ಬಿಜೆಪಿಯೊಂದಿಗೆ ಸರಕಾರ ರಚನೆಗೆ ಮುಂದಾಗಿದ್ದ ಡಿಕೆ ಶಿವಕುಮಾರ್:: ಬಸವನಗೌಡ ಯತ್ನಾಳ್ ಆರೋಪ

53

ಕಲಬುರಗಿ: ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ನಿಂದ ಒಂದು ಕಾಲು ಹೊರಗಿಟ್ಟಿದ್ದು, ಬಿಜೆಪಿ ಸಹಕಾರದೊಂದಿಗೆ ಸರ್ಕಾರ ರಚಿಸಲು ಮುಂದಾಗಿದ್ದರು ಎಂಬುದಾಗಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸದ್ಯ ಡಿಕೆ ಶಿವಕುಮಾರ್ ಒಂದು ಕಾಲು ಕಾಂಗ್ರೆಸ್ ನಲ್ಲಿದೆ. ಇನ್ನೊಂದು ಕಾಲು ಬಿಜೆಪಿಯಲ್ಲಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರೊಂದಿಗೆ ರಹಸ್ಯ ಸಭೆಯನ್ನು ನಡೆಸಿದ್ದರು. ಬಿಜೆಪಿ ಜೊತೆ ಸೇರಿ ಸರ್ಕಾರ ರಚನೆಗೆ ಮುಂದಾಗಿದ್ದರು ಎಂದು ಆರೋಪಿಸಿದ್ದಾರೆ
. ಡಿ.ಕೆ ಶಿವಕುಮಾರ್, ವಿಜಯೇಂದ್ರ ಮಾತುಕತೆಯ ಸಂದರ್ಭದಲ್ಲಿ ಡಿಕೆಶಿ ಮುಖ್ಯಮಂತ್ರಿ, ವಿಜಯೇಂದ್ರ ಉಪಮುಖ್ಯಮಂತ್ರಿ ಆಗುವಂತೆ ಚರ್ಚೆ ನಡೆದಿತ್ತು. ಆದರೇ ಡಿಕೆ ಶಿವಕುಮಾರ್ ಅವರ ಹಿಂದೆ ಹೆಚ್ಚಿನ ಸಂಖ್ಯೆಯ ಶಾಸಕರು ಇರಲಿಲ್ಲ. ಹೀಗಾಗಿ ಸುಮ್ಮನಾಗಿದ್ದಾರೆ ಎಂಬುದಾಗಿ ಹೊಸ ಬಾಂಬ್ ಸಿಡಿಸಿದ್ದಾರೆ.
ದೆಹಲಿಯಲ್ಲಿ ನಡೆದ ಸಭೆಯಲ್ಲಿ, ಶಿವಕುಮಾರ್ ಅವರು 60 ರಿಂದ 70 ಕಾಂಗ್ರೆಸ್ ಶಾಸಕರ ಬೆಂಬಲ ಹೊಂದಿದ್ದಾರೆಂದು ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಅವರ (ಡಿಕೆಎಸ್) ಹಿಂದೆ 13 ಶಾಸಕರು ಕೂಡ ಇಲ್ಲ ಎಂದು ಆಂತರಿಕ ವರದಿಯ ಮೂಲಕ ಬಿಜೆಪಿ ನಾಯಕರು ತಿಳಿದುಕೊಂಡರು ಎಂದು ಯತ್ನಾಳ್ ಹೇಳಿದರು.

Leave a comment

Leave a Reply

Your email address will not be published. Required fields are marked *

Related Articles

ಕಾಂಗ್ರೆಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದೆ ಜನರ ತೀರ್ಪು ಗೌರವಿಸಿ 2 ವರ್ಷ ಶಾಸಕರಾಗಿ ಕೆಲಸ ಮಾಡಲು ಜೀವರಾಜ್ ಅವರಿಗೆ ಅವಕಾಶ ನೀಡಬೇಕು’: ಬಿ ವೈ ವಿಜಯೇಂದ್ರ

ಬೆಂಗಳೂರು: 2023ರಲ್ಲಿ ಪರಾಭವಗೊಂಡಾಗಲೇ ಡಿ ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರೆಗೆ...

ಪಂಚ ರಾಜ್ಯ ಚುನಾವಣೋತ್ತರ ಸಮೀಕ್ಷೆ: ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬಹುಮತ ತಮಿಳುನಾಡು ಡಿ ಎಂ ಕೆ ಕೇರಳ ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ??

ನವದೆಹಲಿ: ಬುಧವಾರ ನಡೆದ ಹಲವಾರು ಚುನಾವಣೋತ್ತರ ಸಮೀಕ್ಷೆಗಳು ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಮತ್ತು ಪಶ್ಚಿಮ...

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...