ವಿಮಾನ ನಿಲ್ದಾಣದ ಉದ್ಘಾಟನೆಗೆ ಸಿದ್ಧವಾಗುತ್ತಿರುವ ವಿಜಯಪುರ

57

“ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆಗೆ ವೇಗದ ಸಿದ್ಧತೆ: ಆಸ್ಟ್ರಿಯಾದಿಂದ ಬಂದ ಅಗ್ನಿಶಾಮಕ ವಾಹನ! ಇನ್ನೊಂದೇ ಹೆಜ್ಜೆ ಬಾಕಿ ವಿಜಯಪುರ ವಿಮಾನ ನಿಲ್ದಾಣದ ಉದ್ಘಾಟನೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಅಗತ್ಯದ ಪಟ್ಟಿಯಲ್ಲಿದ್ದ, ಅಗ್ನಿಶಾಮಕ ವಾಹನವನ್ನು ಆಸ್ಟ್ರಿಯಾದಿಂದ 24 ಕೋಟಿ ರೂಪಾಯಿ ವೆಚ್ಚದಲ್ಲಿ ತರಿಸಲಾಗಿದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದು, ವಿಮಾನ ನಿಲ್ದಾಣದ ಉದ್ಘಾಟನೆ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ವಿಜಯಪುರ ವಿಮಾನ ನಿಲ್ದಾಣಕ್ಕೆ ಆಸ್ಟ್ರಿಯಾದಿಂದ ಬಂದಿಳಿದ 2 ಅಗ್ನಿಶಾಮಕ ವಾಹನ ತುರ್ತು ಸಂದರ್ಭಗಳಲ್ಲಿ 160 ಮೀಟರಿನವರೆಗೂ ನೀರನ್ನು ಹಾಯಿಸಿ, ಬೆಂಕಿಯನ್ನು ನಂದಿಸುವ ಸಾಮರ್ಥ್ಯ ಹೊಂದಿವೆ. ಆಸ್ಟ್ರಿಯಾದಿಂದ ಹಡಗಿನಲ್ಲಿ ಮುಂಬೈಗೆ ಬಂದಿಳಿದ ಈ ವಾಹನಗಳನ್ನು, ಅಲ್ಲಿಂದ ಟ್ರಕ್ ಮೂಲಕ ವಿಜಯಪುರಕ್ಕೆ ಸಾಗಿಸಿಕೊಂಡು ಬರಲಾಗಿದೆ

ವಿಜಯಪುರ: ಉದ್ಘಾಟನೆಗೆ ಸಜ್ಜಾಗಿರುವ ಇಲ್ಲಿನ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಅಗತ್ಯವಾದ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು ದೂರದ ಆಸ್ಟ್ರಿಯಾದಿಂದ ಸೋಮವಾರ ಬಂದು ತಲುಪಿವೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ಈ ಅಗ್ನಿಶಾಮಕ ವಾಹನಗಳು ಕಂಪ್ಯೂಟರೀಕೃತವಾಗಿದ್ದು, ಜಾಗತಿಕ ಟೆಂಡರ್ ಅಡಿಯಲ್ಲಿ ಆಸ್ಟ್ರಿಯಾದಿಂದ ಪೂರೈಕೆಯಾಗಿವೆ.

ಇವುಗಳ ಬೆಲೆ ಅಂದಾಜು 24 ಕೋಟಿ ರೂಪಾಯಿ. ಇವು ತುರ್ತು ಸಂದರ್ಭಗಳಲ್ಲಿ 160 ಮೀಟರಿನವರೆಗೂ ನೀರನ್ನು ಹಾಯಿಸಿ, ಬೆಂಕಿಯನ್ನು ನಂದಿಸುವ ಸಾಮರ್ಥ್ಯ ಹೊಂದಿವೆ. ಈ ಮೂಲಕ ನಾಗರಿಕ ವಿಮಾನಯಾನ ಮಹಾ‌ ನಿರ್ದೇಶನಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಹೇಳಿದ್ದ ಮತ್ತೊಂದು ಅಗತ್ಯ ಪೂರೈಸಲಾಗಿದೆ ಎಂದಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಾಳೆ ನಡೆಯುವ ಸಾಧ್ಯತೆ

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಜೊತೆ ಸಿದ್ದರಾಮಯ್ಯ,...

ರಾಜ್ಯಾದ್ಯಂತ ಹೋಮ್ ಸ್ಟೇ ನೋಂದಣಿ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ; 500 ಹೋಮ್‌ಸ್ಟೇ ಮಾಲೀಕರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಮ್‌ಸ್ಟೇಗಳ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇಲ್ಲಿಯವರೆಗೆ 500ಕ್ಕೂ ಹೆಚ್ಚು ಹೋಮ್‌ಸ್ಟೇ...

ಬಿಡದಿ ಟೌನ್‌ಶಿಪ್‌ : ಅನಿತಾ ಕುಮಾರಸ್ವಾಮಿ, ನಿಖಿಲ್‌ಗೆ ಸೇರಿದ ಭೂಮಿಗೂ ಅಧಿಸೂಚನೆ ಹೊರಡಿಸಿದ ರಾಜ್ಯ ಸರಕಾರ

ಬೆಂಗಳೂರು: ಬಿಡದಿ ಟೌನ್ ಶಿಪ್ ಜಟಾಪಟಿ ಮತ್ತಷ್ಟು ತೀವ್ರಗೊಂಡಿದ್ದು, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ...

ಹೊಸಮುಖಗಳಿಗೆ ಆದ್ಯತೆ ನೂತನ ಸಚಿವರ ಪರಿಷ್ಕೃತ ಪಟ್ಟಿ ಹೈಕಮಾಂಡ್ ಬಳಿ; ಸಿಎಂ-ಮಾಜಿ ಸಿಎಂ ಬೆಂಗಳೂರಿಗೆ ವಾಪಸ್

ದೆಹಲಿದಲ್ಲಿ ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಮಹತ್ವದ ಸಭೆಗಳನ್ನು ನಡೆಸಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ...