ಉತ್ತರ ಕರ್ನಾಟಕದಲ್ಲಿ ಪ್ರವಾಹ, 6.64 ಲಕ್ಷ ಹೆಕ್ಟೇರ್ ಬೆಳೆ ನಾಶ, ಕೃಷಿ ಉತ್ಪಾದನೆಯಲ್ಲಿ ಭಾರೀ ಇಳಿಕೆ ಸಾಧ್ಯತೆ ರಾಜ್ಯದಲ್ಲಿ ಉತ್ತರ ಕರ್ನಾಟಕದಲ್ಲಿ ಅತಿವೃಷ್ಟಿ ಮತ್ತು ದಕ್ಷಿಣ ಕರ್ನಾಟಕದಲ್ಲಿ ಮಳೆ ಕೊರತೆಯಿಂದಾಗಿ 6.64 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಕೃಷಿ ಬೆಳೆಗಳು ನಾಶವಾಗಿವೆ. ಇದರಿಂದ ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಲಕ್ಷಾಂತರ ಟನ್‌ನಷ್ಟು ಗಣನೀಯ ಇಳಿಕೆಯಾಗುವ ಆತಂಕ ಎದುರಾಗಿದೆ. ಹೆಸರು, ತೊಗರಿ, ಹತ್ತಿ, ಉದ್ದು ಬೆಳೆಗಳಿಗೆ ಹೆಚ್ಚಿನ ಹಾನಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೈಲೈಟ್ಸ್: ಈ ಬಾರಿ ಉತ್ತರ ಕರ್ನಾಟಕದಲ್ಲಿ ಅತಿವೃಷ್ಟಿಯಿಂದ 6.64 ಲಕ್ಷ ಹೆಕ್ಟೇರ್ ಕೃಷಿ ಬೆಳೆ ನಾಶ ಈ ಬಾರಿ ಮುಂಗಾರು ಕೃಷಿ ಉತ್ಪಾದನೆಯಲ್ಲಿ ಗಣನೀಯ ಇಳಿಕೆ ಸಂಭವ ಕೃಷಿ ಇಲಾಖೆಯ ಅಂದಾಜಿನ ಪ್ರಕಾರ 2024-25ರಲ್ಲಿ 83.97 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ 151.57 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯಾಗಿತ್ತು, ಆದರೆ ಈ ಬಾರಿ ಒಟ್ಟು ಇಳುವರಿ ಪ್ರಮಾಣದಲ್ಲಿ ಕುಂಠಿತ ಸಾಧ್ಯತೆ ಕಲಬುರಗಿಯಲ್ಲಿ ಪ್ರವಾಹದಿಂದ ಜಲಾವೃತವಾಗಿರುವ ಗದ್ದೆಗಳು

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಉತ್ತರ ಕರ್ನಾಟಕ ಭಾಗದಲ್ಲಿ ಅತಿವೃಷ್ಟಿ ಮತ್ತು ದಕ್ಷಿಣ ಕರ್ನಾಟಕದಲ್ಲಿ ಅನಾವೃಷ್ಟಿಯಲ್ಲದಿದ್ದರೂ ಅಗತ್ಯ ಪ್ರಮಾಣದಲ್ಲಿ ಮಳೆಯಾಗದ ಕಾರಣ ಈಗಾಗಲೇ 6.64 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಕೃಷಿ ಬೆಳೆಗಳು ನಾಶವಾಗಿವೆ. ಇದರ ಪರಿಣಾಮ ಲಕ್ಷಾಂತರ ಟನ್ ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಇಳಿಕೆಯಾಗುವ ಆತಂಕ ಸೃಷ್ಟಿಯಾಗಿದೆ. ಅದರಲ್ಲೂ ಉದ್ದು, ಹೆಸರು ಕಾಳು, ಭತ್ತ, ಸೂರ್ಯಕಾಂತಿ, ಹತ್ತಿ, ತೊಗರಿ ಮತ್ತಿತರ ಬೆಳೆಗಳು ಹೆಚ್ಚಿನ ಪ್ರಮಾಣದಲ್ಲಿ ನಷ್ಟಕ್ಕೆ ಒಳಗಾಗಿದ್ದು, ಇನ್ನೂ ಮಳೆ ಬೀಳುತ್ತಿರುವುದರಿಂದ ಮತ್ತಷ್ಟು ಪ್ರದೇಶದಲ್ಲಿ ಬೆಳೆ ನಾಶವಾಗಲಿದೆ. ಅಲ್ಲದೆ, ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಬಿತ್ತನೆ ಮಾಡಲಾಗಿದ್ದರೂ, ಸಕಾಲಕ್ಕೆ ಮಳೆ ಬೀಳದೆ ಬೆಳೆಗಳಿಗೆ ತೊಂದರೆಯಾಗಿದೆ. ಹೀಗಾಗಿ, ರಾಜ್ಯದಲ್ಲಿ ಈ ಬಾರಿ ಮುಂಗಾರು ಕೃಷಿ ಉತ್ಪನ್ನಗಳ ಉತ್ಪಾದನೆಯಲ್ಲಿ ಗಣನೀಯವಾಗಿ ಇಳಿಕೆಯಾಗುವ ಸಾಧ್ಯತೆಯಿದೆ.

ಮೊಹ್ಸಿನ್ ನಖ್ವಿ ಟ್ವೀಟ್ ರಾಜ್ಯದಲ್ಲಿ ಈ ಬಾರಿ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮುಗಳಲ್ಲಿ ಒಟ್ಟಾರೆ 85.21 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಬಿತ್ತನೆ ಕೈಗೊಳ್ಳುವ ಗುರಿ ಹೊಂದಲಾಗಿದ್ದು, 148.48 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆ ಗುರಿ ಹಾಕಿಕೊಳ್ಳಲಾಗಿದೆ. ಅದೇ ರೀತಿ ಮುಂಗಾರಿನಲ್ಲಿ 55.87 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಗೆ 109.23 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯಗಳ ಉತ್ಪಾದನೆಯ ಗುರಿಯನ್ನು ಹೊಂದಲಾಗಿದೆ ಎಂದು ಆರ್ಥಿಕ ಸಾಂಖ್ಯಿಕ ಇಲಾಖೆ ಅಂದಾಜು ಮಾಡಿದೆ.”
Leave a comment