ನನ್ನ ರಾಜಕೀಯ ಜೀವನದಲ್ಲಿ ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ:: ಕೇಂದ್ರ ಸಚಿವ ವಿ ಸೋಮಣ್ಣ

66

ತುಮಕೂರು: ಸ್ವತಃ ದೇವರೇ ಹೇಳಿದ್ರೂ ನಾನು ಮತ್ತೆ ಚುನಾವಣೆಗೆ ನಿಲ್ಲಲ್ಲ ಎಂದು ಹೇಳುವ ಮೂಲಕ ಕೇಂದ್ರ ಸಚಿವ ವಿ.ಸೋಮಣ್ಣ ರಾಜಕೀಯ ನಿವೃತ್ತಿ ಮಾತುಗಳನ್ನಾಡಿದ್ದಾರೆ. ತುಮಕೂರು ಜಿಲ್ಲಾಭಿವೃದ್ಧಿ ವಿಚಾರದ ಕುರಿತು ಮಾತನಾಡುವ ಸಂದರ್ಭದಲ್ಲಿ ವಿ.ಸೋಮಣ್ಣ, ಮತ್ತೆ ಚುನಾವಣೆಗೆ ನಿಂತ್ಕೊ ಅಂತ ದೇವರು ಬಂದು ಹೇಳಿದರು ನಾನು ಕೇಳುವನಲ್ಲ ಎಂದು ಹೇಳಿದರು.

ತುಮಕೂರು ಜಿಲ್ಲೆಯ ಅಭಿವೃದ್ಧಿ ಬಗ್ಗೆ ವಿವರಿಸಿದ ಸೋಮಣ್ಣ, ಕೇಂದ್ರ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಹಾಗೂ ತುಮಕೂರು ಜಿಲ್ಲಾಭಿವೃದ್ಧಿ ವಿಚಾರದ ಬಗ್ಗೆ ಮಾತನಾಡಿ, ತುಮಕೂರು-ಬೆಂಗಳೂರು ನಾಲ್ಕು ಪಥದ ರೈಲ್ವೆ. ಸರ್ವೆ ಆಯ್ತು ಡಿಪಿಆರ್ ಶುರು ಮಾಡಿಸಿದ್ದೀನಿ. ಇದರ ಜೊತೆಗೆ ಎನ್‌ಹೆಚ್4ರ ತಿಮ್ಮರಾಜನಹಳ್ಳಿ ಅಭಿವೃದ್ಧಿ ಆಗುತ್ತದೆ

. ಕೆಐಡಿಬಿಯವರ ಜೊತೆ ಮಾತನಾಡಿದ್ದೇನೆ ಎಂದರು. ಇನ್ನೊಂದು ಐವತ್ತು ವರ್ಷಕ್ಕೆ ತೊಂದರೆ ಆಗಬಾರದು. ನಾನು ಇನ್ನು ಐವತ್ತು ವರ್ಷ ಇರ್ತೀನೇನಪ್ಪಾ ಎಂದು ಸುದ್ದಿಗೋಷ್ಠಿ ಮಧ್ಯೆಯೇ ತಮಾಷೆ ಮಾಡಿದರು. ಇಂತಹ ಅಭಿವೃದ್ಧಿ ಕೆಲಸಗಳೆಲ್ಲಾ ನಮ್ಮ ರಾಜಕೀಯ ಜೀವನದಲ್ಲಿ ಹೆಜ್ಜೆ ಗುರುತು ಎಂದು ತಿಳಿಸಿದರು.
ಕರ್ನಾಟಕ ರತ್ನ, ತ್ರಿವಿಧ ದಾಸೋಹಿಗಳು, ಶ್ರೇಷ್ಠ ಸಂತರು ಹಾಗೂ ಶ್ರೀ ಸಿದ್ದಗಂಗಾ ಮಠದ ಪರಮಪೂಜ್ಯರಾದ ಶ್ರೀ ಶ್ರೀ ಡಾ. ಶಿವಕುಮಾರ ಮಹಾಸ್ವಾಮೀಜಿಗಳವರ ಹೆಸರನ್ನು ತುಮಕೂರು ವಿಶ್ವವಿದ್ಯಾಲಯಕ್ಕೆ ನಾಮಕರಣ ಮಾಡುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು, ರಾಜ್ಯದ ಗೃಹ ಮಂತ್ರಿಗಳು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ್ ಅವರಿಗೆ ಪತ್ರ ಬರೆದು ವಿನಂತಿಸಿಕೊಂಡಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...