ಉಡುಪಿ ಜಿಲ್ಲೆಯ ಅಂಗನವಾಡಿಗಳಲ್ಲಿ ಖಾಲಿ ಇದ್ದ ವಿವಿಧ ಹುದ್ದೆಗಳ ಭರ್ತಿಗೆ : ಅರ್ಜಿ ಆಹ್ವಾನ

86

ಉಡುಪಿ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಡಿ ಕಾರ್ಯನಿರ್ವಹಿಸುತ್ತಿರುವ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 16 ಅಂಗನವಾಡಿ ಕಾರ್ಯಕರ್ತೆ ಹಾಗೂ 131 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ
ವೆಬ್‌ಸೈಟ್
https://karnemakaone.kar.nic.in/abcd/-ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಮೊದಲನೇ ಹಂತದಲ್ಲಿ ಆನ್‌ಲೈನ್ ನಲ್ಲಿ ನೀಡಲಾದ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಎರಡನೇ ಹಂತದಲ್ಲಿ ಅರ್ಜಿದಾರರ ಸಹಿ ಹಾಗೂ ಭಾವಚಿತ್ರವನ್ನು ಅಪ್‌ಲೋಡ್ ಮಾಡಿ, ನಂತರ ಇ-ಸೈನ್ ಹಂತವನ್ನು ಕಡ್ಡಾಯವಾಗಿ ಪೂರ್ಣಗೊಳಿಸಿ, ಮೂರನೇ ಹಂತದಲ್ಲಿ ಅರ್ಜಿದಾರರು ತಮಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿ, ನಾಲ್ಕನೇ ಹಂತದಲ್ಲಿ ಮೂರನೇ ಹಂತದಲ್ಲಿ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿದ ಬಳಿಕ ಅರ್ಜಿ ಮುದ್ರಿಸಬಹುದಾಗಿದೆ

ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ

Leave a comment

Leave a Reply

Your email address will not be published. Required fields are marked *

Related Articles

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್...

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು,...