ಬೈಕ್ ಟ್ಯಾಕ್ಸಿ- ಭವಿಷ್ಯ : ಸೆ.22ಕ್ಕೆ ಸಿಗುತ್ತಾ ಹೈಕೋರ್ಟ್‌ನಲ್ಲಿ ಚಾಲಕರಿಗೆ ಸಿಹಿ ಸುದ್ದಿ?

57

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಇಲಾಖೆ ಹಾಗೂ ಬೈಕ್ ಟ್ಯಾಕ್ಸಿ ಚಾಲಕರ ಜಟಾಪಟಿ ಮುಂದುವರೆದಿದ್ದು, ಇದೇ 22ಕ್ಕೆ ಬೈಕ್ ಟ್ಯಾಕ್ಸಿ ಭವಿಷ್ಯ ನಿರ್ಧಾರವಾಗಲಿದೆ. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಕಾರ್ಯಾಚರಣೆ ಬಗ್ಗೆ ತನ್ನ ನಿಲುವು ತಿಳಿಸಲು ಹೈಕೋರ್ಟ್ ಕರ್ನಾಟಕ ಸರ್ಕಾರಕ್ಕೆ  ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ಬೈಕ್ ಟ್ಯಾಕ್ಸಿ ಸಾಧಕ-ಭಾದಕಗಳ ಬಗ್ಗೆ ವರದಿ ಸಲ್ಲಿಸಲು ಸರ್ಕಾರ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದೆ. ಈ ಕಮಿಟಿಯನ್ನು ಸರ್ಕಾರದ ಸಾರಿಗೆ ಇಲಾಖೆಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಚಿಸಲಾಗಿದೆ.

ಒಟ್ಟು 11 ಜನ ಈ ಕಮಿಟಿಯ ಸದಸ್ಯರಿದ್ದಾರೆ. ಉನ್ನತ ಮಟ್ಟದ ಕಮಿಟಿಯಲ್ಲಿ ಯಾರಿದ್ದಾರೆ? * ಬೆಂಗಳೂರು ನಗರ ಭೂ ಸಾರಿಗೆ ಅಭಿವೃದ್ಧಿ ಇಲಾಖೆ ಆಯುಕ್ತರು * ಕಾರ್ಮಿಕ ಇಲಾಖೆ ಆಯುಕ್ತರು * ಸಾರಿಗೆ ಹಾಗೂ ರಸ್ತೆ ಸುರಕ್ಷತೆ ಇಲಾಖೆಯ ಆಯುಕ್ತರು * ಬಿಎಂಟಿಸಿ ಎಂಡಿ * ಬೆಂಗಳೂರು ಜಂಟಿ ಸಂಚಾರ ಪೋಲಿಸ್ ಆಯುಕ್ತರು * ಬೆಂಗಳೂರು ನಗರ ಜಂಟಿ ಪೋಲಿಸ್ ಆಯುಕ್ತರು * ಬಿಎಂಆರ್‌ಸಿಎಲ್‌ನ ಹಿರಿಯ ಪ್ರತಿನಿಧಿ * ಬೃಹತ್ ಬೆಂಗಳೂರು ಪ್ರಾಧಿಕಾರದ ಹಿರಿಯ ಪ್ರತಿನಿಧಿ * ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಅಧಿಕಾರಿ * ಸಾರಿಗೆ ಇಲಾಖೆಯ ಆಯುಕ್ತರು ಹಾಗೂ ಕಾರ್ಯದರ್ಶಿಗಳು ಈ ಕಮಿಟಿಯಲ್ಲಿ ಬೆಂಗಳೂರು ನಗರ ಭೂಸಾರಿಗೆ ಅಭಿವೃದ್ಧಿ ಇಲಾಖೆ (ಡಲ್ಟ್)ನ ಆಯುಕ್ತರು,

ಕಾರ್ಮಿಕ ಇಲಾಖೆ ಆಯುಕ್ತರು, ಸಾರಿಗೆ ಹಾಗೂ ರಸ್ತೆ ಸುರಕ್ಷತೆ ಇಲಾಖೆಯ ಆಯುಕ್ತರು, ಬಿಎಂಟಿಸಿ ಎಂಡಿ, ಬೆಂಗಳೂರು ಜಂಟಿ ಸಂಚಾರ ಪೋಲಿಸ್ ಆಯುಕ್ತರು, ಬೆಂಗಳೂರು ನಗರ ಜಂಟಿ ಪೋಲಿಸ್ ಆಯುಕ್ತರು, ಬಿಎಂಆರ್‌ಸಿಎಲ್‌ನ ಹಿರಿಯ ಪ್ರತಿನಿಧಿ, ಬೃಹತ್ ಬೆಂಗಳೂರು ಪ್ರಾಧಿಕಾರದ ಹಿರಿಯ ಪ್ರತಿನಿಧಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಅಧಿಕಾರಿ, ಸಾರಿಗೆ ಇಲಾಖೆಯ ಆಯುಕ್ತರು ಹಾಗೂ ಕಾರ್ಯದರ್ಶಿಗಳು ಸೇರಿದಂತೆ ಒಟ್ಟು 11 ಜನರ ಕಮಿಟಿ ರಚಿಸಲಾಗಿದೆ.

ಈ ಕಮಿಟಿಯು ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯ ಸಾಧಕ-ಭಾದಕಗಳ ಕುರಿತು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಈ ವರದಿಯ ಆಧಾರದ ಮೇಲೆ ಸಾರಿಗೆ ಇಲಾಖೆ ಅಥವಾ ಸರ್ಕಾರ ಸೆಪ್ಟೆಂಬರ್ 22ರಂದು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಬಗ್ಗೆ ನಿಯಮ ರೂಪಿಸಿ ತನ್ನ ನಿಲುವು ಪ್ರಕಟಿಸಲಿದೆ. ಒಂದು ಅಂದಾಜಿನಂತೆ ಬೆಂಗಳೂರಲ್ಲಿ ಸುಮಾರು 1.20 ಲಕ್ಷ ಖಾಸಗಿ ಬೈಕ್ ಸವಾರರು ಬೈಕ್ ಟ್ಯಾಕ್ಸಿ ಮಾಡುತ್ತಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...