ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಗಫೂರ್, ನಾರಾಯಣ ಗುರು ಪ್ರಾಧಿಕಾರಕ್ಕೆ ಮುದ್ರಾಡಿ ಮಂಜುನಾಥ ಪೂಜಾರಿ ನೇಮಕ ಸ್ವಾಗತಾರ್ಹ:ನವೀನ್ ಸಾಲ್ಯಾನ್

72

ಉಡುಪಿ:ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಎಂ ಏ ಗಫೂರ್ ಅವರನ್ನು ನೇಮಕ ಮಾಡಿ ಕರ್ನಾಟಕ ಕಾಂಗ್ರೆಸ್ ಸರಕಾರ ಆದೇಶ ಹೊರಡಿಸಿದೆ. ಆಸ್ಕರ್ ಫರ್ನಾಂಡಿಸ್ ಅವರ ನಿಕಟವರ್ತಿಯಾಗಿದ್ದ ಎಂ ಏ ಗಫೂರ್ ಅವರು ಹಲವಾರು ವರ್ಷಗಳ ಕಾಲ ಉಡುಪಿ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇದೇ ವೇಳೆ ನಾರಾಯಣ ಗುರು ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷರಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮುದ್ರಾಡಿ ಮಂಜುನಾಥ ಪೂಜಾರಿ ಇವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯದ ಗೌರವಾನ್ವಿತ ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಅವರ ಅತ್ಯಂತ ಸಮೀಪದಲ್ಲಿ ಇರುವ ನಾಯಕರಲ್ಲಿ ಮಂಜುನಾಥ್ ಪೂಜಾರಿ ಹಿರಿಯರು.

ಈ ಹಿಂದೆ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಉನ್ನತ ರೀತಿಯಲ್ಲಿ ಪಕ್ಷ ಸಂಘಟನೆ ಮಾಡಿದ್ದರು. ಪಕ್ಷಕ್ಕಾಗಿ ಹಲವಾರು ವರ್ಷಗಳಿಂದ ದುಡಿದು ಸರ್ಕಾರದ ಈ ಗೌರವದ ಸ್ಥಾನವನ್ನು ಅಲಂಕರಿಸಿದ ಇಬ್ಬರು ಹಿರಿಯ ನಾಯಕರ ನೇಮಕವನ್ನು ಕಾಂಗ್ರೆಸ್ ಮುಖಂಡ ನವೀನ್ ಸಾಲ್ಯಾನ್ ಸ್ವಾಗತಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಪಡುಬಿದ್ರಿ  ಕಡಲು ಕೊರೆತದಿಂದ ರಕ್ಷಣೆಗೆ  ತಡೆಗೋಡೆ ನಿರ್ಮಾಣಕ್ಕೆ ಸಚಿವ ಯು.ಟಿ. ಖಾದರ್ ಅವರಿಗೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ ವಿ ಅಮೀನ್ ಮನವಿ

ಪಡುಬಿದ್ರಿ, ಜು. 4:** ಉಡುಪಿ ಜಿಲ್ಲೆಯ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ...

ಕಾರ್ಕಳ ಟೈಗರ್ಸ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ರಕ್ತದೊತ್ತಡ–ಮಧುಮೇಹ ತಪಾಸಣೆ ಶಿಬಿರ

ಕಾರ್ಕಳ ಟೈಗರ್ಸ್ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್...

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...