ರಾಜಕೀಯ ‘ನಾನ್ ಅಡ್ಜಸ್ಟ್‌ಮೆಂಟ್‌’ ರಾಜಕೀಯ ಪಕ್ಷ ಸ್ಥಾಪನೆಯ ಘೋಷಣೆ ಮಾಡಿದ ಯತ್ನಾಳ್!

59

ಬೆಂಗಳೂರು: ಬಿಜೆಪಿಯಿಂದ ಉಚ್ಚಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾನ್ ಅಡ್ಜಸ್ಟ್‌ಮೆಂಟ್‌ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಶುಕ್ರವಾರ ಘೋಷಿಸಿದ್ದಾರೆ.


ರಾಜ್ಯದ ಆರ್ಥಿಕ ಸಂಕಷ್ಟ ಪರಿಸ್ಥಿತಿಯನ್ನು ವಿವರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿಂದಿನ ಬಿಜೆಪಿ ಸರ್ಕಾರವು 2019-23ರ ಅವಧಿಯಲ್ಲಿ ಹಣವಿಲ್ಲದೆ ಮಸೂದೆಗಳನ್ನು ಅಂಗೀಕರಿಸಿದೆ ಎಂದು ಆರೋಪಿಸಿದ ನಂತರ ಯತ್ನಾಳ್ ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಹೇಳಿದರು.



ಸಿದ್ದರಾಮಯ್ಯ ಅವರಿಗೆ ನಮ್ಮಿಬ್ಬರ ಬೆಂಬಲ ಸಿಕ್ಕಿದೆ. ನಿಮ್ಮನ್ನೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಜೆಡಿಎಸ್‌ನಿಂದ ಉಚ್ಚಾಟಿಸಿದ್ದರು. ಹೀಗೆ ಉಚ್ಚಾಟಿಸಲ್ಪಟ್ಟವರು ಮುಂದೊಂದು ದಿನ ಮುಖ್ಯಮಂತ್ರಿಯಾಗುತ್ತಾರೆ ಅಂತಾ ಯತ್ನಾಳ್ ಹೇಳಿದರು. ಇದಕ್ಕೆ ಲಘು ಹಾಸ್ಯದ ದಾಟಿಯಲ್ಲಿ ಪ್ರತಿಕ್ರಿಯಿಸಿದ ಸಿಎಂ, ನೀವೂ ಮುಖ್ಯಮಂತ್ರಿಯಾದ್ರೆ ನನಗೆ ಸಂತೋಷ ಎಂದರು.



ಆದರೆ ಯಾವ ಪಕ್ಷದಿಂದ ಸಿಎಂ ಆಗ್ತೀರಾ? ಎಂದು ಯತ್ನಾಳ್ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ, ಹೊಸ ಪಕ್ಷ ಕಟ್ಟುವಂತೆ ಸೂಚಿಸಿದರು. ಅದಕ್ಕೆ ಉತ್ತರಿಸಿದ ಯತ್ನಾಳ್, ನಾನ್ ಅಡ್ಜಸ್ಟ್‌ಮೆಂಟ್‌ ಪಕ್ಷ ಕಟ್ಟುತ್ತೇನೆ. ಅದು ಬಿಜೆಪಿಯ ಮತಗಳನ್ನು ಕಡಿಮೆ ಮಾಡಿದರೆ ಚಿಂತಿಸಬೇಡಿ. ಇದು ನಿಮಗೆ ಸಹಾಯ ಮಾಡುವುದಿಲ್ಲ ಎಂದು ಹೇಳಿದ್ದಾರೆ.



ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದರೆ ಯತ್ನಾಳ್ ಹೊಸ ಪಕ್ಷ ಆರಂಭಿಸಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಪುತ್ರ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಕುಟುಂಬ ಆಡಳಿತ ಹಾಗೂ ಸಿದ್ದರಾಮಯ್ಯ- ಯಡಿಯೂರಪ್ಪ ಅವರ ಹೊಂದಾಣಿಕೆ ರಾಜಕೀಯ ವಿರುದ್ಧ ವಿರುದ್ಧ ಪದೇ ಪದೇ ಟೀಕೆ ಮಾಡುವ ಮೂಲಕ ಆರು ವರ್ಷಗಳ ಕಾಲ ಬಿಜೆಪಿಯಿಂದ ಯತ್ನಾಳ್ ಉಚ್ಚಾಟಿತರಾಗಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...