮಸ್ಥಳ ಪ್ರಕರಣ: ಮೃತದೇಹಗಳ ಅಸ್ತಿಪಂಜರ ಪತ್ತೆ ಕಾರ್ಯಾಚರಣೆಗೆ ಜಿಪಿಆರ್ ಬಳಕೆಗೆ ಆಗ್ರಹ

1

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಪತ್ತೆಗೆ ಜಿಪಿಆರ್ ಬಳಕೆ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ.

ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹಗಳ ಪತ್ತೆ ಕಾರ್ಯಾಚರಣೆಯಲ್ಲಿ ಅತ್ಯಾಧುನಿಕ  ಗ್ರೌಂಡ್  ಪೆನೇಟ್ರೇಟಿಂಗ್ ರೇಡಾರ್- ಜಿಪಿಆರ್ ಗಳನ್ನು ಬಳಸುವಂತೆ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಎಂಬುವರ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಎನ್. ಒತ್ತಾಯಿಸಿದ್ದಾರೆ.


ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸುಜಾತಾ ಭಟ್, ‘ಸಾಕ್ಷಿ-ದೂರುದಾರ ಈಗಾಗಲೇ ತೋರಿಸಿ ಅಗೆಸಿರುವ ಮತ್ತು ಅದರ ಸುತ್ತಮುತ್ತಲಿನ ಸ್ಥಳಗಳಲ್ಲಿ ಭಾರತದಲ್ಲಿ ಬಳಕೆಯಲ್ಲಿರುವ ಅತ್ಯಾಧುನಿಕ ಜಿ ಪಿ ಆರ್ ಅನ್ನು ಬಳಸಿ ಕಳೇಬರಗಳ ಪತ್ತೆ ಕಾರ್ಯಾಚರಣೆ ನಡೆಸುವಂತೆ’ ವಿಶೇಷ ತನಿಖಾ ತಂಡಕ್ಕೆ ಮನವಿ ಮಾಡಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷಿ ದೂರುದಾರ ತೋರಿರುವ 10 ಸ್ಥಳಗಳಲ್ಲಿ ಅಗೆದಾಗ ಕೆಲವು ಸ್ಥಳಗಳಲ್ಲಿ ಕಳೇಬರಗಳು ಪತ್ತೆಯಾಗಿವೆ ಎಂಬುದು ಮಾಧ್ಯಮಗಳ ಮೂಲಕ ತಿಳಿದುಬಂದಿದೆ.

ಸಾಕ್ಷಿಯೇ ಹೇಳಿರುವಂತೆ, ಆತ ಧರ್ಮಸ್ಥಳವನ್ನು 2014ರಲ್ಲಿಯೇ ತೊರೆದಿದ್ದಾನೆ. ಅಪಾರ ಮಳೆಯನ್ನು ಕಾಣುವ ಧರ್ಮಸ್ಥಳ ಪ್ರದೇಶದಲ್ಲಿ ಮಣ್ಣು ಒಂದೆಡೆಯಿಂದ ಮತ್ತೊಂದೆಡೆಗೆ ಹರಿದು ಶೇಖರಣೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ಅಲ್ಲದೇ ಸುಮಾರು 11 ವರ್ಷಗಳಲ್ಲಿ ಅರಣ್ಯ ಪ್ರದೇಶದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಈ ಕಾರಣಕ್ಕೆ ಸಾಕ್ಷಿದಾರ ತನ್ನ ನೆನಪಿನಲ್ಲಿ ಇಟ್ಟುಕೊಂಡ ಗುರುತುಗಳಲ್ಲಿ ಬದಲಾವಣೆಯಾಗಿರುವ ಸಾಧ್ಯತೆಯೂ ಅಧಿಕವಾಗಿದೆ.


ಆದ್ದರಿಂದ, ನಾವು ಈಗಾಗಲೇ (ಜುಲೈ 29ರಂದು) ಮನವಿ ಮಾಡಿಕೊಂಡಂತೆ, ಸದ್ಯ ಅಗೆಯಲಾಗಿರುವ ಸ್ಥಳಗಳಲ್ಲಿ ಮತ್ತು ಅದರ ಸುತ್ತಮುತ್ತಲಿನ ಸ್ಥಳಗಳಲ್ಲಿ ಕಳೇಬರಗಳ ಪತ್ತೆಗೆ ಅತ್ಯಾಧುನಿಕ ಗ್ರೌಂಡ್ ಪೆನೇಟ್ರೇಟಿಂಗ್ ರಾಡಾರ್ (ಜಿಪಿಆರ್) ಗಳನ್ನು ಬಳಸುವಂತೆ ಕೇಳಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.

ಹುಲ್ಲುಕಡ್ಡಿಯನ್ನು ತೆರವುಗೊಳಿಸಲು ಉಪಯೋಗಿಸುವ ಯಂತ್ರದಷ್ಟು ಗಾತ್ರವಿರುವ ಈ ಜಿಪಿಆರ್ ಗಳನ್ನು ಕೆಲವೇ ವ್ಯಕ್ತಿಗಳನ್ನು ನಿಯೋಜಿಸಿ ಬಳಸಬಹುದು. ಆದ್ದರಿಂದ ದೂರುದಾರ ಗುರುತಿಸಿರುವ ಜಾಗಗಳ ಪೈಕಿ ಈಗಾಗಲೇ ಅಗೆದಿರುವ ಸ್ಥಳಗಳಲ್ಲಿ ಮತ್ತು ಅದರ ಸುತ್ತಮುತ್ತಲಿನ ಸ್ಥಳಗಳಲ್ಲಿ ಕಳೇಬರಗಳ ಪತ್ತೆಗೆ ಜಿಪಿಆರ್ ಬಳಸಬೇಕು ಎಂದು ವಕೀಲ ಮಂಜುನಾಥ್ ಎನ್. ಒತ್ತಾಯಿಸಿದ್ದಾರೆ.
ಅಂತೆಯೇ ಹಾಲಿ ನಡೆಯುತ್ತಿರುವ ಶೋಧ ಪ್ರಕ್ರಿಯೆಗೆ ಅವರು  ಎಸ್ ಐ ಟಿ ಯನ್ನು ಶ್ಲಾಘಿಸಿದರು. “ಪ್ರಣಬ್ ಮೊಹಂತಿ ನೇತೃತ್ವದ ಎಸ್‌ಐಟಿ ಜಿಪಿಆರ್ ತಂತ್ರಜ್ಞಾನವನ್ನು ಕಾರ್ಯಗತಗೊಳಿಸುತ್ತದೆ ಎಂದು ಅನೇಕ ತಜ್ಞರು ನಿರೀಕ್ಷಿಸುತ್ತಾರೆ.

ಜಿಪಿಆರ್‌ಗಳನ್ನು ನಿಯೋಜಿಸುವಲ್ಲಿ ಕರ್ನಾಟಕ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್‌ಐಟಿಗೆ ಬೆಂಬಲ ನೀಡುತ್ತಾರೆ ಎಂಬ ನಂಬಿಕೆ ಮತ್ತು ವಿಶ್ವಾಸ ನಮಗಿದೆ” ಎಂದು ಅವರು ಹೇಳಿದ್ದಾರೆ.

ಇಷ್ಟಕ್ಕೂ ಏನಿದು ಜಿಪಿಆರ್? ನೆಲಕ್ಕೆ ನುಗ್ಗುವ  ಗ್ರೌಂಡ್ ಪೆನೇಟ್ರೇಟಿಂಗ್ ರಡಾರ್ -ಜಿ ಪಿ ಆರ್  ಒಂದು ವಿನಾಶಕಾರಿಯಲ್ಲದ ಭೂಭೌತಿಕ ವಿಧಾನವಾಗಿದ್ದು, ಮೇಲ್ಮೈ ಕೆಳಗೆ ಅಡಗಿರುವ ವಿವರವಾದ ಚಿತ್ರಗಳನ್ನು ರಚಿಸಲು ಹೆಚ್ಚಿನ ಆವರ್ತನದ ರೇಡಿಯೋ ತರಂಗಗಳನ್ನು ಬಳಸುತ್ತದೆ.

ಜಿಪಿಆರ್, ಆಂಟೆನಾವನ್ನು ಬಳಸಿಕೊಂಡು ನೆಲಕ್ಕೆ ಹೆಚ್ಚಿನ ಆವರ್ತನದ ರೇಡಿಯೋ ತರಂಗಗಳನ್ನು ಹೊರಸೂಸುವ ಮೂಲಕ ಕಾರ್ಯನಿರ್ವಹಿಸುತ್ತದೆ.

ಈ ಅಲೆಗಳು ಭೂಗತ ವಸ್ತುಗಳೊಂದಿಗೆ ಸಂಪರ್ಕ ಸಾಧಿಸಿ ಅವುಗಳ ವಿಭಿನ್ನ ವಸ್ತುಗಳು ಅಥವಾ ವಸ್ತುಗಳ ನಡುವಿನ ಗಡಿಗಳ ಕುರಿತು ರಿಸೀವರ್‌ಗೆ ಮಾಹಿತಿ ನೀಡುತ್ತದೆ.

ಈ ಪ್ರತಿಫಲಿತ ಸಂಕೇತಗಳು ಹಿಂತಿರುಗಲು ತೆಗೆದುಕೊಳ್ಳುವ ಸಮಯ ಮತ್ತು ಅವುಗಳ ಬಲವನ್ನು ಜಿಪಿಆರ್ ವ್ಯವಸ್ಥೆಯು ದಾಖಲಿಸುತ್ತದೆ.

ಈ ಸಂಕೇತಗಳನ್ನು ವಿಶ್ಲೇಷಿಸುವ ಮೂಲಕ, ನಿರ್ವಾಹಕರು 2ಡಿ ಅಡ್ಡ-ವಿಭಾಗಗಳು ಅಥವಾ 3ಡಿ ವೀಕ್ಷಣೆಗಳಂತಹ ಭೂಗತ ಮೇಲ್ಮೈಯ ದೃಶ್ಯ ಪ್ರಾತಿನಿಧ್ಯಗಳನ್ನು ರಚಿಸಬಹುದು. ಡೇಟಾ ಸಂಸ್ಕರಣೆ ಮತ್ತು ವ್ಯಾಖ್ಯಾನಕ್ಕಾಗಿ ವಿಶೇಷ ಸಾಫ್ಟ್‌ವೇರ್ ಅನ್ನು ಸಹ ಬಳಸಬಹುದು.

Leave a comment

Leave a Reply

Your email address will not be published. Required fields are marked *

Related Articles

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ  ಜೈಲು ಶಿಕ್ಷೆ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ...

ಧರ್ಮಸ್ಥಳ ಅಪರಿಚಿತ ಸಾವಿನ ಪ್ರಕರಣದ ಯುಡಿಆರ್ ಮಾಹಿತಿ ಡಿಲೀಟ್ ಬೆಳ್ತಂಗಡಿ ಪೊಲೀಸರ ಮೇಲೆ ಸಂಶಯದ ನೆರಳು

“ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ...

ಎಮ್ಮೆ ಕಟ್ಟುತ್ತಿದ್ದ ಶೆಡ್ ದ್ವಂಸ ರೊಚ್ಚಿಗೆದ್ದ ರೈತ ದಂಪತಿ; ಕಾಂಗ್ರೆಸ್ ಶಾಸಕರ ಕಚೇರಿಯಲ್ಲಿ ಎಮ್ಮೆ ಕಟ್ಟಿಹಾಕಿ ಆಕ್ರೋಶ

ತೆಲಂಗಾಣ: ಜಾನುವಾರಗಳ ಶೆಡ್ ಧ್ವಂಸಕ್ಕೆ ಶಾಸಕರೇ ಕಾರಣ ಎಂದು ಆರೋಪಿಸಿದ ರೈತ ದಂಪತಿ, ಕಾಂಗ್ರೆಸ್ ಶಾಸಕ...

ಎಸ್ಐಟಿ ಮುಖ್ಯಸ್ಥರ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

“ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಕೇಂದ್ರದ ಸೇವೆಗೆ...