ರಾಜ್ಯದಲ್ಲಿ ವರುಣನ ಆರ್ಭಟ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

5

ಬೆಂಗಳೂರು: ಕೊಡಗು, ಮಲೆನಾಡು, ಉತ್ತರ ಕರ್ನಾಟಕ, ಕರಾವಳಇ ಸೇರಿದಂತೆ ರಾಜ್ಯದಾದ್ಯಂತ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ನಿರಂತರ ಮಳೆಯಿಂದಾಗಿ ರಾಜ್ಯದ ಹಲವು ನದಿಗಳು, ಜಲಾಶಯಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದೆ.

ವರುಣನ ಅಬ್ಬರಕ್ಕೆ ಬೆಳಗಾವಿ ಜಿಲ್ಲೆಯ ಹಲವಾರು ಸೇತುವೆಗಳು ಮುಳುಗಡೆಯಾಗಿದ್ದು, ಗದಗ ಜಿಲ್ಲೆಯ ಮಲಪ್ರಭಾ ಜಲಾನಯನ ಪ್ರದೇಶದ ಅನೇಕ ಹಳ್ಳಿಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಮಂಡ್ಯ ಜಿಲ್ಲಾಡಳಿತವು ರೈತರಿಗೆ ನದಿ ಜಲಾನಯನ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸದಂತೆ ಅಥವಾ ನದಿ ದಂಡೆಯ ಬಳಿ ಜಾನುವಾರುಗಳನ್ನು ಬಿಡದಂತೆ ಸೂಚಿಸಿದೆ.

ಬೆಳಗಾವಿ ಜಿಲ್ಲೆಯಲ್ಲಿ ಸೇತುವೆಗಳು ಮತ್ತು ರಸ್ತೆಗಳು ಜಲಾವೃತಗೊಂಡಿದ್ದು, ಹಲವಾರು ಹಳ್ಳಿಗಳಿಗೆ ಸಂಪರ್ಕ ಕಡಿತಗೊಂಡಿದೆ. ಮಹಾರಾಷ್ಟ್ರವು ತನ್ನ ಜಲಾಶಯಗಳಿಂದ ಹೊರಹರಿವು ಹೆಚ್ಚಿಸಿದ್ದರಿಂದ ಕೃಷ್ಣಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ, ಚಿಕ್ಕೋಡಿ ತಾಲ್ಲೂಕು ಅತ್ಯಂತ ಹಾನಿಗೊಳಗಾಗಿದೆ. ಕಳೆದ ಎರಡು ದಿನಗಳಲ್ಲಿ ಕನಿಷ್ಠ ಎಂಟು ಸೇತುವೆಗಳು ಮುಳುಗಡೆಯಾಗಿದ್ದು, 16 ಪ್ರವಾಹ ಪೀಡಿತ ಗ್ರಾಮಗಳು ರಸ್ತೆ ಸಂಪರ್ಕವನ್ನು ಕಳೆದುಕೊಂಡಿವೆ.


ಕೃಷ್ಣಾ ನದಿಯಲ್ಲಿ 67,000 ಕ್ಯೂಸೆಕ್ ಒಳಹರಿವು ದಾಖಲಾಗಿದ್ದರೆ, ಘಟಪ್ರಭಾ ನದಿಯಲ್ಲಿ 38,000 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಈ ನಡುವೆ ಜಿಲ್ಲಾಡಳಿತ ಮಂಡಳಿಯು ಸೋಮವಾರ ಮತ್ತು ಮಂಗಳವಾರ ಬೆಳಗಾವಿ, ಸವದತ್ತಿ, ಬೈಲಹೊಂಗಲ, ಕಿತ್ತೂರು, ರಾಮದುರ್ಗ, ಖಾನಾಪುರ ಮತ್ತು ಹುಕ್ಕೇರಿ ತಾಲ್ಲೂಕುಗಳಲ್ಲಿನ ಶಾಲೆಗಳು, ಅಂಗನವಾಡಿಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಿದೆ.

ಇನ್ನು ಘಟಪ್ರಭಾ ಮತ್ತು ಹಿರಣ್ಯಕೇಶಿ ನದಿಗಳ ದಡದಲ್ಲಿ ವಾಸಿಸುವ ನಿವಾಸಿಗಳು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಅಧಿಕಾರಿಗಳು ಒತ್ತಾಯಿಸಿದ್ದಾರೆ. ಅಲ್ಲದೆ, ಹುಕ್ಕೇರಿ ತಾಲ್ಲೂಕಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಕೆಆರ್‌ಎಸ್‌ನಿಂದ 1.2 ಲಕ್ಷ ಕ್ಯೂಸೆಕ್‌ ನೀರು ಬಿಡುಗಡೆ ಇನ್ನು ಮಂಡ್ಯದಲ್ಲಿ, ಕೃಷ್ಣರಾಜಸಾಗರ (ಕೆಆರ್‌ಎಸ್) ಜಲಾಶಯದ ಮಟ್ಟ ಏರುತ್ತಲೇ ಇದ್ದು. ಸೋಮವಾರ ಮಧ್ಯಾಹ್ನದ ವೇಳೆಗೆ, ಕಾವೇರಿ ನೀರಾವರಿ ನಿಗಮ ಲಿಮಿಟೆಡ್ ಅಧಿಕಾರಿಗಳು ಅಣೆಕಟ್ಟಿನಿಂದ 1.20 ಲಕ್ಷ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಿದ್ದಾರೆಂದು ತಿಳಿದುಬಂದಿದೆ.

ಬೆಳಿಗ್ಗೆ 10 ಗಂಟೆ ಸುಮಾರಿಗೆ, 80,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಜಲಾಗಿದ್ದು, ನಂತರ ಒಳಹರಿವಿನಿಂದ ನೀರಿನ ಮಟ್ಟವನ್ನು ಹೆಚ್ಚಿಸಲಾಯಿತು. ಈ ನಡುವೆ ಕಾವೇರಿ ನದಿ ದಂಡೆ ಮತ್ತು ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಜಾಗರೂಕರಾಗಿರಲು ಮತ್ತು ಅಗತ್ಯ ಎದುರಾದರೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಸೂಚನೆ ನೀಡಿದ್ದಾರೆ.

ನದಿಯ ಹತ್ತಿರ ಕೃಷಿ ಚಟುವಟಿಕೆಗಳನ್ನು ನಡೆಸದಂತೆ ಅಥವಾ ಜಾನುವಾರುಗಳನ್ನು ಈ ಪ್ರದೇಶಗಳಿಗೆ ಬಿಡದಂತೆ ರೈತರಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಸೇತುವೆಗಳು ಮತ್ತು ಪ್ರವಾಸಿ ತಾಣಗಳಿಗೆ ಭೇಟಿ ನೀಡದಂತೆ, ಹಾಗೆಯೇ ನೀರಿನ ಬಳಿ ಈಜುವುದು ಅಥವಾ ಸೆಲ್ಫಿ ತೆಗೆದುಕೊಳ್ಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಇದಲ್ಲದೆ, ಆಡಳಿತ ಮಂಡಳಿಯು ದುರ್ಬಲ ಸ್ಥಳಗಳಲ್ಲಿ ಎಚ್ಚರಿಕೆ ಫಲಕಗಳನ್ನೂ ಹಾಕಿದೆ. ನವಿಲುತೀರ್ಥ ಅಣೆಕಟ್ಟಿನಿಂದ ಹೊರಹರಿವು ಹೆಚ್ಚಾದ ಕಾರಣ ಮಲಪ್ರಭಾ ಜಲಾನಯನ ಪ್ರದೇಶದ ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಂಡರು.

ಅಣೆಕಟ್ಟಿನ ನೀರಿನ ಮಟ್ಟವು 2,079.50 ಅಡಿಗಳಿದ್ದು, ಈಗಾಗಲೇ 2,077.30 ಅಡಿ ತಲುಪಿದೆ. ಅಣೆಕಟ್ಟಿನ ಒಳಹರಿವು 7,000 ಕ್ಯೂಸೆಕ್ ಆಗಿದೆ.

ಏತನ್ಮಧ್ಯೆ ಮಲಪ್ರಭಾ ನದಿಗೆ ಹೊರಹರಿವು ಹೆಚ್ಚಾದಂತೆ ರೋಣ ಮತ್ತು ನರಗುಂದ ತಾಲ್ಲೂಕುಗಳ ಹಲವಾರು ಗ್ರಾಮಗಳು ದ್ವೀಪಗಳಂತೆ ಪರಿವರ್ತನೆಗೊಳ್ಳುತ್ತಿವೆ. ಬೆನ್ನಿಹಳ್ಳ ನದಿ ಕೂಡ ಉಕ್ಕಿ ಹರಿಯುತತಿದ್ದು, ಪ್ರವಾಹದ ಆತಂಕವನ್ನುಂಟುಮಾಡುತ್ತಿದೆ.

ಗದಗದ ಲಖಮಾಪುರದ ಗ್ರಾಮಕ್ಕೆ ಇರುವ ಏಕೈಕ ಸೇತುವೆ ಶೀಘ್ರದಲ್ಲೇ ಮುಳುಗಡೆಯಾಗಬಹುದಾದ್ದರಿಂದ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ. ಯಾವುದೇ ತುರ್ತು ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ವಿಶೇಷ ತಂಡಗಳನ್ನು ರಚನೆ ಮಾಡಿದೆ. ಶಿರೋಳ್ ಗ್ರಾಮದ ನಿವಾಸಿ ವೀರೇಶ್ ಪತ್ತಾರ್ ಮಾತನಾಡಿ, ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಂಡಿದ್ದೇವೆ,

ಆದರೆ ಅನೇಕ ರೈತರು ತಮ್ಮ ಬೆಳೆಗಳನ್ನು ಕಳೆದುಕೊಂಡಿದ್ದಾರೆಂದು ಹೇಳಿದ್ದಾರೆ. ಏತನ್ಮಧ್ಯೆ, ಹೊಸಪೇಟೆಯ ತುಂಗಭದ್ರಾ ಜಲಾಶಯ ಮತ್ತು ನಾರಾಯಣಪುರದ ಬಸವ ಸಾಗರ ಅಣೆಕಟ್ಟಿನಿಂದ ಹೊರಹರಿವು ಸೋಮವಾರ ಹೆಚ್ಚಾಗಿದೆ. ಇದರಿಂದಾಗಿ ಕೃಷ್ಣಾ ಮತ್ತು ತುಂಗಭದ್ರಾ ನದಿಯ ಕೆಳಭಾಗದ ಹಳ್ಳಿಗಳಲ್ಲಿ ಪ್ರವಾಹ ಉಂಟಾಗುವ ಭೀತಿ ಉಂಟಾಗಿದೆ.

ಸೋಮವಾರ ಸಂಜೆಯಿಂದ ತುಂಗಭದ್ರಾ ಅಣೆಕಟ್ಟಿನಿಂದ 1,07,325 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದ್ದರೆ, ಬಸವ ಸಾಗರ ಅಣೆಕಟ್ಟಿನಿಂದ 1,40,890 ಕ್ಯೂಸೆಕ್ ನೀರು ಬಿಡುಗಡೆಯಾಗಿದೆ. ಶಿವಮೊಗ್ಗ ಜಿಲ್ಲಾಡಳಿತ ಸೋಮವಾರ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿದೆ.

Leave a comment

Leave a Reply

Your email address will not be published. Required fields are marked *

Related Articles

ವರುಣನ ಆರ್ಭಟ ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸಲು ಸರಕಾರಕ್ಕೆ ಮನವಿ ಸಲ್ಲಿಸಿದ –ಮಲ್ಲಿನಾಥ್ ನಾಗನಹಳ್ಳಿ

ಕಲಬುರ್ಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ ಮತಕ್ಷೇತ್ರದ ಗ್ರಾಮಗಳಲ್ಲಿ ನಿರಂತರ...

ದಲಿತರಿಗೆ ಒಳ ಮೀಸಲಾತಿ ಘೋಷಿಸಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ

“ರಾಜ್ಯದ ದಲಿತ ಸಮುದಾಯದ ಬಹುಕಾಲದ ಬೇಡಿಕೆಯಾದ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ಸಹಿಸುದ್ದಿ ನೀಡಿದ್ದು,...

ಕೇಸರಿ ಬಟ್ಟೆ ಧರಿಸಿ ಮಾಂಸಹಾರ ಸೇವಿಸಿದ ಯುವಕನ ಮೇಲೆ ಹಲ್ಲೆ ವಿಡಿಯೋ ವೈರಲ್

“ಕೇಸರಿ ಬಟ್ಟೆ ಧರಿಸಿ ಮಾಂಸಾಹಾರ ಸೇವಿಸಿದ್ದಕ್ಕೆ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ...

ಬೆಂಗಳೂರು ನೂತನವಾಗಿ ಐದು ನಗರ ಪಾಲಿಕೆ ರಚನೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ಬೆಂಗಳೂರು: 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆ ಮಂಗಳವಾರ ಅಂಗೀಕರಿಸಿತು. ಬೆಂಗಳೂರು...