ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ,ಮೋದಿಯವರೊಂದಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಪ್ರಯಾಣ

4

ಬೆಂಗಳೂರು: ರಾಜ್ಯ ರಾಜಧಾನಿಯ ಬಹುನಿರೀಕ್ಷಿತ ನಮ್ಮ ಮೆಟ್ರೋ ಆರ್‌.ವಿ.ರಸ್ತೆ- ಬೊಮ್ಮಸಂದ್ರ ಮಾರ್ಗದಲ್ಲಿ (ಹಳದಿ ರಸ್ತೆ) ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಹಸಿರು ನಿಶಾನೆ ತೋರಿದ್ದು, ಈ ಮಾರ್ಗದಲ್ಲಿ ಸೋಮವಾರದಿಂದ ವಾಣಿಜ್ಯ ಸಂಚಾರ ಶುರುವಾಗಲಿದೆ.
ಹಳದಿ ಮಾರ್ಗಕ್ಕೆ ಚಾಲನೆ ನೀಡಿದ ಬಳಿಕ ಮೋದಿಯವರು, ಇದೇ ಮೆಟ್ರೋ ರೈಲಿನಲ್ಲಿ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಸ್ಟೇಷನ್ವರೆಗೆ ಸಂಚಾರ ಆರಂಭಿಸಿದ್ದಾರೆ. ಈ ಮೆಟ್ರೋ ರೈಲನ್ನು ಮಹಿಳಾ ಲೋಕೋ ಪೈಲಟ್ ವಿನುತಾ ಅವರು ಚಾಲನೆ ಮಾಡುತ್ತಿದ್ದು, ಮೋದಿಯವರೊಂದಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ 117 ಜನರು ಪ್ರಯಾಣ ನಡೆಸಿದ್ದಾರೆ.

ಮೋದಿಯವರೊಂದಿಗೆ ಎಂಟು ಜನ ಮಕ್ಕಳು, ಎಂಟು ಮಂದಿ ಮೆಟ್ರೋ ಉದ್ಯೋಗಿಗಳು, ಸರ್ಕಾರಿ ಪ್ರೌಢಶಾಲೆಯ 16 ವಿದ್ಯಾರ್ಥಿಗಳು, ಆರ್.ವಿ ರೋಡ್ ಟು ಬೊಮ್ಮಸಂದ್ರ ಯೆಲ್ಲೋ ಲೈನ್ ಮಾರ್ಗದಲ್ಲಿ ಮಾರ್ಗದಲ್ಲಿ ಕೆಲಸ ಮಾಡಿದ ಎಂಟು ಕಾರ್ಮಿಕರು ಮತ್ತು 8 ಜನಸಾಮಾನ್ಯರು ಸಂಚಾರ ನಡೆಸುತ್ತಿದ್ದಾರೆ. ರಾಗಿಗುಡ್ಡದಿಂದ ಮೆಟ್ರೋ ರೈಲು ಸಂಚಾರ ಆರಂಭಗೊಂಡು ಜಯದೇವ ಮೆಟ್ರೋ ಸ್ಟೇಷನ್ನಲ್ಲಿ ಐದು ನಿಮಿಷ ನಿಲ್ಲಲ್ಲಿದೆ.
ನಂತರ ಸಿಲ್ಕ್ ಬೋರ್ಡ್, ಹೊಂಗಸಂದ್ರ, ಸಿಂಗಸಂದ್ರ, ಎಲೆಕ್ಟ್ರಾನಿಕ್ ಸಿಟಿ, ಕೊನಪ್ಪನ ಅಗ್ರಹಾರ ಮೆಟ್ರೋ ಸ್ಟೇಷನ್ನಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಗಣ್ಯರು ರೈಲಿನಿಂದ ಇಳಿಯಲಿದ್ದಾರೆ. ಹಳದಿ ಮೆಟ್ರೋ ಮಾರ್ಗಕ್ಕೆ ಇಂದು ಚಾಲನೆ ಸಿಕ್ಕರೂ ಪ್ರಯಾಣಿಕರಿಗೆ ಸಂಚಾರಕ್ಕೆ ಅವಕಾಶವಿಲ್ಲ.

ನಾಳೆ ಬೆಳಿಗ್ಗೆ ಐದು ಗಂಟೆಯಿಂದ ಪ್ರಯಾಣಿಕರು ಸಂಚಾರ ಮಾಡಬಹುದಾಗಿದೆ. ಸದ್ಯ ರೈಲುಗಳ ಕೊರತೆ ಇರುವುದರಿಂದ ಆರಂಭದ ಕೆಲ ತಿಂಗಳು 20-25 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

2026ರ ಮಾರ್ಚ್ ವೇಳೆಗೆ 12 ರೈಲು ಸೇರ್ಪಡೆ ಆಗಲಿದ್ದು, ಒಟ್ಟು 15 ರೈಲುಗಳು ಈ ಮಾರ್ಗದಲ್ಲಿ ಕಾರ್ಯಾಚರಣೆ ಮಾಡಲಿವೆ. ಮುಂದಿನ ದಿನಗಳಲ್ಲಿ ಟ್ರಿಪ್‌ಗಳ ಸಂಖ್ಯೆ ಕೂಡ ಹೆಚ್ಚಾಗಲಿದ್ದು, ನಿತ್ಯ 3.5 ಲಕ್ಷ ಮಂದಿ ಪ್ರಯಾಣಿಸಬಹುದು ಎಂದು ಬಿಎಂಆರ್ಸಿಎಲ್‌ ಅಂದಾಜಿಸಿದೆ.

ಸದ್ಯಕ್ಕೆ ಹೊಸ ಹಳದಿ ಮಾರ್ಗದ ಟಿಕೆಟ್ ದರ, ರೈಲುಗಳ ಸಂಚಾರದ ಅವಧಿಯನ್ನು ಬೆಂಗಳೂರು ಮೆಟ್ರೋ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಅಧಿಕೃತವಾಗಿ ಒದಗಿಸಿಲ್ಲ. ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗೆ (ಸಿಎಸ್‌ಬಿ) ಡಬ್ಬಲ್ ಡೆಕ್ಕರ್ (3.3 ನಿರ್ಮಿಸಲಾಗಿದೆ.
ಡಬ್ಬಲ್ ಡೆಕ್ಕರ್ ಪ್ರೈಓವರ್‌ನ ಮೇಲ್ಬಾಗದಲ್ಲಿ ನಮ್ಮ ಮೆಟ್ರೋ ರೈಲು ಓಡಾಡಲಿದೆ. ಕೆಳಭಾಗ ವಾಹನಗಳ ಓಡಾಟಕ್ಕೆ ಮೀಸಲಾಗಿದೆ. ಜೊತೆಗೆ ಈ ಮಾರ್ಗದ ಜಯದೇವ ಇಂಟರ್ ಚೇಂಜ್ ಮೆಟ್ರೋ ನಿಲ್ದಾಣ ಅತೀ ಎತ್ತರದ ಮೆಟ್ರೋ ನಿಲ್ದಾಣ ಎನ್ನಿಸಿದ್ದು 5 ಹಂತದ ಸಾರಿಗೆ ವ್ಯವಸ್ಥೆ ನಿರ್ಮಾಣವಾಗಿದೆ.

2026ರ ಡಿಸೆಂಬರ್‌ಗೆ ಈ ಮಾರ್ಗ ಉದ್ಘಾಟನೆ ಆಗಲಿದ್ದು, ಬಳಿಕವಷ್ಟೆ ಇದರ ಪೂರ್ಣ ಬಳಕೆ ಆಗಲಿದೆ. ಹಳದಿ ಮಾರ್ಗ ಸದ್ಯ ಕೇವಲ ಮೂರು ರೈಲುಗಳಿಂದ ಕಾರ್ಯಾಚರಣೆ ಆಗಲಿದೆ.

ಚಾಲಕ ರಹಿತ ರೈಲಿಗಾಗಿ ಸಿಬಿಟಿಸಿ (ಕಮ್ಯುನಿಕೇಶನ್ ಬೇಸ್ ಟ್ರೈನ್ ಕಂಟ್ರೋಲ್) ತಂತ್ರಜ್ಞಾನ ಬಳಸಲಾಗಿದೆ. 2026ರ ವೇಳೆಗೆ ಈ ಮಾರ್ಗಕ್ಕೆ 14 ರೈಲು ಸೇರ್ಪಡೆ ಆಗಲಿದ್ದು, ಆಗ 90 ಸೆಕೆಂಡ್‌ಗೆ ಒಮ್ಮೆ ರೈಲುಗಳು ಸಂಚರಿಸಲಿವೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಆರಂಭದಲ್ಲಿ ಚಾಲಕ ಸಹಿತವಾಗಿ ಸಂಚರಿಸಿ ಬಳಿಕ ಚಾಲಕರಹಿತವಾಗಿ ರೈಲನ್ನು ಓಡಿಸಲಾಗುವುದು ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

Leave a comment

Leave a Reply

Your email address will not be published. Required fields are marked *

Related Articles

ಅಪರೇಷನ್ ಸಿಂಧೂರ ಸಮಯದಲ್ಲಿ ಪಾಕಿಸ್ತಾನದ ಆರುಯುದ್ಧ ವಿಮಾನಗಳನ್ನು ಆಕಾಶದಲ್ಲಿ ಹೊಡೆದುರುಳಿಸಲಾಗಿತ್ತು:: ಅಮರ್ ಪ್ರೀತ್ ಸಿಂಗ್

“ಆಪರೇಷನ್ ಸಿಂಧೂರ್’ ವೇಳೆ ಪಾಕಿಸ್ತಾನದ ಆರು ಯುದ್ಧ ವಿಮಾನಗಳು ಹಾಗೂ ಮತ್ತೊಂದು ದೊಡ್ಡ ವಿಮಾನವನ್ನು ಹೊಡೆದುರುಳಿಸಲಾಗಿದೆ...

ಎಥೆನಾಲ್ ಮಿಶ್ರಿತ ಇಂಧನದಿಂದ ಮೈಲೇಜ್ ಕುಸಿತ ಕಳವಳಗಳಿಗೆ  ಸ್ಪಷ್ಟನೆ  ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಮುಂಬೈ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಎಥೆನಾಲ್ ಮಿಶ್ರಿತ ಪೆಟ್ರೋಲ್...

ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ರೀತಿಯ ಬೆಲೆ ತೆರಲು ಭಾರತ ಸಿದ್ಧ; ಟ್ರಂಪ್’ಗೆ ಪ್ರಧಾನಿ ಮೋದಿ ತಿರುಗೇಟು

ನವದೆಹಲಿ: ಭಾರತದ ಮೇಲೆ ದುಪ್ಪಟ್ಟು ತೆರಿಗೆ ಹೇರುವುದಾಗಿ ಅಮೆರಿಕಾ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ಅಮೆರಿಕಾ...

ಅಪ್ಪ, ಮಗನ ಜಗಳ ಬಿಡಿಸಲು ಬಂದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಬರ್ಬರ ಹತ್ಯೆ ಆರೋಪಿಗಳಿಗಾಗಿ ಶೋಧ

ತಮಿಳುನಾಡಿನ ತಿರುಪ್ಪುರ ಜಿಲ್ಲೆಯ ಗುಡಿಮಂಗಲಂನಲ್ಲಿ ಅಪ್ಪ ಮತ್ತು ಮಗನ ನಡುವೆ ನಡೆಯುತ್ತಿದ್ದ ಜಗಳ ಬಿಡಿಸಲು ಹೋದ...