ಕೋಲ್ಡ್ರಿಫ್ ತಯಾರಕರಿಗೆ ತಕ್ಷಣದ ಉತ್ಪಾದನೆಯನ್ನು ನಿಲ್ಲಿಸುವ ಆದೇಶ ನೀಡಿದ ಕೇಂದ್ರ ಸರ್ಕಾರ

42

ಮಧ್ಯ ಪ್ರದೇಶ, ರಾಜಸ್ತಾನ, ತಮಿಳು ನಾಡು ಬ್ಯಾನ್ ಮಧ್ಯಪ್ರದೇಶದ ಆಹಾರ ಮತ್ತು ಔಷಧ ಆಡಳಿತ (FDA) ಯಿಂದ ಅನುಮೋದನೆ ಪಡೆದ ನಂತರ ಕೇಂದ್ರ ಆರೋಗ್ಯ ಸಚಿವಾಲಯ ಸಿರಪ್‌ನಲ್ಲಿ ಯಾವುದೇ DEG ಕಂಡುಬಂದಿಲ್ಲ ಎಂದು ಹೇಳಿತ್ತು. 

ನವದೆಹಲಿ: ಮಧ್ಯಪ್ರದೇಶ ಮತ್ತು ರಾಜಸ್ತಾನದಲ್ಲಿ ಮಕ್ಕಳ ಸಾವಿಗೆ ಕಾರಣವಾದ ವಿವಾದಾತ್ಮಕ ಕೆಮ್ಮಿನ ಸಿರಪ್ ಕೋಲ್ಡ್ರಿಫ್‌ನಲ್ಲಿ ಕೈಗಾರಿಕಾ ರಾಸಾಯನಿಕ ಡೈಥಿಲೀನ್ ಗ್ಲೈಕಾಲ್ (DEG) ಇಲ್ಲ ಎಂದು ನಿರಾಕರಿಸಿದ ಕೆಲವೇ ಗಂಟೆಗಳ ನಂತರ, ಕೇಂದ್ರ ಆರೋಗ್ಯ ಸಚಿವಾಲಯವು ಯೂ-ಟರ್ನ್ ಹೊಡೆದಿದೆ. ತಮಿಳುನಾಡಿನ ಆಹಾರ ಮತ್ತು ಔಷಧ ಆಡಳಿತ ಇಲಾಖೆಯ ವರದಿಯ ಆಧಾರದ ಮೇಲೆ ಡೈಥಿಲೀನ್ ಗ್ಲೈಕಾಲ್ ಇದೆ ಎಂದು ಹೇಳಿದೆ. ಮಧ್ಯಪ್ರದೇಶದ ಆಹಾರ ಮತ್ತು ಔಷಧ ಆಡಳಿತ (FDA) ಯಿಂದ ಅನುಮೋದನೆ ಪಡೆದ ನಂತರ ಕೇಂದ್ರ ಆರೋಗ್ಯ ಸಚಿವಾಲಯ ಸಿರಪ್‌ನಲ್ಲಿ ಯಾವುದೇ DEG ಕಂಡುಬಂದಿಲ್ಲ ಎಂದು ಹೇಳಿತ್ತು.

ನಿನ್ನೆ ದೃಢೀಕರಣ ನಂತರ ತಮಿಳುನಾಡು ಮೊದಲು ಸಿರಪ್ ನ್ನು ನಿಷೇಧಿಸಿತು, ನಂತರ ಮಧ್ಯಪ್ರದೇಶ ಮತ್ತು ಕೇರಳ ರಾಜ್ಯಗಳು ದೃಢಪಡಿಸಿವೆ. ಕೋಲ್ಡ್ರಿಫ್ ಕೆಮ್ಮಿನ ಸಿರಪ್ ನ್ನು ಶ್ರೀಸನ್ ಫಾರ್ಮಾದ ಕಾಂಚೀಪುರಂ ಘಟಕದಲ್ಲಿ ತಯಾರಿಸಲಾಗುತ್ತಿತ್ತು. ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಒಂಬತ್ತು ಮಕ್ಕಳು ಮೃತಪಟ್ಟಿದ್ದಾರೆ. ಏಳು ಮಕ್ಕಳು ಕೆಮ್ಮಿನ ಸಿರಪ್‌ನಿಂದ ಮೃತಪಟ್ಟಿದ್ದರು. ರಾಜಸ್ತಾನದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ಕೆಮ್ಮು ಸಿರಪ್ ದಾಸ್ತಾನುಗಳನ್ನು ತಮಿಳುನಾಡು, ಮಧ್ಯಪ್ರದೇಶ ಮತ್ತು ರಾಜಸ್ತಾನಗಳಿಗೆ ವಿತರಿಸಲಾಯಿತು.

ಮಧ್ಯಪ್ರದೇಶ ಸರ್ಕಾರದ ಕೋರಿಕೆಯ ಮೇರೆಗೆ, ತಮಿಳುನಾಡು ಎಫ್‌ಡಿಎ ಕಾಂಚೀಪುರಂನಲ್ಲಿರುವ ಮೆಸರ್ಸ್ ಸ್ರೆಸನ್ ಫಾರ್ಮಾ ಉತ್ಪಾದನಾ ಆವರಣದಿಂದ ಕೋಲ್ಡ್ರಿಫ್ ಕೆಫ್ ಸಿರಪ್‌ನ ಮಾದರಿಗಳನ್ನು ತೆಗೆದುಕೊಂಡಿದೆ. ಮಾದರಿಗಳನ್ನು ಪರೀಕ್ಷಿಸಿದ ಫಲಿತಾಂಶಗಳನ್ನು ಮೊನ್ನೆ 3ರಂದು ತಡವಾಗಿ ಹಂಚಿಕೊಳ್ಳಲಾಗಿದೆ. ಅವುಗಳಲ್ಲಿ ಅನುಮತಿಯ ಮಿತಿಗಿಂತ ಹೆಚ್ಚಿನ ಡಿಇಜಿ ಇತ್ತು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಮಾದರಿಗಳು ಡಿಇಜಿಯೊಂದಿಗೆ ಕಲಬೆರಕೆ ಎಂದು ಕಂಡುಬಂದ ನಂತರ ತಮಿಳುನಾಡು ಔಷಧ ನಿಯಂತ್ರಣ ಇಲಾಖೆ ಶುಕ್ರವಾರ ಕೋಲ್ಡ್ರಿಫ್ ತಯಾರಕರಿಗೆ ತಕ್ಷಣದ ಉತ್ಪಾದನೆಯನ್ನು ನಿಲ್ಲಿಸುವ ಆದೇಶ ನೀಡಿದೆ.”

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...