ಅಕ್ಟೋಬರ್ 23ಕ್ಕೆ ಶಾಲೆಗಳು ಪುನರಾರಂಭ –  ದಸರಾ ರಜೆ ವಿಸ್ತರಣೆ

24

ಕರ್ನಾಟಕ ಸರ್ಕಾರವು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ದಸರಾ ರಜೆಯನ್ನು ವಿಸ್ತರಣೆ ಮಾಡಿದೆ. ಜಾತಿ ಗಣತಿ ದಿನಾಂಕ ವಿಸ್ತರಣೆಯಾದ ಕಾರಣ ಶಾಲೆಗಳಿಗೆ ದಸರಾ ಹೆಚ್ಚುವರಿ ರಜೆ. ದೀಪಾವಳಿ ಹಬ್ಬ ಮುಗಿದ ಬಳಿಕ ಅಕ್ಟೋಬರ್ 23ಕ್ಕೆ ಶಾಲೆಗಳು ಪುನರಾರಂಭ. ದಸರಾ ರಜೆ ವಿಸ್ತರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿ ಗಣತಿ ದಿನಾಂಕ ವಿಸ್ತರಣೆಯಾದ ಹಿನ್ನೆಲೆ ಕರ್ನಾಟಕ ಸರ್ಕಾರವು ಶಾಲೆಗಳ ದಸರಾ ರಜೆಯನ್ನು ವಿಸ್ತರಣೆ ಮಾಡಿದೆ. ಈ ಮೂಲಕ ಅಕ್ಟೋಬರ್‌ 7 ಕ್ಕೆ ಮುಕ್ತಾಯವಾಗಬೇಕಿದ್ದ ರಜೆ ಅಕ್ಟೋಬರ್ 18ವರೆಗೂ ವಿಸ್ತರಣೆಯಾಗಿದೆ. ಇನ್ನು ಶಾಲೆಗಳು ಪುನರಾರಂಭವಾಗುವುದು ಅಕ್ಟೋಬರ್ 23ಕ್ಕೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಜಾತಿ ಗಣತಿ ಸಮೀಕ್ಷೆ ಕಾರ್ಯವನ್ನು ಶಿಕ್ಷಕರು ಕೈಗೊಂಡಿದ್ದಾರೆ. ನಿಗದಿತ ಕಾಲಾವಧಿಯಲ್ಲಿ ಜಾತಿ ಗಣತಿ ಕಾರ್ಯ ಪೂರ್ಣಗೊಂಡಿಲ್ಲ.

ಗಣತಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಹೀಗಾಗಿ, ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ದಸರಾ ರಜೆಯನ್ನು ವಿಸ್ತರಣೆ ಮಾಡಲಾಗಿದೆ. ಯಾರ ಒತ್ತಡಕ್ಕೂ ಸಿದ್ದರಾಮಯ್ಯ ಡೋಂಟ್‌ಕೇರ್‌, ಅಂದುಕೊಂಡಂತೆ ಸಮೀಕ್ಷೆ ಶುರು, ಸಿಎಂ ದಿಟ್ಟ ನಡೆ ಹಿಂದಿನ ಶಕ್ತಿ ಯಾರು? ಶಾಲಾ ಶಿಕ್ಷಕರ ಮನವಿ ಮೇರೆಗೆ ಕ್ರಮ ವಿಧಾನ‌ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ‌ ಕಾಲಾವಕಾಶ ಕೇಳಿ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿ 8 ವರ್ಕಿಂಗ್‌ ಡೇಸ್‌ ರಜೆ ಘೋಷಿಸಲಾಗಿದೆ. ಜತೆಗೆ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೆಚ್ಚುವರಿ ತರಗತಿಯನ್ನು ನಡೆಸಿ ಸರಿದೂಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಪಿಯು ಉಪನ್ಯಾಸಕರಿಗೆ ಸಮೀಕ್ಷೆಯಿಂದ ವಿನಾಯ್ತಿ ಅಕ್ಟೋಬರ್ 12 ರಿಂದ ದ್ವಿತೀಯ ಪಿಯು ಮಧ್ಯಂತರ ಪರೀಕ್ಷೆ ನಡೆಯುತ್ತಿರುವುದರಿಂದ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯ್ತಿ ನೀಡಲಾಗಿದೆ ಎಂದರು. 1.2 ಲಕ್ಷ ಶಿಕ್ಷಕರು ಸಮೀಕ್ಷೆಯಲ್ಲಿ ಸೆಪ್ಟೆಂಬರ್ 2 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇವತ್ತು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಕೊಪ್ಪಳ ಶೇ97 ಆಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ67 ರಷ್ಟು ಆಗಿದೆ. ಹೀಗೆ ವ್ಯತ್ಯಾಸಗಳಿವೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗ ಚರ್ಚಿಸಿದ್ದಾರೆ. 1 ಲಕ್ಷ 20 ಸಾವಿರ ಶಿಕ್ಷಕರು ಸೇರಿ ಒಂದು ಲಕ್ಷ ಅರವತ್ತು ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿದ್ದಾರೆ ಎಂದು ಹೇಳಿದರು.

ದೀಪಾವಳಿ ಹಬ್ಬದೊಳಗೆ ಸಮೀಕ್ಷೆ ಪೂರ್ಣಕ್ಕೆ ಸೂಚನೆ ಬೆಂಗಳೂರು ನಗರದಲ್ಲಿ 6700 ಜನ ಶಿಕ್ಷಕರು ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ 46 ಲಕ್ಷ ಮನೆಗಳಿವೆ. ದಿನಕ್ಕೆ 10 -15 ಮನೆಗಳ ಸಮೀಕ್ಷೆ ನಡೆಸುವ ಗುರಿ ನೀಡಲಾಗಿದೆ. ಬೆಂಗಳೂರಿನಲ್ಲಿ ನರಕ ಚತುರ್ದಷಿ ಒಳಗೆ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ ಎಂದು ಸಿಎಂ ತಿಳಿಸಿದರು. ಮೃತ ಶಿಕ್ಷಕರಿಗೆ 20 ಲಕ್ಷ ರೂ ಪರಿಹಾರ ಸಮೀಕ್ಷೆ ನಡೆಯುವಾಗ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ.

ಇವರಿಗೆ ತಲಾ 20 ಲಕ್ಷ ಪರಿಹಾರ ನೀಡಲಾಗುವುದು ಎಂದರು‌. ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲುಒಪ್ಪದ, ಹಿಂದೇಟು ಹಾಕುವವರ ವಿರುದ್ಧ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ. ಗ್ರೇಟರ್‌ ಬೆಂಗಳೂರು ಏರಿಯಾದಲ್ಲಿ ತಡವಾಗಿ ಸಮೀಕ್ಷೆ ಶುರುವಾಗಿದೆ. ಚುನಾವಣಾ ಆಯೋಗದ ಕೆಲಸ ಮತ್ತು ಇತರೆ ತರಬೇತಿ ಇದ್ದಿದ್ದರಿಂದ ತಡವಾಗಿ ಶುರುವಾಗಿದೆ. ಆದ್ದರಿಂದ ಗ್ರೇಟರ್‌ ಬೆಂಗಳೂರು ಏರಿಯಾದಲ್ಲಿ ಸಮೀಕ್ಷೆ ಪ್ರಮಾಣ ಕಡಿಮೆ ಇದೆ ಎಂದು ಸಿಎಂ ಮಾಹಿತಿ ನೀಡಿದರು. ದೀಪಾವಳಿ ಹಬ್ಬದ ಬಳಿಕವೇ ಶಾಲೆ ಪುನರಾರಂಭ ಕರ್ನಾಟಕದಲ್ಲಿ ದಸರಾ ರಜೆಯು ಸೆಪ್ಟೆಂಬರ್ 22 ರಂದು ಆರಂಭವಾಗಿತ್ತು. ಅಕ್ಟೋಬರ್ 7 ಕ್ಕೆ ಮುಕ್ತಾಯವಾಗಬೇಕಿತ್ತು. ಸದ್ಯ ಸರ್ಕಾರ ಅಕ್ಟೋಬರ್ 18 ವರೆಗೂ ರಜೆ ವಿಸ್ತರಣೆ ಮಾಡಿದೆ.

ಅಕ್ಟೋಬರ್ 19 ಭಾನುವಾರವಾಗಿದ್ದು, ಅಕ್ಟೋಬರ್ 20 ಹಾಗೂ 22 ಕ್ಕೆ ದೀಪಾವಳಿ ರಜೆ ಇರುವುದರಿಂದ ಶಾಲೆಗಳು ಬಹುತೇಕ ಹಬ್ಬಗಳು ಮುಗಿದ ಬಳಿಕವೇ ಆರಂಭವಾಗಲಿವೆ. (ಅಕ್ಟೋಬರ್ ತಿಂಗಳ ಬ್ಯಾಂಕ್‌ ರಜೆಗಳು) ಖಾಸಗಿ ಶಾಲಾ ಮಕ್ಕಳಿಗೆ ಎಂದಿನಂತೆ ಶಾಲೆ ದಸರಾ ರಜೆ ವಿಸ್ತರಣೆಯು ಕೇವಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಮಾತ್ರ ಅನ್ವಯವಾಗಲಿದ್ದು, ಖಾಸಗಿ ಶಾಲೆಗಳು ಆಯಾ ಸಂಸ್ಥೆಗಳ ಸೂಚನೆಯಂತೆ ನಡೆಯಲಿವೆ.

Leave a comment

Leave a Reply

Your email address will not be published. Required fields are marked *

Related Articles

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...

ಅಲ್ಪಸಂಖ್ಯಾತರ ಸಾಲದ ಬಡ್ಡಿ ಮನ್ನಾ ತುಷ್ಟಿಕರಣದಲ್ಲಿ ತೊಡಗಿಕೊಂಡ ಸರಕಾರದ ವಿರುದ್ಧ:: ಸಿಟಿ ರವಿ ವಾಗ್ದಾಳಿ

“ಬೆಂಗಳೂರು: ಬಿಜೆಪಿಯ ಹಿರಿಯ ನಾಯಕರು ಸಿದ್ದರಾಮಯ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದು, ರೈತರು, ಹಿಂದುಳಿದ...