ಧರ್ಮಸ್ಥಳ ಪ್ರಕರಣ ರಾಷ್ಟ್ರಿಯ ಮಾನವ ಹಕ್ಕುಗಳ ಆಯೋಗ ಅಧಿಕಾರಿಗಳಿಂದ ಧರ್ಮಸ್ಥಳ ಪ್ರದೇಶಗಳಲ್ಲಿ ಮಾಹಿತಿ ಸಂಗ್ರಹ

66

“ಧರ್ಮಸ್ಥಳದಲ್ಲಿ ಸಾಮೂಹಿಕವಾಗಿ ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪ ಕುರಿತಂತೆ ಇದೀಗ ಮಾನವ ಹಕ್ಕಗಳ ಆಯೋಗವೂ ತನಿಖೆ ಆರಂಭಿಸಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳಕ್ಕೆ ಆಗಮಿಸಿದ ನಾಲ್ವರು ಸದಸ್ಯರನ್ನೊಳಗೊಂಡ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಂಗಳವಾರ ತನಿಖೆ ಆರಂಭಿಸಿದೆ.
ಈ ಸಂಬಂಧ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿರುವ ಆಯೋಗ, ಧರ್ಮಸ್ಥಳದ ದೇವಾಲಯದ ಆವರಣ, ಗ್ರಾಮ ಪಂಚಾಯಿತಿ ಕಚೇರಿ, ಸ್ಥಳೀಯ ಪೊಲೀಸ್ ಕಚೇರಿ, ಎಸ್ ಐ ಟಿ   ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ತನಿಖೆ ಪರಿಶೀಲನೆ ನಡೆಸಿತು.
ಆರಂಭಿಕವಾಗಿ ಹಿರಿಯ ಪೊಲೀಸ್ ಅಧೀಕ್ಷಕ ಯುವರಾಜ್ ನೇತೃತ್ವದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ  ತಂಡವು ದಶಕಗಳ ಕಾಲದ ಅಸಹಜ ಸಾವಿನ ಪ್ರಕರಣಗಳ ದಾಖಲೆಗಳನ್ನು ಸಂಗ್ರಹಿಸಿದೆ.

ಪೌರ ಕಾರ್ಮಿಕರು ಮತ್ತಿತರ ಸಂಬಂಧಿತ ವ್ಯಕ್ತಿಗಳು ಹೇಳಿಕೆಗಳನ್ನು ಒದಗಿಸಿದ್ದಾರೆ. ಈ ತನಿಖೆ ನಾಲ್ಕೈದು ದಿನಗಳ ಕಾಲ ನಡೆಯುವ ನಿರೀಕ್ಷೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತಿಭಟನೆ ಧರ್ಮಸ್ಥಳದ ನೇತ್ರಾ ನದಿ ದಡದಲ್ಲಿ ಅನೇಕ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಶವಗಳನ್ನು ನನ್ನಿಂದ ಬಲವಂತವಾಗಿ ಹೂಳಿಸಲಾಗಿದೆ ಎಂಬ ಅನಾಮಿಕ ಸಾಕ್ಷಿದಾರನ ಹೇಳಿಕೆ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ.

Leave a comment

Leave a Reply

Your email address will not be published. Required fields are marked *

Related Articles

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...