ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಶಬೀರ್ ಅಹ್ಮದ್ ಷಾಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

56

“ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಶಬೀರ್ ಅಹ್ಮದ್ ಷಾಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. ಈ ಪ್ರಕರಣದಲ್ಲಿ ಜಾಮೀನು ನೀಡಲು ದೆಹಲಿ ಹೈಕೋರ್ಟ್ ಜೂನ್ 12 ರಂದು ನಿರಾಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಷಾ ಸಲ್ಲಿಸಿರುವ ಅರ್ಜಿ ಕುರಿತು ಎರಡು ವಾರಗಳೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ರಾಷ್ಟ್ರೀಯ ತನಿಖಾ ದಳಕ್ಕೆ   ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ನ್ಯಾಯ ಪೀಠ ಸೂಚಿಸಿತು.
ಅಹ್ಮದ್ ಷಾ ಪರ ವಾದ ಮಂಡಿಸಿದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್, ಅರ್ಜಿದಾರರು ತುಂಬಾ ಅನಾರೋಗ್ಯದಿಂದ ಬಳಲುತ್ತಿದ್ದು, ಅವರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.

ಆದರೆ ಮಧ್ಯಂತರ ಜಾಮೀನು ಇಲ್ಲ ಎಂದು ನ್ಯಾಯಮೂರ್ತಿ ನಾಥ್ ಹೇಳಿದರು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಷಾ ಸಲ್ಲಿಸಿದ ಅರ್ಜಿ ಮೇಲೆ ಆರಂಭದಲ್ಲಿ ನ್ಯಾಯಪೀಠ ನೋಟಿಸ್ ನೀಡಿತು. ತನ್ನ ಕಕ್ಷಿದಾರರಿಗೆ ಮಧ್ಯಂತರ ಜಾಮೀನು ಬೇಕು ಎಂದು ಮನವಿ ಮಾಡಿದ ವಕೀಲ ಗೊನ್ಸಾಲ್ವಿಸ್, ತಮ್ಮ ಅರ್ಜಿಯನ್ನು ತ್ವರಿತಗತಿಯಲ್ಲಿ ವಿಚಾರಣೆ ಮಾಡಬೇಕು ಎಂದು ಕೋರಿದರು.
ಬಳಿಕ ನ್ಯಾಯಪೀಠ ಪ್ರಕರಣದ ವಿಚಾರಣೆಯನ್ನು ಎರಡು ವಾರ ಮುಂದೂಡಿತು. ಉಗ್ರರಿಗೆ ಆರ್ಥಿಕ ನೆರವು: ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಶಬೀರ್ ಅಹ್ಮದ್ ಮನೆ ಜಪ್ತಿ ಮಾಡಿದ ಇಡಿ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುವ ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಹೇಳಿ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.
ಭಾರತದ ವಿರುದ್ಧ ಪಿತೂರಿ, ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ, ಕಲ್ಲು ತೂರಾಟ ಮತ್ತು ಹಣ ಸಂಗ್ರಹ ಮತ್ತಿತರ ಆರೋಪದ ಮೇರೆಗೆ ಜೂನ್ 4, 2019ರಲ್ಲಿ ಅಹ್ಮದ್ ಷಾ ಅವರನ್ನು NIA ಬಂಧಿಸಿತು

Leave a comment

Leave a Reply

Your email address will not be published. Required fields are marked *

Related Articles

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಾರ್ಜ್ ಕುರಿಯನ್

“ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಅಂತ್ಯವಾದ...

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...