ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು ಆದೇಶ ಸುಪ್ರೀಂ ಕೋರ್ಟ್,

6
ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರ ಪೀಠವು ಕರ್ನಾಟಕ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿ, ಅದು ವಿವಿಧ ದೋಷಗಳಿಂದ ಕೂಡಿದೆ ಎಂದು ಹೇಳಿದೆ.


ನಾವು ಎಲ್ಲವನ್ನೂ ಪರಿಗಣಿಸಿದ್ದೇವೆ. ಜಾಮೀನು ಮಂಜೂರು ಮತ್ತು ರದ್ದತಿ ಎರಡೂ ವಿಷಯದಲ್ಲಿ ಹೈಕೋರ್ಟ್ ಆದೇಶವು ಗಂಭೀರ ದೌರ್ಬಲ್ಯಗಳಿಂದ ಕೂಡಿದೆ ಎಂಬುದು ಸ್ಪಷ್ಟವಾಗಿದೆ, ಯಾಂತ್ರಿಕವಾಗಿ ತೀರ್ಪು ನೀಡಲಾಗಿದೆ. ಮೇಲಾಗಿ, ಹೈಕೋರ್ಟ್ ವಿಚಾರಣೆಯ ಪೂರ್ವ ಹಂತದಲ್ಲಿ ತೀರ್ಪು ನೀಡಲಾಗಿದೆ ಎಂದು ಹೇಳಿದೆ.

ಸುಪ್ರೀಂ ಕೋರ್ಟ್ ಹೇಳಿದ್ದೇನು? ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ.
ಜೈಲು ಸೂಪರಿಂಟೆಂಡ್ನನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಈ ತೀರ್ಪು ಲ್ಯಾಂಡ್ ಮಾರ್ಕ್ ತೀರ್ಪೆಂದ ಸುಪ್ರೀಂ ಕೋರ್ಟ್ ಹೇಳಿದೆ. ತಕ್ಷಣವೇ ದರ್ಶನ್ ಹಾಗೂ ಇತರ ಆರೋಪಿಗಳನ್ನು ಜೈಲಿಗೆ ಕಳುಹಿಸಬೇಕೆಂದು ಆದೇಶ ಬಂದಿದೆ.

ದರ್ಶನ್ ಜೈಲಿಗೆ ಕಳೆದ ವರ್ಷ ಜೂನ್ 11ರಂದು ದರ್ಶನ್ ರೇಣುಕಾಸ್ವಾಮಿ ಹತ್ಯೆ ಕೇಸಿನಲ್ಲಿ ಮೈಸೂರಿನಲ್ಲಿ ಬಂಧನಕ್ಕೆ ಒಳಗಾದರು. ಆ ಬಳಿಕ ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರಬಂದರು.

ಡಿಸೆಂಬರ್ನಲ್ಲಿ ಅವರಿಗೆ ಸಂಪೂರ್ಣ ಜಾಮೀನು ದೊರೆಯಿತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಿತ್ತು. ಈ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ಮಾತ್ರ ಸೂಕ್ತ ವೇದಿಕೆ. ವಿಧಿವಿಜ್ಞಾನ ಸಾಕ್ಷ್ಯಗಳೊಂದಿಗೆ ಸೇರಿಕೊಂಡು ಸುಸ್ಥಾಪಿತ ಆರೋಪಗಳು ಜಾಮೀನು ರದ್ದತಿಯನ್ನು ಮತ್ತೆ ಜಾರಿಗೆ ತರುತ್ತವೆ, ಅರ್ಜಿದಾರರಿಗೆ ಜಾಮೀನು ರದ್ದುಗೊಂಡಿದೆ ಎಂದು ಪೀಠ ಹೇಳಿದೆ.

ದರ್ಶನ್ ಮತ್ತು ಸಹ-ಆರೋಪಿಗಳಿಗೆ ಕಳೆದ ವರ್ಷ ಡಿಸೆಂಬರ್ 13ರಂದು ಹೈಕೋರ್ಟ್ ನೀಡಿದ ಜಾಮೀನು ಆದೇಶದ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿದ ಮೇಲ್ಮನವಿಯ ಮೇರೆಗೆ ತೀರ್ಪು ಬಂದಿದೆ. ಪವಿತ್ರಾ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ 33 ವರ್ಷದ ರೇಣುಕಾಸ್ವಾಮಿ ಎಂಬ ದರ್ಶನ್ ಅಭಿಮಾನಿಯನ್ನು ಅಪಹರಿಸಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ಆರೋಪ ದರ್ಶನ್, ನಟಿ ಪವಿತ್ರಾ ಗೌಡ ಮತ್ತು ಇತರ ಹಲವರ ಮೇಲಿದೆ.
ಕಳೆದ ವರ್ಷ ಜೂನ್ 8ರಂದು ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ ಬೆಂಗಳೂರಿನ ಶೆಡ್‌ನಲ್ಲಿ ಮೂರು ದಿನಗಳ ಕಾಲ ಬಂಧಿಸಿ, ಚಿತ್ರಹಿಂಸೆ ನೀಡಿ ಹತ್ಯೆ ಮಾಡಿ ಶವವನ್ನು ಚರಂಡಿಯಲ್ಲಿ ಎಸೆದು ಹೋಗಿದ್ದರು.

ನಂತರ ಶವ ಸಿಕ್ಕಿತ್ತು ಎಂದು ಪೊಲೀಸರು ಕೋರ್ಟ್ ಗೆ ತಿಳಿಸಿದ್ದರು. ರಾಜ್ಯ ಸರ್ಕಾರದ ಮನವಿಯ ಮೇರೆಗೆ ಜನವರಿ 24 ರಂದು ಸುಪ್ರೀಂ ಕೋರ್ಟ್ ನಟ ದರ್ಶನ್, ಪವಿತ್ರಾ ಗೌಡ ಮತ್ತು ಪ್ರಕರಣದಲ್ಲಿ ಇತರರಿಗೆ ನೋಟಿಸ್ ಜಾರಿ ಮಾಡಿತ್ತು.

ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಸಹಚರರಿಗೆ ನೀಡಿದ್ದ ಜಾಮೀನು ರದ್ದುಗೊಳಿಸಿದ್ದು, ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮ ಎಂಬ ಸಂದೇಶ ಸಾರುತ್ತದೆ ಎಂದು ಸರ್ಕಾರಿ ಪರ ವಕೀಲರು ಸಂತಸ ವ್ಯಕ್ತಪಡಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಧರ್ಮ ರಾಜಕಾರಣಕ್ಕಾಗಿ ಬಿಜೆಪಿಯವರಿಗೆ ಧರ್ಮಸ್ಥಳ ಬೇಕು ಬಿಜೆಪಿ ವಿರುದ್ಧ ::ಡಿ ಕೆ ಶಿವಕುಮಾರ್ ಆಕ್ರೋಶ

ಬೆಂಗಳೂರು: ಮುಸುಕುಧಾರಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ...

ಪಂಚಾಯತ್ ಅಧ್ಯಕ್ಷರ ಸದಸ್ಯರ ಗೌರವಧನ ಹೆಚ್ಚಳಕ್ಕೆ ಮನವಿ ಶ್ರೀ ಮಂಜುನಾಥ್ ಭಂಡಾರಿರವರ ಪಂಚಾಯತ್ ಸದಸ್ಯರ ಹಾಗೂ ಸಿಬ್ಬಂದಿಗಳ ಪರವಾದ ಕಾಳಜಿ ಶ್ಲಾಘನೀಯ: ನವೀನ್ ಸಾಲ್ಯಾನ್

ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ತಿನ ಮಾನ್ಯ ಶಾಸಕರಾದ ಶ್ರೀಯುತ ಮಂಜುನಾಥ್...

ಅಗಸ್ಟ್ 15 ರಿಂದ ಮುಜರಾಯಿ ಇಲಾಖೆ ಅಧೀನ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಸಚಿವ ರಾಮಲಿಂಗ ರೆಡ್ಡಿ

“ಆಗಸ್ಟ್ 15 ರಿಂದ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು...

ಸಿದ್ದರಾಮಯ್ಯ ಬಾದಾಮಿ ಚುನಾವಣೆ ಯಲ್ಲಿ ಜಯಗಳಿಸಲು 3ಸಾವಿರ ಮತ ಖರೀದಿ ಆರೋಪ ಚುನಾವಣಾ ಆಯೋಗಕ್ಕೆ ದೂರು

2018ರ ರಾಜ್ಯ ವಿಧಾನಸಭೆಯ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಗೆಲುವನ್ನು ಖಚಿತಪಡಿಸಿಕೊಳ್ಳಲು...