ಉಡುಪಿ ಚಿಕ್ಕಮಂಗಳೂರು ಸಂಸದರೆ ಪರ್ಕಳ ಮಣಿಪಾಲ್ ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾರ್ಯ ಯಾವಾಗ;; ನವೀನ್ ಸಾಲಿಯಾನ್

128

ಉಡುಪಿ- ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರು ತಮ್ಮ ಸೊಗಸಾದ ಮಾತುಗಾರಿಕೆಯಿಂದ ಜನರನ್ನು ಇಲ್ಲಿಯ ತನಕ ಮರಳು ಮಾಡಿದ್ದು ಬಿಟ್ಟರೆ ಯಾವುದೇ ರೀತಿಯ ಜನಪರ ಕೆಲಸ ಮಾಡಿದ ಉದಾಹರಣೆಗಳಿಲ್ಲ. ಅವರು ಕೇವಲ ಭಾಷಣಕ್ಕೆ ಸೀಮಿತ ಹೊರತು ಅಭಿವೃದ್ಧಿ ಕೆಲಸ ಶೂನ್ಯ ಎಂದು ನವೀನ್ ಸಾಲಿಯಾನ್ ಹೇಳಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿಯವರು ಸಚಿವರಾಗಿದ್ದ ವೇಳೆ ಕರಾವಳಿ ಜಿಲ್ಲೆಗಳಿಗೆ ಕುಚ್ಚಲಕ್ಕಿ ಪಡಿತರದಲ್ಲಿ ನೀಡುವ ಭರವಸೆ ನೀಡಿದ್ದರು. ಪರಿಶಿಷ್ಟ ಪಂಗಡದ ಜನರಿಗೆ ಮನೆ ನಿರ್ಮಾಣಕ್ಕೆ ರೂ 5ಲಕ್ಷದಂತೆ ಅನುದಾನ ಒದಗಿಸುವುದಾಗಿ ಹೇಳಿದ್ದರು ಆದರೆ ಇಲ್ಲಿಯ ವರೆಗೆ ಅವರು ಅದನ್ನು ಜಾರಿ ಮಾಡಿಸುವಲ್ಲಿ ಸೋತಿದ್ದಾರೆ. ಕೇವಲ ಬಾಯಿಚಪಲಕ್ಕೆ ಭಾಷಣಗಳ ಮೂಲಕ ಜನರನ್ನು ಮರಳು ಮಾಡಿದ್ದು ಬಿಟ್ಟರೆ ಅವರ ಅವಧಿಯಲ್ಲಿ ಹೇಳಿಕೊಳ್ಳುವಂತಹ ಯಾವುದೇ ಅಭಿವೃದ್ದಿ ಕೆಲಸಗಳು ನಡೆದಿಲ್ಲ.

ಇಂದ್ರಾಳಿ ಬ್ರಿಡ್ಜ್ ಅಂತು ಸಂಸದರ ಪ್ರವಾಸಿ ತಾಣವಾಗಿ ಮಾರ್ಪಟ್ಟಂತೆ ಕಾಣುತ್ತಿದೆ ಹೊರತು ಕಾಮಗಾರಿ ಪೂರ್ಣ ಗೊಳ್ಳುವ ಯಾವುದೇ ಲಕ್ಷಣ ಕಾಣುತ್ತಿಲ್ಲ.ಕೇಂದ್ರ ಸರಕಾರ ಗಣರಾಜ್ಯೋತ್ಸವ ಪರೇಡ್ ನಲ್ಲಿ ಬಿಲ್ಲವರ ಆರಾಧ್ಯ ದೈವ ಎನಿಸಿಕೊಂಡಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ ಟ್ಯಾಬ್ಲೋ ನಿಷೇಧ ಮಾಡಿದಾಗಲೂ ಕೂಡ ಅದೇ ಬಿಲ್ಲವ ಸಮುದಾಯದ ನಾಯಕ ಎನಿಸಿಕೊಂಡ ಕೋಟರ ಬಾಯಿಗೆ ಬೀಗ ಹಾಕಿತ್ತು. ಈಗ ಪರ್ಕಳ ರಸ್ತೆ ತೀರ್ವ ಹದಗೆಟ್ಟಿದ್ದು ಸದ್ಯ ವಾಹನ ಸವಾರರು ಹೈರಾಣಾಗಿ ಹೋಗಿದ್ದು,ಉಡುಪಿ ಮಣಿಪಾಲ್ ಆಸ್ಪತ್ರೆಗೆ ಇದೇ ಮಾರ್ಗವಾಗಿ ಬರುವುದರಿಂದ ರೋಗಿಗಳು ಹಾಗೂ ಸಾರ್ವಜನಿಕರು ದಿನ ಹಿಡಿಶಾಪ ಹಾಕುವಂತ ಪರಿಸ್ಥಿತಿ ಉಂಟಾಗಿದೆ.ಗರ್ಬಿಣಿ ಸ್ತ್ರೀಯರು ಈ ರಸ್ತೆಯಲ್ಲಿ ಆಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಹೋಗುವಾಗ ಸಂಸದರಾದ ಶ್ರೀನಿವಾಸ್ ಪೂಜಾರಿ ಅವರು ನಾಮಕಾವಸ್ಥೆಗೆ ಸಂಸದರಾಗಿದ್ದಾರೆ ಉಡುಪಿಯ ಜನತೆಗೆ ಅನ್ಯಾಯ ಮಾಡಿದ್ದಾರೆ ಎಂದು ದೂರುವಂತ ಸನ್ನಿವೇಶ ಎದುರಾಗಿದೆ.

ಈ ಬಾರಿ ಆರು ತಿಂಗಳಲ್ಲಿ ಹಿಂದಿ ಕಲಿತು ಬಾಷಣ ಮಾಡುತ್ತೇನೆ ಎಂದು ಹೇಳಿದ್ದಿರಿ ಆದ್ದರಿಂದ ಈ ಬಾರಿ ಲೋಕಸಭೆಯ ಅಧಿವೇಶನದಲ್ಲಿ ಹಿಂದಿಯಲ್ಲಿ ಮಾನ್ಯ ಸಾರಿಗೆ ಸಚಿವರಿಗೆ ಪರ್ಕಳ ರಸ್ತೆ ದುರಸ್ತಿ ಮಾಡುವ ನಿಟ್ಟಿನಲ್ಲಿ ಸಚಿವರ ಗಮನ ಸೆಳೆಯಿರಿ. ಅದನ್ನಾದರೂ ಮಾಡಿ ಶೀಘ್ರ ಪರ್ಕಳ ರಸ್ತೆಯನ್ನು ದುರಸ್ತಿ ಮಾಡಿ ಸುಗಮ ಸಂಚಾರಕ್ಕಾಗಿ ಅನುವು ಮಾಡಿ ಕೊಡಿ ಎಂದು ನವೀನ್ ಸಾಲ್ಯಾನ್ ಆಗ್ರಹಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...