ಸಿದ್ದರಾಮಯ್ಯ ಸರಕಾರದ ವಿರುದ್ಧ ಎಸ್ ಸಿ ಒಳಮೀಸಲಾತಿ ಕಿಚ್ಚು: ಫ್ರೀಡಂಪಾರ್ಕ್‌ನಲ್ಲಿ ಉಗ್ರ ಹೋರಾಟ

62

ಬೆಂಗಳೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ. ಈ ವೇಳೆ ರೊಚ್ಚಿಗೆದ್ದ ಪ್ರತಿಭಟನೆಕಾರರು ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಮಹಿಳೆಯೊಬ್ಬರು ಸ್ಥಳದಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.


ಇನ್ನು ಮಹಾರಾಣಿ ಕಾಲೇಜು ಬಳಿ ಪ್ರತಿಭಟನಾಕಾರರು ರಸ್ತೆ ತಡೆದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ರಸ್ತೆ ತಡೆಯಿಂದಾಗಿ ಕೆ.ಆರ್.ಸರ್ಕಲ್ ಬಳಿ ಫುಲ್ ಟ್ರಾಫಿಕ್ ಜಾಮ್ ಆಗಿದ್ದು, ವಾಹನಗಳು ಕಿಲೋ ಮೀಟರ್ ಉದ್ದ ನಿಂತಲ್ಲೇ ನಿಂತುಕೊಂಡಿವೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ.

ಎಡಗೈ ಸಮುದಾಯಕ್ಕೆ ಶೇ. 6 ರಷ್ಟು, ಬಲ ಸಮುದಾಯಕ್ಕೆ ಶೇ. 6 ರಷ್ಟು ಹಾಗೂ ಸ್ಪೃಶ್ಯ ಸಮುದಾಯಕ್ಕೆ ಶೇ.5ರಷ್ಟು ಮೀಸಲಾತಿ ಕಲ್ಪಿಸಲು ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 20ರಂದು ವಿಧಾನಸೌಧದಲ್ಲಿ ಘೋಷಿಸಿದ್ದರು.
ನ್ಯಾ.ನಾಗಮೋಹನ್‌ ದಾಸ್ ವರದಿಯ ಶಿಫಾರಸುಗಳನ್ನು ಕೆಲ ಮಾರ್ಪಾಡುಗಳೊಂದಿಗೆ ಒಳ ಮೀಸಲಾತಿ ಕಲ್ಪಿಸಲಾಗಿದೆ. A, B, C ಎಂದು ವರ್ಗೀಕರಣ ಮಾಡಿ ಮೀಸಲಾತಿ ಹಂಚಲಾಗಿದ್ದು, ಈ ಮೂಲಕ ದಶಗಳ ಹೋರಾಟಕ್ಕೆ ನಮ್ಮ ಸರ್ಕಾರ ನ್ಯಾಯ ಒದಗಿಸಿದೆ ಎಂದು ಸಿಎಂ ತಿಳಿಸಿದರು. ಆದರೆ ಒಳಮೀಸಲಾಯಿಯಿಂದ ನಮಗೆ ಅನ್ಯಾಯವಾಗುತ್ತದೆ ಎಂದು ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳು ಆಕ್ರೋಶ ವ್ಯಕ್ತಪಡಿಸಿದ್ದವು.
ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ 101 ಜಾತಿಗಳನ್ನು ಐದು ಗುಂಪುಗಳಾಗಿ ವರ್ಗೀಕರಿಸಿ, ಲಭ್ಯ ಶೇಕಡಾ 17 ಮೀಸಲಾತಿಯನ್ನು ಸುಪ್ರೀಂ ಕೋರ್ಟ್‌ ಮಾನದಂಡಗಳ ಅನ್ವಯ ಹಂಚಿಕೆ ಮಾಡುವಂತೆ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ದಾಸ್‌ ನೇತೃತ್ವದ ಏಕಸದಸ್ಯ ಆಯೋಗ, ಆರು ಶಿಫಾರಸುಗಳನ್ನೂ ಮಾಡಿತ್ತು. ಅಲ್ಲದೆ ಆಯೋಗವು ಸುಮಾರು 1,765 ಪುಟಗಳ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತ್ತು

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...