ಧರ್ಮಸ್ಥಳ ಪ್ರಕರಣ ಇಂದು  ಮೂರನೇ ಬಾರಿ ನ್ಯಾಯಾಲಯದಲ್ಲಿ ಚಿನ್ನಯ್ಯನ ಹೇಳಿಕೆ

60

ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಪ್ರಕರಣದ ಸಾಕ್ಷಿ ಚಿನ್ನಯ್ಯ, ಆರೋಪಿಯಾಗಿ ಜೈಲು ಸೇರಿದ್ದು, ಸೆಪ್ಟೆಂಬರ್ 23 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಮೂರನೇ ಬಾರಿಗೆ ಹೇಳಿಕೆ ದಾಖಲಿಸಲಿದ್ದಾನೆ. ಈ ಹಿಂದೆ ಆತನ ಹೇಳಿಕೆ ಆಧಾರದ ಮೇಲೆ ಎಸ್‌ಐಟಿ ತನಿಖೆ ನಡೆದಿತ್ತು.

ಚಿನ್ನಯ್ಯನನ್ನು ಸೆ.23ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ಆತನ ಹೇಳಿಕೆ ದಾಖಲಿಸುವ ಕಾರ್ಯ ನಡೆಯಲಿದೆ. ಚಿನ್ನಯ್ಯ ಆರಂಭದಲ್ಲಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಮುಚ್ಚಿದ ಕೋಣೆಯಲ್ಲಿ ಹೇಳಿಕೆ ದಾಖಲಿಸಿದ್ದ ಮೂರನೇ ಬಾರಿಗೆ ಆತ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲಿದ್ದಾನೆ.

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತ ಪ್ರಕರಣದ ಸಾಕ್ಷಿ ದೂರುದಾರನಾಗಿ ಬಂದು ಇದೀಗ ಆರೋಪಿಯಾಗಿ ಜೈಲು ಸೇರಿರುವ ಚಿನ್ನಯ್ಯನನ್ನು ಸೆ.23ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ಆತನ ಹೇಳಿಕೆ ದಾಖಲಿಸುವ ಕಾರ್ಯ ನಡೆಯಲಿದೆ. ಚಿನ್ನಯ್ಯ ಶಿವಮೊಗ್ಗ ಜೈಲಿನಲ್ಲಿದ್ದು, ಆತನನ್ನು ಸೆ.18ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ಆತ ಬಿಎನ್‌ಎಸ್‌ಎಸ್‌ 183 ಅಡಿಯಲ್ಲಿಹೇಳಿಕೆ ನೀಡುವುದಾಗಿ ನ್ಯಾಯಾಧೀಶರ ಮುಂದೆ ತಿಳಿಸಿದ್ದ.

ಅದಕ್ಕೆ ನ್ಯಾಯಾಧೀಶರು ಸೆ.23ಕ್ಕೆ ದಿನಾಂಕ ನಿಗದಿಪಡಿಸಿದ್ದರು. ಇದೀಗ ಈತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತಿದೆ. ಚಿನ್ನಯ್ಯ ಆರಂಭದಲ್ಲಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಮುಚ್ಚಿದ ಕೋಣೆಯಲ್ಲಿ ಹೇಳಿಕೆ ದಾಖಲಿಸಿದ್ದ. ಇದರ ಆಧಾರದ ಮೇಲೆಯೇ ಎಸ್‌ಐಟಿ ರಚನೆಯಾಗಿ ತನಿಖೆ ನಡೆದಿತ್ತು. ಇದಾದ ಬಳಿಕ ಬುರುಡೆ ವಿಚಾರದಲ್ಲಿ ಚಿನ್ನಯ್ಯನನ್ನು ಎಸ್‌ಐಟಿ ಬಂಧಿಸಿದ ಬಳಿಕ ಮತ್ತೊಮ್ಮೆ ಆತನ ಹೇಳಿಕೆ ದಾಖಲಿಸಲಾಗಿತ್ತು. ಇದೀಗ ಮೂರನೇ ಬಾರಿಗೆ ಆತ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲಿದ್ದಾನೆ.”

Leave a comment

Leave a Reply

Your email address will not be published. Required fields are marked *

Related Articles

ಜೂನ್ 27 ರಂದು ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ :: ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ಬೆಂಗಳೂರು: ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ ಜೂನ್ 27 ರಂದು...

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕಾರ್ಯ ಪ್ರಾರಂಭಿಸಿದ ::ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು: ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮಾರನೇ ದಿನವೇ ಆಡಳಿತ ಯಂತ್ರಕ್ಕೆ ಚುರುಕು...

ಜಾತಿ, ಧರ್ಮ ಯಾವುದೇ ಪ್ರಭಾವಕ್ಕೂ ಮಣಿಯಬೇಡಿ: ಅಧಿಕಾರಿಗಳಿಗೆ ಸೂಚನೆ ನೀಡಿದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಬೆಂಗಳೂರು: ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ಇಂದು ವಿಧಾನಸೌಧದಲ್ಲಿ...

ಸಂಪುಟ ರಚನೆಯ ಕಸರತ್ತು ದೆಹಲಿಗೆ ತೆರಳಿದ ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಸಂಪುಟ ರಚನೆಯ ಕಸರತ್ತು ಆರಂಭಿಸಿದ್ದು, ಸೋಮವಾರ ದೆಹಲಿಗೆ ತೆರಳಿ...