ಗುರುವಾಯೂರ್ ಮುಸ್ಲಿಂ ಮಹಿಳೆ ದೇವಸ್ಥಾನಕ್ಕೆ ಪ್ರವೇಶ ನಾಳೆ ದೇವಸ್ಥಾನ ಶುದ್ಧೀಕರಣ ಮಧ್ಯಾಹ್ನದವರೆಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

89

“ಮುಸ್ಲಿಂ ಮಹಿಳೆಯೊಬ್ಬರು ಪ್ರವೇಶಿಸಿದ್ದಕ್ಕೆ ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಗುರವಾಯೂರು ಶ್ರೀ ಕೃಷ್ಣ ದೇಗುಲದ ಕೊಳದಲ್ಲಿ ಮಂಗಳವಾರ ‘ಶುದ್ದೀಕರಣ’ ಕಾರ್ಯ ನಡೆಸಲು ತೀರ್ಮಾನಿಸಲಾಗಿದೆ.
ಇದೇ ಕಾರಣ: ಸಾಮಾಜಿಕ ಮಾಧ್ಯಮ ಇನ್ ಫ್ಲುಯೆನ್ಸರ್ ಜಾಸ್ಮಿನ್ ಜಾಫರ್ ದೇವಸ್ಥಾನದ ಕೊಳದಲ್ಲಿ ತಮ್ಮ ಪಾದಗಳನ್ನು ತೊಳೆಯುತ್ತಿರುವ ದೃಶ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಅವರು ಪೋಸ್ಟ್ ಡಿಲೀಟ್ ಮಾಡಿ, ಕ್ಷಮೆಯಾಚಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಶುದ್ದೀಕರಣ ಕಾರ್ಯದ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ.
ಈ ಸಂಬಂಧ ಪ್ರಕಟಣೆ ಹೊರಡಿಸಿದ್ದು, ಹಿಂದೂಯೇತರ ಮಹಿಳೆಯೊಬ್ಬರು ಕೊಳದ ಆವರಣ ಪ್ರವೇಶಿಸಿ ವಿಡಿಯೋ ಮಾಡಿ ದೇವಾಲಯದ ಸಂಪ್ರದಾಯಗಳನ್ನು ಮುರಿದಿದ್ದಾರೆ. ಹೀಗಾಗಿ ಆಗಸ್ಟ್ 26 ರಂದು ಶುದ್ಧೀಕರಣ ಕಾರ್ಯ ನಡೆಸಲಾಗುವುದು. ಅಂದು ಬೆಳಿಗ್ಗೆ 5 ರಿಂದ ಮಧ್ಯಾಹ್ನದವರೆಗೂ ದೇವಾಲಯಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ತಿಳಿಸಿದೆ.
ದೇವಾಲಯದ ಆವರಣದಲ್ಲಿ ರೀಲ್ಸ್ ಮಾಡುವುದಕ್ಕೆ ನಿರ್ಬಂಧವಿದ್ದರೂ ಅದನ್ನು ಉಲ್ಲಂಘಿಸಲಾಗಿದೆ ಎಂದು ದೇವಸ್ಥಾನದ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ನ್ಯಾಯಾಲಯ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಾರ್ಜ್ ಕುರಿಯನ್

“ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಅಂತ್ಯವಾದ...

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...