ಪ್ರಧಾನಿ ಮೋದಿಯವರು ದೇಶಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿದರೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಬಿ.ಆರ್ ಪಾಟೀಲ್

62
ಹಾಸನ: ಯುವ ಸಮುದಾಯಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯ ಪ್ರವೃತ್ತಿ ಮತ್ತು ಸಮಾಜದ ಮೇಲೆ, ವಿಶೇಷವಾಗಿ ಬಡವರ ಜೀವನದ ಮೇಲೆ ಅದರ ದುಷ್ಪರಿಣಾಮದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ರಾಜ್ಯ ಯೋಜನಾ ಆಯೋಗದ ಅಧ್ಯಕ್ಷ ಬಿ.ಆರ್. ಪಾಟೀಲ್, ದೇಶಾದ್ಯಂತ ಮದ್ಯ ನಿಷೇಧವನ್ನು ಜಾರಿಗೆ ತರುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ.


ಗುರುವಾರ ಸಕಲೇಶಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪಾಟೀಲ್, “ಪ್ರಧಾನ ಮಂತ್ರಿಗಳು ದೇಶಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿದರೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು
. ಇಂತಹ ಕ್ರಮದಿಂದ ಸಾಮಾನ್ಯ ಜನರು ಹಾಗೂ ಸಮಾಜದ ಹಿತದೃಷ್ಟಿಯಿಂದ ಉತ್ತಮವಾಗಿರುತ್ತದೆ ಎಂದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮದ್ಯ ಸೇವನೆಯ ಹಾನಿಕಾರಕ ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ರಾಷ್ಟ್ರವ್ಯಾಪಿ ಮದ್ಯ ನಿಷೇಧ ನೀತಿಯು ಹೆಚ್ಚು ಪರಿಣಾಮಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮದ್ಯ ಮಾರಾಟವು ರಾಜ್ಯದ ಆದಾಯಕ್ಕೆ ಗಣನೀಯ ಕೊಡುಗೆ ನೀಡುತ್ತಿದ್ದರೂ, ಗ್ರಾಮೀಣ ಪ್ರದೇಶದ ಸಣ್ಣ ಅಂಗಡಿಗಳಲ್ಲಿಯೂ ಸಹ ಮದ್ಯ ಸುಲಭವಾಗಿ ಲಭ್ಯವಿದೆ. ಇದು ಬಡತನಕ್ಕೆ ಪ್ರಾಥಮಿಕ ಕಾರಣವಾಗಿದೆ ಎಂದು ಬಿ.ಆರ್ ಪಾಟೀಲ್ ತಿಳಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಾರ್ಜ್ ಕುರಿಯನ್

“ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಅಂತ್ಯವಾದ...

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...