ಪಾಕಿಸ್ತಾನ್ ಜಿಂದಾಬಾದ್ ಎನ್ನುವವರ ಮೇಲೆ ಕ್ರಮ ಇಲ್ಲ ಹಿಂದೂಗಳ ಮೇಲೆ ಆಕ್ರಮಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಿಟಿ ರವಿ ಮೇಲೆ ಎಫ್ ಐ ಆರ್

55

“ಪಾಕಿಸ್ತಾನ್ ಜಿಂದಾಬಾದ್ ಕೂಗುವವರು, ಪಾಕಿಸ್ತಾನ್ ಧ್ವಜ ಹಾರಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಹಿಂದೇಟು ಹಾಕುವ ಕಾಂಗ್ರೆಸ್ ಸರ್ಕಾರ, ಮದ್ದೂರಿನ ಗಣೇಶೋತ್ಸವದ ಮೇಲೆ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳ ವಿರುದ್ಧ ಭಾವೋದ್ವೇಗದಲ್ಲಿ ಮಾತನಾಡಿರುವ ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲಿಸಿರುವುದು ವಿದ್ರೋಹಿಗಳಿಗೆ ಕುಮ್ಮಕ್ಕು ನೀಡುತ್ತಿರುವುದನ್ನು ಸಾಕ್ಷೀಕರಿಸಿದೆ ಎಂದು ಬಿಜೆಪಿ ಕಿಡಿಕಾರಿದೆ.
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಬುಧವಾರ ನಡೆದ ಗಣೇಶ ಚತುರ್ಥಿ ಆಚರಣೆಯ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ಪಾಕಿಸ್ತಾನ್ ಜಿಂದಾಬಾದ್ ಕೂಗುವವರು, ಪಾಕಿಸ್ತಾನ್ ಧ್ವಜ ಹಾರಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಹಿಂದೇಟು ಹಾಕುವ ಕಾಂಗ್ರೆಸ್ ಸರ್ಕಾರ ಮದ್ದೂರಿನ ಗಣೇಶೋತ್ಸವದ ಮೇಲೆ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳ ವಿರುದ್ಧ ಭಾವೋದ್ವೇಗದಲ್ಲಿ ಮಾತನಾಡಿರುವ ಸಿಟಿ ರವಿ ಅವರ ಮೇಲೆಎಫ್ ಐ ಆರ್ ದಾಖಲಿಸುವ ಮೂಲಕ ತಮ್ಮದು ಪಕ್ಷಪಾತಿ ಸರ್ಕಾರ, ವಿದ್ರೋಹಿಗಳಿಗೆ ಕುಮ್ಮಕ್ಕು ನೀಡುವ ಸರ್ಕಾರ ಎನ್ನುವುದನ್ನು ಸಾಕ್ಷೀಕರಿಸಿಕೊಂಡಿದೆ. ಭಾರತೀಯತೆ, ಹಿಂದುತ್ವದ ಪರ ಹೋರಾಡುವುದು ಭಾರತೀಯ ಜನತಾ ಪಾರ್ಟಿಯ ಪರಮ ಆದ್ಯತೆ, ಅದನ್ನು ಹತ್ತಿಕ್ಕಲು ಎಷ್ಟೇ ಪ್ರಯತ್ನಿಸಿದರು ಅದನ್ನು ಮೆಟ್ಟಿ ನಿಲ್ಲುವ ಶಕ್ತಿ ಬಿಜೆಪಿಯ ಪ್ರತಿ ಕಾರ್ಯಕರ್ತರಿಗೂ ಇದೆ.

ನಮ್ಮ ಪಕ್ಷದ ಪ್ರಮುಖರಾದ ಸಿ.ಟಿ ರವಿ ಅವರ ಮೇಲೆ ದಾಖಲಾಗಿರುವ ಎಫ್ ಐ ಆರ್ ಹೋರಾಟದ ಒಂದು ಭಾಗವೆಂದು ನಾವು ಸ್ವೀಕರಿಸಿದ್ದೇವೆ, ಕಾಂಗ್ರೆಸ್ ಸರ್ಕಾರದ ಈ ನಡೆಯನ್ನು ಜನರೇ ಧಿಕ್ಕರಿಸಲಿದ್ದಾರೆಂದು ಹೇಳಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, ವಿರೋಧ ಪಕ್ಷದ ನಾಯಕರ ಧ್ವನಿ‌ ಅಡಗಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಕೇಸು ದಾಖಲಿಸುತ್ತಿದೆ. ಈ ತರಹದ ದ್ವೇಷದ ರಾಜಕಾರಣ ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ನಡೆದಿಲ್ಲ. ಸಿ. ಟಿ. ರವಿ ಅವರ ಮೇಲಿನ ಕೇಸ್ ಅನ್ನು ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು. ಮದ್ದೂರಿನಲ್ಲಿ ಮುಸಲ್ಮಾನರೇ ಕಲ್ಲು ತೂರಾಟ ಮಾಡಿದ್ದು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರೇ ಒಪ್ಪಿಕೊಂಡಿದ್ದಾರೆಂದು ತಿಳಿಸಿದ್ದಾರೆ
.
ಮದ್ದೂರಿನಲ್ಲಿ ಕಳೆದ ಭಾನುವಾರ ರಾತ್ರಿ ಗಣೇಶ ಅವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಕಲ್ಲು ತೂರಾಟ, ಕೋಮುದಳ್ಳುರಿಗೆ ಮತಾಂಧ ಮುಸ್ಲಿಂ ಕಿಡಿಗೇಡಿಗಳೇ ಕಾರಣ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಒಪ್ಪಿಕೊಂಡಿರುವುದು ಸ್ವಾಗತಾರ್ಹ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್ ಅವರೂ ಈ ಸತ್ಯಾಂಶವನ್ನ ಒಪ್ಪಿಕೊಳ್ಳುತ್ತಾರಾ ಅಥವಾ ಸತ್ಯ ಹೇಳಿದ್ದಕ್ಕೆ ಮಾಜಿ ಸಚಿವ ರಾಜಣ್ಣ ಅವರನ್ನು ಏಕಾಏಕಿ ಸಂಪುಟದಿಂದ ವಜಾ ಮಾಡಿದ ರೀತಿ ಚಲುವರಾಯಸ್ವಾಮಿ ಅವರನ್ನೂ ಸಂಪುಟದಿಂದ ವಜಾ ಮಾಡುತ್ತಾರಾ? ಎಂದು ವ್ಯಂಗ್ಯವಾಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...