“ಕರ್ನಾಟಕ ವಿಧಾನಸಭೆಯು ಸೋಮವಾರ 18 ಬಿಜೆಪಿ ಶಾಸಕರ ಅಮಾನತು ರದ್ದತಿ ನಿರ್ಧಾರವನ್ನು ಅಂಗೀಕರಿಸಿದೆ. ಈ ಸಂಬಂಧ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು ಇಂದು ವಿಧಾಸಭೆಯಲ್ಲಿ ನಿರ್ಣಯ ಮಂಡಿಸಿದರು
, ಇದನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಮೇ 25 ರಂದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರೊಂದಿಗಿನ ಸಭೆಯ ನಂತರ ಸ್ಪೀಕರ್ ಯು ಟಿ ಖಾದರ್ ಅವರು 18 ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸುವುದಾಗಿ ಘೋಷಿಸಿದ್ದರು.
ಮಾರ್ಚ್‌ನಲ್ಲಿ ನಡೆದ 6ನೇ ಅಧಿವೇಶನದಲ್ಲಿ 18 ಬಿಜೆಪಿ ಸದಸ್ಯರನ್ನು ಸದನದಿಂದ 6 ತಿಂಗಳ ಕಾಲ ಅಮಾನತುಗೊಳಿಸುವ ನಿರ್ಣಯವನ್ನು ಮೇ 25 ರಿಂದ ಜಾರಿಗೆ ಬರುವಂತೆ ಹಿಂಪಡೆಯಲು ಎಚ್ ಕೆ ಪಾಟೀಲ್ ಅವರು ವಿಧಾನಸಭೆಯ ಅನುಮೋದನೆ ಕೋರುವ ಪ್ರಸ್ತಾವನೆ ಮಂಡಿಸಿದರು.
ನಂತರ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರು ಪ್ರಸ್ತಾವವನ್ನು ಮತಕ್ಕೆ ಹಾಕಿದಾಗ, ಧ್ವನಿಮತದ ಮೂಲಕ ಅನುಮೋದನೆ ಪಡೆಯಲಾಯಿತು. ಬಿಜೆಪಿ ಶಾಸಕರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಮುನಿರತ್ನ, ಬೈರತಿ ಬಸವರಾಜ್, ಎಸ್.ಆರ್.ವಿಶ್ವನಾಥ್, ದೊಡ್ಡನಗೌಡ ಪಾಟೀಲ್, ಚನ್ನಬಸಪ್ಪ, ಉಮಾನಾಥ್ ಕೋಟ್ಯಾನ್,
ಎಂ.ಆರ್.ಪಾಟೀಲ್, ಡಾ.ಭರತ್ ಶೆಟ್ಟಿ, ಬಿ.ಪಿ.ಹರೀಶ್, ದೀರಜ್ ಮುನಿರಾಜು, ಡಾ.ಚಂದ್ರುಲಮಾಣಿ, ಶರಣು ಸಲಗಾರ್, ಬಸವರಾಜ್ ಮತ್ತಿಮೋಡ್ ಸೇರಿದಂತೆ 18 ಶಾಸಕರನ್ನು ಅಮಾನತು ಮಾಡಲಾಗಿತ್ತು.
Leave a comment