ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತು ಬದ್ಧ ಜಾಮೀನು ಮಂಜೂರು! ಧರ್ಮಸ್ಥಳ ಪ್ರಕರಣದಲ್ಲಿ ಮತ್ತೆ ಬಂಧನದ ಭೀತಿ?

54

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಮಹೇಶ್‌ ಶೆಟ್ಟಿ ತಿಮರೋಡಿಗೆ ಇಂದು ಉಡುಪಿ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಇದಕ್ಕೂ ಮುನ್ನ ಉಡುಪಿ ನ್ಯಾಯಾಲಯದಲ್ಲಿ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಪರ ವಾದ ಮಂಡಿಸಿದ ವಕೀಲರು, ಬಂಧಿಸಿದ ಪ್ರಕ್ರಿಯೆ ಕ್ರಮಬದ್ಧವಾಗಿಲ್ಲ.

ಪ್ರಥಮ ನೋಟಿಸ್ ನೀಡಿ ಅದರ ಅವಧಿ ಮುಗಿಯುವ ಮುನ್ನವೇ ಎರಡನೇ ನೋಟಿಸ್ ನೀಡಿದ್ದಾರೆ. ತಿಮರೋಡಿಯವರ ಹೇಳಿಕೆಯಿಂದ ಯಾವುದೇ ಕೋಮು ಗಲಭೆಗಳು ಆಗಿಲ್ಲ. ತಿಮರೋಡಿ ಕೂಡ ಓರ್ವ ಹಿಂದೂ ನಾಯಕ. ಇನ್ನೊಂದು ಧರ್ಮವನ್ನು ಅವರು ದೂಷಿಸಿಲ್ಲ ಎಂದು ಹೇಳಿದರು.
ಈ ವೇಳೆ ಪ್ರತಿವಾದಿಗಳಿಂದ ಆಕ್ಷೇಪ ಮಾಡಲಾಯಿತು. ಆದರೆ, ವಾದ ವಿವಾದ ಆಲಿಸಿದ ನ್ಯಾಯಾಧೀಶ ನಾಗೇಶ್, ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ. ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿ ಜಾಮೀನು ನೀಡಲಾಗಿದೆ

  ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಆ.21ರಂದು ಬ್ರಹ್ಮಾವರ ಪೊಲೀಸರು ಬಂಧಿಸಿದ್ದರು. ಇದಾದ ನಂತರ ಮಹೇಶ ಶೆಟ್ಟಿ ತಿಮರೋಡಿ ಸಲ್ಲಿಸಿದ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ ಆಗಸ್ಟ್ 23ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು.
ಇಂದು ಪುನಃ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ 2 ಗಂಟೆಗಳ ಕಾಲ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರ ವಿಚಾರಣೆಗೆ ಒಪ್ಪಿಸಿ ಕಾಲಾವಕಾಶ ನೀಡಿತ್ತು.

ಪೊಲೀಸರು ವಿಚಾರಣೆ ನಡೆಸಿದ ನಂತರ ಪುನಃ ಕೋರ್ಟ್ ಮುಂದೆ ಹಾಜರುಪಡಿಸಿದಾಗ ಎರಡೂ ಕಡೆ ವಕೀಲರ ವಾದ ಆಲಿಸಿದ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಮತ್ತೊಂದೆಡೆ ಧರ್ಮಸ್ಥಳ ಪ್ರಕರಣದಲ್ಲಿ ಮಹೇಶ್ ತಿಮರೋಡಿ ಮನೆಯಲ್ಲಿ ನಾಲ್ಕು ದಿನಗಳ ಕಾಲ ನಾನು ಇದ್ದಿದ್ದು ನಿಜ ಎಂದು ಸುಜಾತ್ ಭಟ್ ಹೇಳಿಕೆ ನೀಡಿದ್ದು, ಇದರಲ್ಲಿ ಮತ್ತೆ ಬಂಧನಕ್ಕೊಳಗಾಗುವ ಸಾಧ್ಯತೆಯೂ ಇದೆ.

Leave a comment

Leave a Reply

Your email address will not be published. Required fields are marked *

Related Articles

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್...

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...