ಮುಂದಿನ 3 ದಿನ ರಾಜ್ಯಾದ್ಯಂತ ವರ್ಷಧಾರೆ, ಯೆಲ್ಲೋ ಅಲರ್ಟ್ ಘೋಷಣೆ

51

ಬೆಂಗಳೂರು: ಇತ್ತೀಚೆಗೆ ತಣ್ಣಗಾಗಿದ್ದ ಮಳೆರಾಯ ಮತ್ತೆ ಅಬ್ಬರಿಸಲು ಸಜ್ಜಾಗಿದ್ದು ಮುಂದಿನ 3 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಚುರುಕು ಪಡೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ಮುಂದಿನ ಮೂರು ದಿನದ ಬಳಿಕ ಮತ್ತೆ ಮಳೆ ಹೆಚ್ಚಾಗಲಿದ್ದು, ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಸಾಕಷ್ಟು ಕಡೆ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ 8 ರಿಂದ 10ರವರೆಗೂ ರಾಜ್ಯದ ಸಾಕಷ್ಟು ಕಡೆಗಳಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ರಾಜ್ಯದ ವಿಜಯನಗರ, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಯೆಲ್ಲೋ ಅಲರ್ಟ್ ಬೀದರ್, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....