ಧರ್ಮಸ್ಥಳ  ಎಸ್ಐಟಿಗೆ ಮತ್ತೊಂದು ದೂರು ದಾಖಲು  15 ವರ್ಷದ ಹಿಂದೆ ಬಾಲಕಿ ನಿಗೂಢ ಸಾವು ಪ್ರಕರಣ

51

ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ನಿಗೂಢ ಸರಣಿ ಸಾವುಗಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ)ಕ್ಕೆ ಸೋಮವಾರ ಮತ್ತೊಂದು ದೂರು ದಾಖಲಾಗಿದೆ.
ಬೆಳ್ತಂಗಡಿ ತಾಲ್ಲೂಕಿನ ಇಚಿಲಂಪಾಡಿ ನಿವಾಸಿ, ಸಾಮಾಜಿಕ ಹೋರಾಟಗಾರ ಜಯಂತ್ ಅವರು ಇಂದು ಮೂವರು ವ್ಯಕ್ತಿಗಳ ಜೊತೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಆಗಮಿಸಿ, ದೂರು ನೀಡಿದ್ದಾರೆ. 15 ವರ್ಷಗಳ ಹಿಂದೆ ನಡೆದ ಹದಿಹರೆಯದ ಬಾಲಕಿಯ ನಿಗೂಢ ಸಾವಿನ ಬಗ್ಗೆ ಜಯಂತ್ ಅವರು ಎಸ್ಐಟಿಗೆ ದೂರು ನೀಡಿದ್ದಾರೆ.

ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಹುಡುಗಿಯ ಶವವನ್ನು ಯಾವುದೇ ಕಾನೂನು ಪ್ರಕ್ರಿಯೆಗಳಿಲ್ಲದೆ ಹೂಳಲಾಗಿದೆ ಎಂದು ಅವರು ಆರೋಪಿಸಿದ್ದಾರೆ
ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮೇಲೆ ಸಂಪೂರ್ಣ ನಂಬಿಕೆ ಇರುವುದರಿಂದ ದೂರು ದಾಖಲಿಸಲು ಮುಂದೆ ಬಂದಿದ್ದಾರೆ ಎಂದು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಡಾ. ಅರುಣ್ ಕೆ ಅವರು ತಿಳಿಸಿದ್ದಾರೆ.

ಜಯಂತ್ ಎಂಬ ವ್ಯಕ್ತಿ ಆರಂಭದಲ್ಲಿ ಎಸ್‌ಐಟಿಯನ್ನು ಸಂಪರ್ಕಿಸಿದ್ದರು. ಆದರೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಲು ಸೂಚಿಸಲಾಯಿತು ಮತ್ತು ಸೋಮವಾರ ಅವರ ದೂರು ಸ್ವೀಕರಿಸಲಾಗಿದೆ.
ಮುಂದಿನ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. 2002-03ರ ಅವಧಿಯಲ್ಲಿ ರಾಜ್ಯ ಹೆದ್ದಾರಿ 37ರ ಅರಣ್ಯದಲ್ಲಿ ಮೃತದೇಹವೊಂದನ್ನು ಎಸೆದು ಹೋಗಲಾಗಿತ್ತು.

ಈ ವಿಷಯವನ್ನು ಸ್ಥಳೀಯ ನಿವಾಸಿಯೊಬ್ಬರು ಬೆಳ್ತಂಗಡಿ ಇನ್ಸ್‌ಪೆಕ್ಟರ್‌ಗೆ ತಿಳಿಸಿದ್ದರು. ಘಟನೆ ನಡೆದು ಒಂದು ವಾರದ ನಂತರ ಪೊಲೀಸ್ ಅಧಿಕಾರಿ ಸ್ಥಳಕ್ಕೆ ಬಂದಿದ್ದಾರೆ.


ಅದು 35 ರಿಂದ 40 ವರ್ಷ ಹೆಂಗಸಿನ ಶವ. ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಿ, 2 ಅಡಿ ಆಳದ ಹೊಂಡ ತೆಗೆದು ಹೂತು ಹಾಕಿದ್ದಾರೆ. ಆದರೆ ಮೃತಪಟ್ಟಿದ್ದವರ ವಯಸ್ಸು ಸುಮಾರು 13 ರಿಂದ 15 ವರ್ಷದ ಹೆಣ್ಣು ಮಗು ಅಂತ ಜಯಂತ್ ದೂರಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...