ಡಿಕೆ ಶಿವಕುಮಾರ್ ಮಹಾನ್ ಕಲಾವಿದ ಕ್ಷಣ ಕ್ಷಣಕ್ಕೂ ಬಣ್ಣ ಬದಲಾಯಿಸುತ್ತಾರೆ ಅವರ ನಟನೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಡಿ ಬಿ ವೈ ವಿಜಯೇಂದ್ರ

74

“ಕಾಂಗ್ರೆಸ್ ರಾಜ್ಯ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸಭೆಯಲ್ಲಿ ‘ಆರ್‌ಎಸ್‌ಎಸ್’ ಗೀತೆ ಹಾಡಿರುವುದು ವ್ಯಾಪಕ ಚರ್ಚೆ ಹಾಗೂ ಅಚ್ಚರಿಗೆ ಕಾರಣವಾಗಿದೆ.

ವಿಧಾನಸಭೆ ಕಲಾಪದ ವೇಳೆ ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ 11 ಜನರ ಸಾವಿಗೆ ಕಾರಣವಾದ ಕಾಲ್ತುಳಿತದ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಎಂಬ ಆರ್‌ಎಸ್‌ಎಸ್ ಗೀತೆಯ ಮೊದಲ ಕೆಲವು ಸಾಲುಗಳನ್ನು ಡಿ.ಕೆ ಶಿವಕುಮಾರ್ ಹಾಡಿರುವುದು ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಈ ಕುರಿತು ಸುದ್ದಿಸಂಸ್ಥೆ ಎಎನ್ ಐ ಜೊತೆಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಡಿಕೆ ಶಿವಕುಮಾರ್ ‘ಮಹಾನ್ ಕಲಾವಿದ’ ಎಂದಿದ್ದಾರೆ.
ವಿಧಾನಸಭೆಯ ಒಳಗಡೆ ಹಾಗೂ ಹೊರಗಡೆ ಮಾತನಾಡುವುದರಲ್ಲಿ ಅವರು ಎಕ್ಸ ಪರ್ಟ್ ಆಗಿದ್ದಾರೆ. ಇದನ್ನು ಅವರಿಂದ ನಾವು ಪಾಠ ಕಲಿಯಬೇಕಾದ ಅಗತ್ಯವಿದೆ. ಅವರು ಆರ್ ಎಸ್ ಎಸ್ ಗೀತೆ ಹಾಡಿದ್ದಾರೆ. ಆದರೆ ಅವರನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ.


Leave a comment

Leave a Reply

Your email address will not be published. Required fields are marked *

Related Articles

ಕಾಂಗ್ರೆಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದೆ ಜನರ ತೀರ್ಪು ಗೌರವಿಸಿ 2 ವರ್ಷ ಶಾಸಕರಾಗಿ ಕೆಲಸ ಮಾಡಲು ಜೀವರಾಜ್ ಅವರಿಗೆ ಅವಕಾಶ ನೀಡಬೇಕು’: ಬಿ ವೈ ವಿಜಯೇಂದ್ರ

ಬೆಂಗಳೂರು: 2023ರಲ್ಲಿ ಪರಾಭವಗೊಂಡಾಗಲೇ ಡಿ ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರೆಗೆ...

ಪಂಚ ರಾಜ್ಯ ಚುನಾವಣೋತ್ತರ ಸಮೀಕ್ಷೆ: ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬಹುಮತ ತಮಿಳುನಾಡು ಡಿ ಎಂ ಕೆ ಕೇರಳ ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ??

ನವದೆಹಲಿ: ಬುಧವಾರ ನಡೆದ ಹಲವಾರು ಚುನಾವಣೋತ್ತರ ಸಮೀಕ್ಷೆಗಳು ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಮತ್ತು ಪಶ್ಚಿಮ...

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...