ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವು: ಧಾರುಣ ಘಟನೆಗೆ ಸಾಕ್ಷಿಯಾದ ಹಾಸನ.

65

ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ. ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ ತೆರಳುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಜನರ ಗುಂಪಿನ ಮೇಲೆ ನುಗ್ಗಿದ್ದು ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ.

ಹಾಸನ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ. ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ ತೆರಳುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಜನರ ಗುಂಪಿನ ಮೇಲೆ ನುಗ್ಗಿದ್ದು ಸ್ಥಳದಲ್ಲೇ ಎಂಟು ಮಂದಿ ಸಾವನ್ನಪ್ಪಿದ್ದಾರೆ.

ಹಾಸನದ ಮೊಸಳೆಹೊಸಳ್ಳಿ ಬಳಿ ಭೀಕರ ಅಪಘಾತ ನಡೆದಿದೆ. ಇನ್ನು ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಹಲವರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೊಸಳೆಹೊಸಳ್ಳಿ ರಾಷ್ಟ್ರೀಯ ಹೆದ್ದಾರಿ 373ರ ಚತುಷ್ಪಥ ರಸ್ತೆಯ ಒಂದು ಬದಿಯಲ್ಲಿ ಗಣೇಶ ಮೂರ್ತಿ ಮೆರವಣಿಗೆಗೆ ಅವಕಾಶ ನೀಡಲಾಗಿತ್ತು.

ಈ ವೇಳೆ ವೇಗವಾಗಿ ಬಂದ ಮಹಾರಾಷ್ಟ್ರ ಮೂಲದ ಕ್ಯಾಂಟರ್ ಮೊದಲಿಗೆ ಬೈಕ್ ಗೆ ಡಿಕ್ಕಿ ಹೊಡೆದು ನಂತರ ಮೆರವಣಿಗೆಯಲ್ಲಿ ಸಾಗುತ್ತಿದ್ದ ನೂರಾರು ಜನರ ಮೇಲೆ ಕ್ಯಾಂಟರ್ ನುಗ್ಗಿದೆ. ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೂವರು ಸಾವನ್ನಪ್ಪಿದ್ದಾರೆ. 10 ಮಂದಿ ಸ್ಥಿತಿ ಗಂಭೀರವಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...