ಒಂದು ದಿನ ಮಾತ್ರವೇ ಐಟಿಆರ್ ಸಲ್ಲಿಕೆ  ವಿಸ್ತರಣೆ : ಆದಾಯ ತೆರಿಗೆ ಸಲ್ಲಿಕೆಗೆ ಕೊನೆ ದಿನ

30

ಆದಾಯ ತೆರಿಗೆ ಇಲಾಖೆಯು ಆದಾಯ ತೆರಿಗೆ ರಿಟರ್ನ್ (ಐಟಿಆರ್) ಸಲ್ಲಿಸಲು ಕೊನೆಯ ದಿನಾಂಕವನ್ನು ಇನ್ನೂ ಒಂದು ದಿನ ವಿಸ್ತರಿಸಿದೆ. ಆದ್ದರಿಂದ, ಐಟಿಆರ್ ಸಲ್ಲಿಸಲು ಕೊನೆಯ ದಿನಾಂಕ ಈಗ ಸೆಪ್ಟೆಂಬರ್ 16, 2025 ಆಗಿದೆ. ಈ ಮೊದಲು ಈ ದಿನಾಂಕವನ್ನು ಸೆಪ್ಟೆಂಬರ್ 15 ಎಂದು ನಿಗದಿಪಡಿಸಲಾಗಿತ್ತು. ಆದಾಗ್ಯೂ, ಐಟಿಆರ್ ಸಲ್ಲಿಸಲು ಆರಂಭಿಕ ಗಡುವು ಜುಲೈ 31, 2025 ಆಗಿತ್ತು, ಅದನ್ನು ಈಗಾಗಲೇ ವಿಸ್ತರಿಸಲಾಗಿತ್ತು. ಆದಾಯ ತೆರಿಗೆ ರಿಟರ್ನ್ಸ್(Income Tax ) ಸಲ್ಲಿಸಲು ಇದ್ದ ಗಡುವನ್ನು ಒಂದೇ ಒಂದು ದಿನ ವಿಸ್ತರಣೆ ಮಾಡಲಾಗಿದೆ. ಈ ಹಿಂದೆ ಸೆಪ್ಟೆಂಬರ್ 15ಕ್ಕೆ ಗಡುವು ನೀಡಲಾಗಿತ್ತು.

ಇದೀಗ ಸೆಪ್ಟೆಂಬರ್ 16ರವರೆಗೂ ವಿಸ್ತರಿಸಲಾಗಿದೆ. ಈ ಮಧ್ಯೆ ವೆಬ್ಸೈಟ್ ಕ್ರ್ಯಾಷ್ ಆಗಿರುವುದೂ ಸೇರಿದಂತೆ ಬೇರೆ ಬೇರೆ ಸಮಸ್ಯೆಗಳು ಎದುರಾಗಿ ಐಟಿಆರ್ ಸಲ್ಲಿಕೆ ವಿಳಂಬವಾಗಿತ್ತು. ಹಾಗಾಗಿ ಗಡುವು ವಿಸ್ತರಣೆ ಮಾಡುವಂತೆ ಮನವಿಗಳು ಕೂಡ ಬಂದಿತ್ತು. ಇದೀಗ ಒಂದು ದಿನ ಹೆಚ್ಚಿನ ಕಾಲಾವಕಾಶವನ್ನು ನೀಡಲಾಗಿದೆ. ಈ ಮಧ್ಯೆ ಐಟಿ ರಿಟರ್ನ್ಸ್ ಸಲ್ಲಿಕೆಯ ಗಡುವನ್ನು ಸೆಪ್ಟೆಂಬರ್ 30ಕ್ಕೆ ವಿಸ್ತರಿಸಲಾಗಿದೆ ಎನ್ನುವಂತಹ ಪೋಸ್ಟ್ವೊಂದು ಆನ್ಲೈನ್ನಲ್ಲಿ ವೈರಲ್ ಆಗಿತ್ತು. ಹಣಕಾಸು ಸಚಿವಾಲಯದಿಂದ ಹೊರಡಿಸಲಾಗಿದೆ ಎನ್ನಲಾದ ನೋಟೀಸ್ ಅನ್ನು ಉಲ್ಲೇಖಿಸಲಾಗಿತ್ತು ಆದರೆ ಅದು ಸುಳ್ಳು ಸುದ್ದಿ ಎಂದು ಆದಾಯ ತೆರಿಗೆ ಇಲಾಖೆ ಇದಕ್ಕೆ ಸ್ಪಷ್ಟನೆ ನೀಡಿತ್ತು. ಇದೀಗ ಒಂದು ದಿನಗಳ ಕಾಲ ವಿಸ್ತರಿಸಲಾಗಿದೆ. ಐಟಿಆರ್ ಸಲ್ಲಿಕೆಗೆ ಇರುವ ಡೆಡ್ಲೈನ್ ಒಳಗೆ ಪಾವತಿಸದೆ ವಿಳಂಬ ಮಾಡಿದರೆ ವಿವಿಧ ದಂಡಗಳು ಕಾದಿರುತ್ತವೆ.

1,000 ರೂನಿಂದ ಹಿಡಿದು 5,000 ರೂವರೆಗೆ ತಡಪಾವತಿ ಶುಲ್ಕ ತೆರಬೇಕಾಗುತ್ತದೆ. ತೆರಿಗೆ ಬಾಕಿ ಮೊತ್ತದ ಮೇಲೆ ಬಡ್ಡಿ ಕಟ್ಟುವುದು ಇವೇ ಮುಂತಾದ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಆದಾಯ ತೆರಿಗೆ ಇ-ಫೈಲಿಂಗ್ ಪೋರ್ಟಲ್‌ನಲ್ಲಿನ ತಾಂತ್ರಿಕ ಸಮಸ್ಯೆಗಳಿಂದಾಗಿ ರಿಟರ್ನ್ಸ್ ಸಲ್ಲಿಸುವಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದ ತೆರಿಗೆದಾರರ ಅನುಕೂಲಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಐಟಿಆರ್ ಸಲ್ಲಿಸುವ ದಿನಾಂಕವನ್ನು ಒಂದು ದಿನ ವಿಸ್ತರಿಸಿರುವುದರಿಂದ ತೆರಿಗೆದಾರರು ಸ್ವಲ್ಪ ನಿರಾಳರಾಗಿದ್ದಾರೆ. ಆದರೆ ಕೊನೆಯ ಕ್ಷಣದಲ್ಲಿ ತಾಂತ್ರಿಕ ಸಮಸ್ಯೆಗಳು ಅಥವಾ ದಂಡವನ್ನು ತಪ್ಪಿಸಲು, ಪ್ರತಿಯೊಬ್ಬರೂ ತಮ್ಮ ಆದಾಯ ತೆರಿಗೆ ರಿಟರ್ನ್‌ಗಳನ್ನು ಸಮಯಕ್ಕೆ ಸರಿಯಾಗಿ ಸಲ್ಲಿಸುವಂತೆ ಇಲಾಖೆ ಮನವಿ ಮಾಡಿದೆ”

Leave a comment

Leave a Reply

Your email address will not be published. Required fields are marked *

Related Articles

ಫೆಬ್ರವರಿ 1 ಕೇಂದ್ರ ಬಜೆಟ್: ನಿರ್ಮಲಾಸೀತಾರಾಮನ್ ಹಣಕಾಸು ಸಚಿವೆ ಆಗಿ ಸತತವಾಗಿ ಒಂಬತ್ತನೆಯ ಬಜೆಟ್ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಒಂಬತ್ತನೆಯ ಬಾರಿಗೆ ಬಜೆಟ್‌ ಮಂಡನೆ...

ಸಾಲ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ, ರಿಸರ್ವ್ ಬ್ಯಾಂಕ್ ಕರಡು ಮಾರ್ಗಸೂಚಿ ಪ್ರಕಟ

ಹೊಸದಿಲ್ಲಿ : ಸಾಲ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ, ರಿಸರ್ವ್ ಬ್ಯಾಂಕ್ ಕರಡು ಮಾರ್ಗಸೂಚಿ ಪ್ರಕಟ ಯಾವುದೇ...

ಪ್ರತಿ ಡಾಲರ್ ಗೆ 91.07 ರೂ. ಇದ್ದ ರುಪಾಯಿ ಮೌಲ್ಯ ತ್ವರಿತವಾಗಿ ಚೇತರಿಕೆ

ಮುಂಬೈ : ಸತತ 10 ದಿನಗಳಿಂದ ಇಳಿಕೆಯಾಗಿದ್ದ ರುಪಾಯಿ ಮೌಲ್ಯ ಡಿ. 17ರಂದು ಕೊಂಚ ಏರಿಕೆ....

 ಷೇರು ಮಾರುಕಟ್ಟೆ ಹೂಡಿಕೆ ಬಗ್ಗೆ ಮಾತನಾಡುವಂತೆ ನಿರ್ಮಲಾ ಸೀತಾರಾಮನ್ ಡೀಪ್‌ಫೇಕ್ ವಿಡಿಯೋ ವೈರಲ್ ವಂಚಕರ ವಿರುದ್ಧ ದೂರು

ಬೆಂಗಳೂರು:  ನಿರ್ಮಲಾ ಸೀತಾರಾಮನ್ ಡೀಪ್‌ಫೇಕ್ ವಿಡಿಯೋ ವೈರಲ್ ವಂಚಕರ ವಿರುದ್ಧ ದೂರು ಮಲ್ಲೇಶ್ವರಂ ಪೊಲೀಸರಿಂದ ಸ್ವಯಂಪ್ರೇರಿತ...