“ಕೃಷ್ಣರಾಜ ಸಾಗರ ಜಲಾಶಯಕ್ಕೆ ಟಿಪ್ಪುಸುಲ್ತಾನ್ ಮೊದಲ ಅಡಿಗಲ್ಲು ಹಾಕಿದ್ದರು ಎಂಬ ಸಚಿವ ಮಹದೇವಪ್ಪ ಅವರ ಹೇಳಿಕೆ ವಿರುದ್ಧ ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್ ಅಣೆಕಟ್ಟೆಗೆ ಟಿಪ್ಪುಸುಲ್ತಾನ್ ಮೊದಲ ಅಡಿಗಲ್ಲು ಹಾಕಿದ್ದರು ಎಂಬ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಹೇಳಿದರು.
ಕೃಷ್ಣರಾಜ ಸಾಗರ ಜಲಾಶಯಕ್ಕೆ ಟಿಪ್ಪುಸುಲ್ತಾನ್ ಮೊದಲ ಅಡಿಗಲ್ಲು ಹಾಕಿದ್ದರು ಎಂಬುದಕ್ಕೆ ಸಾಕ್ಷಿ ಎಲ್ಲಿಯೂ ಇಲ್ಲ. ಸಾಮಾನ್ಯವಾಗಿ ಇತಿಹಾಸದ ಬಗ್ಗೆ ಉಲ್ಲೇಖ ಮಾಡಬೇಕಾದರೆ ಸಾಕ್ಷಿ ಅವಶ್ಯ.
ಅಗತ್ಯಕ್ಕೆ ತಕ್ಕಂತೆ ನಿರೂಪಣೆ ಮಾಡಿಕೊಳ್ಳುವುದು ಸರಿಯಲ್ಲ. ಕೆಆರ್‌ಎಸ್ ಕಟ್ಟಿದ್ದು ಯಾರು, ಅದಕ್ಕೆ ಅಡಿಗಲ್ಲು ಹಾಕಿದ್ದು ಯಾರೆಂಬುದು ಎಲ್ಲರಿಗೂ ಗೊತ್ತಿದೆ
. ಕನ್ನಂಬಾಡಿ ಅಣೆಕಟ್ಟೆ ಪ್ರಾರಂಭದಿಂದ ಕೊನೆಯವರೆಗೆ ಏನೆಲ್ಲ ಆಯಿತು, ಶ್ರಮವಹಿಸಿದ್ದು ಯಾರು ಎಂಬುದು ಇತಿಹಾಸ ಪುಟಗಳಲ್ಲಿ ದಾಖಲಾಗಿದೆ.
ಸಚಿವ ಮಹದೇವಪ್ಪ ಇಲ್ಲದ ಇತಿಹಾಸದ ಬಗ್ಗೆ ಮಾತನಾಡುವ ಬದಲು ರಾಜ್ಯದಲ್ಲಿ ಜನರಿಗೆ ಒಳ್ಳೆಯ ಆಡಳಿತ ನೀಡಲಿ ಎಂದು ತಿರುಗೇಟು ನೀಡಿದ್ದಾರೆ
Leave a comment