ಭಾರತದ ಭವಿಷ್ಯದ ಹಿತ ದೃಷ್ಟಿಯಿಂದ ಸಶಸ್ತ್ರ ಸೇನಾ ಪಡೆಗಳು ಭದ್ರತಾ ಸವಾಲುಗಳನ್ನು ಎದುರಿಸಲು ಸಿದ್ಧವಾಗಿರಬೇಕು ರಕ್ಷಣಾ ಸಚಿವ ರಾಜನಾಥ್ ಸಿಂಗ್

71

“ಅನಿರೀಕ್ಷಿತ ಭೌಗೋಳಿಕ ರಾಜಕೀಯ ವಾತಾವರಣದ ದೃಷ್ಟಿಯಿಂದ ಅಲ್ಪಾವಧಿಯ ಸಂಘರ್ಷದಿಂದ ಹಿಡಿದು ಐದು ವರ್ಷಗಳ ಯುದ್ಧದವರೆಗೆ ಎಲ್ಲಾ ರೀತಿಯ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಹೇಳಿದ್ದಾರೆ.

ಇಲ್ಲಿನ ಆರ್ಮಿ ವಾರ್ ಕಾಲೇಜ್‌ನಲ್ಲಿ ನಡೆದ ‘ಯುದ್ಧ ಕುರಿತ ಸಂವಾದ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತವು ಯಾರ ಭೂಮಿಯನ್ನು ಬಯಸುವುದಿಲ್ಲ, ಆದರೆ ತನ್ನ ಪ್ರಾದೇಶಿಕ ಸಮಗ್ರತೆ ರಕ್ಷಿಸಲು ಯಾವುದೇ ಹಂತಕ್ಕೂ ಹೋಗಲು ಸಿದ್ಧವಾಗಿದೆ ಎಂದು ಹೇಳಿದರು. “ಇಂದಿನ ಯುಗದಲ್ಲಿ, ಯುದ್ಧಗಳು ತುಂಬಾ ಹಠಾತ್ ಮತ್ತು ಅನಿರೀಕ್ಷಿತವಾಗಿ ಮಾರ್ಪಟ್ಟಿವೆ. ಯಾವುದೇ ಯುದ್ಧವು ಯಾವಾಗ ಕೊನೆಗೊಳ್ಳುತ್ತದೆ ಮತ್ತು ಅದು ಎಷ್ಟು ಕಾಲ ಉಳಿಯುತ್ತದೆ ಎಂದು ಊಹಿಸಲು ತುಂಬಾ ಕಷ್ಟ” ಎಂದು ಸಿಂಗ್ ಹೇಳಿದರು.

ಭಾರತೀಯ ಸೇನೆಯು ಪ್ರತಿಯೊಂದು ಪರಿಸ್ಥಿತಿಗೂ ಸನ್ನದ್ಧವಾಗಿರಬೇಕು. ಅಲ್ವಾವಧಿಯಿಂದ ಹಿಡಿದು ಐದು ವರ್ಷಗಳವರೆಗೆ ಯಾವುದೇ ಯುದ್ಧ ಸಂಭವಿಸಿದ್ದರೂ ಅದಕ್ಕೆ ನಾವು ಸಂಪೂರ್ಣವಾಗಿ ಸಿದ್ಧರಾಗಿರಬೇಕು ಎಂದು ಅವರು ಹೇಳಿದರು. ರಾಷ್ಟ್ರೀಯ ಭದ್ರತೆಯು ಇನ್ನು ಮುಂದೆ ಮಿಲಿಟರಿಯ ವಿಷಯವಲ್ಲ. ಇದು ‘ಇಡೀ ರಾಷ್ಟ್ರದ ವಿಚಾರವಾಗಿದೆ ಎಂದು ಹೇಳಿದ ಸಚಿವರು, ಆಪರೇಷನ್ ಸಿಂಧೂರ್‌ನಲ್ಲಿ ಮೂರು ಸೇನೆಗಳು ತೋರಿದ ಸೇವೆಯನ್ನು ಶ್ಲಾಘಿಸಿದರು
. ಮೂರು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಮತ್ತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಸಂವಾದದಲ್ಲಿ ಉಪಸ್ಥಿತರಿದ್ದರು

Leave a comment

Leave a Reply

Your email address will not be published. Required fields are marked *

Related Articles

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಾರ್ಜ್ ಕುರಿಯನ್

“ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಅಂತ್ಯವಾದ...

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...