ಡಿಸಿಎಫ್ ಸ್ಪಷ್ಟನೆ : ಅಭಿಮನ್ಯುವೇ ಮುಂದಿನ ವರ್ಷವು ಅಂಬಾರಿ ಹೊರಲಿದ್ದಾನೆ

41

60 ವರ್ಷ ಮೇಲ್ಪಟ್ಟ ಆನೆಗಳನ್ನು ಕಠಿಣ ಕೆಲಸಗಳಿಗೆ ಬಳಸುವಂತಿಲ್ಲ ಎಂಬ ನಿಯಮವಿದೆ. ಸದ್ಯಕ್ಕೆ ಭೀಮ, ಮಹೇಂದ್ರ, ಏಕಲವ್ಯ, ಧನಂಜಯ ಸೇರಿದಂತೆ ಇತರೆ ಆನೆಗಳು ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಮೈಸೂರಿಗೆ ಆಗಮಿಸಿದ್ದ 3 ಹೊಸ ಆನೆಗಳ ಜತೆಗೆ ಎಲ್ಲಾ 14 ಆನೆಗಳು ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು ಈ ಬಾರಿಯ ವಿಶೇಷ

ಮೈಸೂರು: ಮುಂದಿನ ವರ್ಷವೂ ಕ್ಯಾಪ್ಟನ್‌ ಅಭಿಮನ್ಯುವೇ 750 ಕೆಜಿ ತೂಕದ ಅಂಬಾರಿ ಹೊರುತ್ತಾನೆ ಎಂದು ಡಿಸಿಎಫ್‌ ಡಾ.ಐ.ಬಿ.ಪ್ರಭುಗೌಡ ತಿಳಿಸಿದ್ದಾರೆ. 60 ವರ್ಷ ಮೇಲ್ಪಟ್ಟ ಆನೆಗಳನ್ನು ಕಠಿಣ ಕೆಲಸಗಳಿಗೆ ಬಳಸುವಂತಿಲ್ಲ ಎಂಬ ನಿಯಮವಿದೆ. ಪ್ರಸ್ತುತ ಅಭಿಮನ್ಯುವಿಗೆ 59 ವರ್ಷ .

ಈ ಹಿನ್ನೆಲೆಯಲ್ಲಿ ಮುಂದಿನ ವರ್ಷ ಅಭಿಮನ್ಯು ಅಂಬಾರಿ ಹೊರುತ್ತಾನೆಯೇ ಎಂಬ ಪ್ರಶ್ನೆ ಎದ್ದಿತ್ತು. ಇದೀಗ ಡಿಸಿಎಫ್‌ ಪ್ರಭುಗೌಡ ಸ್ಪಷ್ಟನೆ ನೀಡಿದ್ದಾರೆ. ”ಮುಂದಿನ ವರ್ಷವೂ ಕ್ಯಾಪ್ಟನ್‌ ಅಭಿಮನ್ಯುವೇ ಅಂಬಾರಿ ಹೊತ್ತು ಸಾಗುತ್ತಾನೆ. ಆ ನಂತರದ ವರ್ಷಗಳಲ್ಲಿಅಂಬಾರಿ ಹೊತ್ತು ಸಾಗಲು ಮೂರ್ನಾಲ್ಕು ಆನೆಗಳನ್ನು ಸಿದ್ಧಗೊಳಿಸಲಾಗುತ್ತಿದೆ.

ಸದ್ಯಕ್ಕೆ ಭೀಮ, ಮಹೇಂದ್ರ, ಏಕಲವ್ಯ, ಧನಂಜಯ ಸೇರಿದಂತೆ ಇತರೆ ಆನೆಗಳು ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅಂದಿನ ಸಂದರ್ಭಕ್ಕೆ ತಕ್ಕಂತೆ ಅಂಬಾರಿ ಆನೆಯನ್ನು ಆಯ್ಕೆ ಮಾಡಲಾಗುತ್ತದೆ” ಎಂದು ತಿಳಿಸಿದರು. ”ಪ್ರತಿಬಾರಿ ಕೆಲ ಆನೆಗಳನ್ನು ಅಂತಿಮ ಕ್ಷಣದಲ್ಲಿ ಮೆರವಣಿಗೆ ಯಿಂದ ಹೊರಗಿಡಲಾಗುತ್ತಿತ್ತು. ಅಂತಿಮವಾಗಿ 9 ಆನೆಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳುತ್ತಿದ್ದವು. ಇದೇ ಮೊದಲ ಬಾರಿ ಮೈಸೂರಿಗೆ ಆಗಮಿಸಿದ್ದ 3 ಹೊಸ ಆನೆಗಳ ಜತೆಗೆ ಎಲ್ಲಾ 14 ಆನೆಗಳು ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು ಈ ಬಾರಿಯ ವಿಶೇಷ” ಎಂದು ತಿಳಿಸಿದರು.”

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...