ಎಸ್ಐಟಿ ಮುಂದೆ ಹಾಜರಾದ ಸೌಜನ್ಯ  ಅತ್ಯಾಚಾರ ಪ್ರಕರಣದಲ್ಲಿ  ಆರೋಪ ಕೇಳಿ ಬಂದಿದ್ದ ಉದಯ ಜೈನ್

48

ಮಂಗಳೂರು: 2012 ರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸೌಜನ್ಯ ಅವರ ಕುಟುಂಬದಿಂದ ಆರೋಪ ಎದುರಿಸುತ್ತಿರುವ ಉದಯ್ ಜೈನ್ ಬುಧವಾರ ಎಸ್ ಐಟಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು. ಬೆಳ್ತಂಗಡಿಯಲ್ಲಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಹಾಜರಾದ ಉದಯ್ ಜೈನ್ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಉದಯ್ ಜೈನ್ ಅವರನ್ನು ಆರೋಪಿಗಳಲ್ಲಿ ಒಬ್ಬರೆಂದು ಹೆಸರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಎಸ್‌ಐಟಿ ನೀಡಿದ ಸಮನ್ಸ್ ನಂತರ ಜೈನ್ ಹಾಜರಾಗಿದ್ದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

  ಎಸ್ ಐಟಿ ವಿಚಾರಣೆಗೆ ಹಾಜರಾದ ಉದಯ್ ಜೈನ್, ‘ಬುಧವಾರ 11 ಗಂಟೆಗೆ ಕಚೇರಿಗೆ ಹಾಜರಾಗುವಂತೆ ಎಸ್ಐಟಿ ಅಧಿಕಾರಿಯೊಬ್ಬರು ನಿನ್ನೆ ದೂರವಾಣಿ ಕರೆ ಮಾಡಿ ತಿಳಿಸಿದ್ದರು. ಹಾಗಾಗಿ ಇಲ್ಲಿಗೆ ಬಂದಿದ್ದೇನೆ’ ಎಂದು ಸುದ್ದಿಗಾರರಿಗೆ ಹೇಳಿದರು. ‘ಸೌಜನ್ಯ ಕೊಲೆ ಪ್ರಕರಣದ ಎಫ್‌ಐಆರ್ ನಲ್ಲಿ ನಮ್ಮ ಹೆಸರು ಇರಲಿಲ್ಲ. ಆದರೂ ನಮ್ಮನ್ನು ಆರೋಪಿಗಳನ್ನಾಗಿಸುವ ಷಡ್ಯಂತ್ರ ನಡೆದಿತ್ತು. ಸಿಬಿಐ ಮತ್ತು ಸಿಐಡಿ ಅಧಿಕಾರಿಗಳು ನಮ್ಮನ್ನು ವಿಚಾರಣೆಗೆ ಒಳಪಡಿಸಿದ್ದರು. ನಮ್ಮ ಮಂಪರು ಪರೀಕ್ಷೆಯನ್ನೂ ನಡೆಸಲಾಗಿತ್ತು. ಆ ಪ್ರಕರಣದಲ್ಲಿ ನಮ್ಮ ಪಾತ್ರ ಇಲ್ಲ ಎಂದು ಸಾಬೀತಾಗಿತ್ತು ಎಂದರು.

ಅಂತೆಯೇ, ‘ಈಗ ಎಸ್ಐಟಿಯವರು ಯಾವ ಪ್ರಕರಣ ಸಂಬಂಧ ವಿಚಾರಣೆಗೆ ಕರೆದಿದ್ದಾರೆ ಎಂದು ಗೊತ್ತಿಲ್ಲ. ನನ್ನಂತೆಯೇ, ಇನ್ನಿಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿಯವರು ಕರೆ ಮಾಡಿದ್ದಾರೆ. ನಾನು ಧೀರಜ್ ಕೆಲ್ಲ ಅವರಿಗೆ ಕರೆ ಮಾಡಿದ್ದೆ. ಆಗ ಅವರು ಈ ವಿಚಾರ ತಿಳಿಸಿದ್ದಾರೆ. ಎಸ್ಐಟಿಯವರು ಕರೆದಿದ್ದಾರೆ ಎಂದ ಮೇಲೆ ಅವರು ಕೂಡ ಬರಲೇ ಬೇಕಾಗುತ್ತದೆ ಅಲ್ಲವೇ’ ಎಂದು ಉದಯ್ ಜೈನ್ ಹೇಳಿದರು.

,ಎಸ್ ಐ ಟಿ ಗೆ ದೂರು ಅಂದಹಾಗೆ 17 ವರ್ಷದ ವಿದ್ಯಾರ್ಥಿನಿ ಸೌಜನ್ಯ ಅವರನ್ನು 2012 ರಲ್ಲಿ ಧರ್ಮಸ್ಥಳದಲ್ಲಿ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸೌಜನ್ಯಾ ಕೊಲೆ ಪ್ರಕರಣದಲ್ಲಿ ಉದಯ್ ಜೈನ್ ಅಲ್ಲದೆ ಮಲ್ಲಿಕ್ ಜೈನ್ ಹಾಗೂ ಧೀರಜ್ ಕೆಲ್ಲ ಅವರ ಹೆಸರು ಕೂಡ ತಳಕು ಹಾಕಿಕೊಂಡಿತ್ತು.

Ou

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...