
ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ನ್ನು ವಿಧಾನ ಪರಿಷತ್ತಿನಲ್ಲಿ ಇಂದು ಅಂಗೀಕರಿಸಲಾಗಿದೆ
. ವಿಧಾನಸಭೆಯಲ್ಲಿ ಅಂಗೀಕೃತ ಸ್ವರೂಪದಲ್ಲಿರುವ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025’ ಅನ್ನು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮೇಲ್ಮನೆಯಲ್ಲಿ ಮಂಡಿಸಿದರು. ಅಲ್ಪಚರ್ಚೆ ಬಳಿಕ ಅನುಮೋದನೆ ನೀಡಲಾಗಿದೆ.
ಸೌಹಾರ್ದ ಸಹಕಾರಿ ಮಂಡಳಿಗಳ ಸದಸ್ಯರು ಪ್ರತಿ ವರ್ಷ ತಮ್ಮ ಕುಟುಂಬದ ಆಸ್ತಿ ವಿವರ ಸಲ್ಲಿಸುವುದನ್ನು ಕಡ್ಡಾಯ ಮಾಡಲು ಸರ್ಕಾರ ತಂದಿದ್ದ ‘ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ಮಸೂದೆ’ಗೆ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ಪಡೆಯುವಲ್ಲಿ ಸರ್ಕಾರಕ್ಕೆ ತೀವ್ರ ಹಿನ್ನಡೆಯುಂಟಾಗಿದೆ. 
ವಿಧಾನಪರಿಷತ್ ನಲ್ಲಿ 23 ಸದಸ್ಯರು ಮಸೂದೆಯನ್ನು ಬೆಂಬಲಿಸಿದರೆ, ಬಿಜೆಪಿ-ಜೆಡಿಎಸ್ ಒಕ್ಕೂಟದ 26 ಎಂಎಲ್‌ಸಿಗಳು ಇದನ್ನು ವಿರೋಧಿಸಿದ್ದರಿಂದ ಅದು ಮೂರು ಮತಗಳಿಂದ ಸೋಲಿಗೆ ಒಳಗಾಯಿತು
Leave a comment