ರಾಜ್ಯದಲ್ಲಿ ಬಹು ಚರ್ಚಿತ ವಿಷಯ  ಜಾತಿ ಗಣತಿ ಸಮೀಕ್ಷೆಗೆ ಪರ ವಿರೋಧ

47

ಹಿಂದುಳಿದ ಆಯೋಗದ ಸದಸ್ಯರಿಂದಲೇ ಜಾತಿ ಗಣತಿಗೆ ವಿರೋಧ! ಅಧ್ಯಕ್ಷರ ಕಾರ್ಯವೈಖರಿ ಬಗ್ಗೆಯೂ ಆಕ್ಷೇಪ ರಾಜ್ಯದಲ್ಲಿ ಜಾತಿ ಗಣತಿ ಸಮೀಕ್ಷೆಯ ಪರ ವಿರೋಧದ ನಡುವೆ, ಹಿಂದುಳಿದ ಆಯೋಗದ ಅಧ್ಯಕ್ಷರ ಕಾರ್ಯವೈಖರಿಯ ಬಗ್ಗೆಯೇ ಈಗ ಸದಸ್ಯರು ಅಸಮಾಧಾನ ಹೊರಹಾಕಿದ್ದಾರೆ. ಜಾತಿ ಪಟ್ಟಿಯಲ್ಲಿನ ಗೊಂದಲಗಳನ್ನು ನಿವಾರಿಸದೆ ಸಮೀಕ್ಷೆ ನಡೆಸುತ್ತಿರುವ ಬಗ್ಗೆ ಆಕ್ಷೇಪಣೆಗಳು ಬಂದಿವೆ. ಸಂಪುಟ ಸಭೆಯಲ್ಲಿಯೂ ಈ ವಿಷಯವಾಗಿ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದ್ದು, ಸಮೀಕ್ಷೆಯನ್ನು ಮುಂದೂಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಜಾತಿ ಗಣತಿಯಲ್ಲಿ ಆಗಿರುವ ತಪ್ಪುಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸದಸ್ಯರೊಬ್ಬರು ಆಂತರಿಕವಾಗಿ ಪತ್ರವನ್ನು ಬರೆದಿದ್ದಾರೆ ಜಾತಿ ಪಟ್ಟಿಯಲ್ಲಿ ಇರುವ ಗೊಂದಲ ನಿವಾರಣೆ ಮಾಡಿ ಸಮೀಕ್ಷೆ ನಡೆಸಿ ಎಂಬ ಬೇಡಿಕೆಯನ್ನು ಸದಸ್ಯರು ಇಟ್ಟಿದ್ದಾರೆ ಹಿಂದೂ ಜಾತಿಗಳ ಮುಂದೆ ಕಿಶ್ಚಿಯನ್ ಸೇರ್ಪಡೆ ಮಾಡುವ ಅಗತ್ಯ ಏನಿದೆ? ಎಂಬ ಪ್ರಶ್ನೆಯನ್ನು ಕೆಲವು ಸದಸ್ಯರು ಮಾಡುತ್ತಿದ್ದಾರೆ ಆಯೋಗದ ಅಧ್ಯಕ್ಷರ ಬಗ್ಗೆ ಹಿಂದುಳಿದ ವರ್ಗಗಳ ಆಯೊಗಕ್ಕೆ ಅಸಮಾಧಾನ

ಬೆಂಗಳೂರು: ಜಾತಿ ಗಣತಿ ಸಮೀಕ್ಷೆಯ ಬಗ್ಗೆ ರಾಜ್ಯದಲ್ಲಿ ಪರ ವಿರೋಧ ಅಭಿಪ್ರಾಯಗಳು ತೀವ್ರಗೊಂಡಿವೆ. ಈ ನಡುವೆ ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷರ ಕಾರ್ಯವೈಖರಿಯ ಬಗ್ಗೆಯೂ ಸದಸ್ಯರಿಂದ ಆಕ್ಷೇಪ ವ್ಯಕ್ತವಾಗಿದೆ. ಜಾತಿ ಗಣತಿಯಲ್ಲಿ ಆಗಿರುವ ತಪ್ಪುಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸದಸ್ಯರೊಬ್ಬರು ಆಂತರಿಕವಾಗಿ ಪತ್ರವನ್ನು ಬರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿವೆ. ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್ ಅವರು ಜಾತಿ ಗಣತಿ ಸಮೀಕ್ಷೆ ಮಾಡಿಯೇ ತೀರುವ ಹಠಕ್ಕೆ ಬಿದ್ದಿದ್ದಾರೆ. ಆದರೆ ಆಯೋಗದ ಸದಸ್ಯರಲ್ಲಿ ಇದರ ಬಗ್ಗೆ ಅಸಮಾಧಾನ ಇದೆ. ಜಾತಿ ಪಟ್ಟಿಯಲ್ಲಿ ಇರುವ ಗೊಂದಲ ನಿವಾರಣೆ ಮಾಡಿ ಸಮೀಕ್ಷೆ ನಡೆಸಿ ಎಂಬ ಬೇಡಿಕೆಯನ್ನು ಸದಸ್ಯರು ಇಟ್ಟಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.”

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...