ಯಾವುದೇ ಸುಳಿವು ಇಲ್ಲದೆ ನಾಪತ್ತೆಯಾಗಿದ್ದ ಯುವಕನನ್ನು  13 ವರ್ಷಗಳ ಬಳಿಕ ಪತ್ತೆ ಮಾಡಿ ಪೋಷಕರ ಸಂತಸಕ್ಕೆ ಕಾರಣರಾದ ಉಡುಪಿ ಪೊಲೀಸರು

109

ಯಾವುದೇ ಸುಳಿವು ನೀಡದೆ 13 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ  ಯುವಕನನ್ನು ಬೆಂಗಳೂರಿನಿಂದ ಪತ್ತೆ ಹಚ್ಚಿ ಪೋಷಕರ ಜೊತೆ ಸೇರಿಸಿದ ಉಡುಪಿ ಜಿಲ್ಲಾ ಪೊಲೀಸ್ 2012ರಲ್ಲಿ ಕಾಣೆಯಾಗಿದ್ದ ಅನಂತ ಕೃಷ್ಣ ಪ್ರಭು (29) ಅವರನ್ನು ಇದೀಗ ಬೆಂಗಳೂರು ನಗರದಲ್ಲಿ ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಇಲ್ಲಿನ ನಿವಾಸಿ ಪ್ರಭಾಕರ ಪ್ರಭು ಅವರ ಪುತ್ರ ಅನಂತ ಕೃಷ್ಣ ಪ್ರಭು (ಆಗ 16 ವರ್ಷ) ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜು, ಮುಂಡ್ಕೂರು ಅಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು.


2012 ಡಿಸೆಂಬರ್ ತಿಂಗಳಲ್ಲಿ ದೇವಸ್ಥಾನಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ ಮನೆಯಿಂದ ಹೊರಟು ಹೋದ ಅನಂತಕೃಷ್ಣ ಪ್ರಭು ಬಳಿಕ ಮನೆಗೆ ವಾಪಸ್ಸಾಗದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಈ ಕುರಿತು ಅನಂತ ಕೃಷ್ಣ ಅವರ ತಂದೆ ನೀಡಿದ ದೂರಿನ ಆಧಾರದ ಮೇಲೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 117/2012 ಅಡಿ ಪ್ರಕರಣ ದಾಖಲಾಗಿತ್ತು.


ವರ್ಷಗಳ ಕಾಲ ಯಾವುದೇ ಸುಳಿವಿಲ್ಲದ ಹಿನ್ನೆಲೆ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಪೊಲೀಸರ ತಂಡ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ, ಕೊನೆಗೆ ಅನಂತ ಕೃಷ್ಣ ಪ್ರಭು ಬೆಂಗಳೂರಿನಲ್ಲಿ ವಾಸಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಂಡು ಅವರನ್ನು ಪತ್ತೆಹಚ್ಚಿದೆ.

ಸುಮಾರು 13 ವರ್ಷಗಳ ಬಳಿಕ ಪತ್ತೆಯಾದ ಈ ಪ್ರಕರಣದಲ್ಲಿ ಕಾರ್ಯಚರಣೆ ನಡೆಸಿದ ತಂಡದಲ್ಲಿ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ., ಬ್ರಹ್ಮಾವರ ಪೊಲೀಸ್ ಉಪನಿರೀಕ್ಷಕ ಸುದರ್ಶನ್ ದೊಡ್ಮನಿ, ಉಡುಪಿ ನಗರ ಪೊಲೀಸ್ ಉಪನಿರೀಕ್ಷಕ ಈರಣ್ಣ ಶಿರಗುಂಪಿ, ಹಾಗೂ ಸಿಬ್ಬಂದಿಗಳಾದ ಇಮ್ರಾನ್, ಚೇತನ್, ಸಂತೋಷ್ ದೇವಾಡಿಗ ಮತ್ತು ಮಲ್ಲಯ್ಯ ಹಿರೇಮಠ ಇದ್ದರು.


ಪರೀಕ್ಷೆಯಲ್ಲಿ ಫೇಲ್!: ಅನಂತ ಕೃಷ್ಣ‌ಮೂರ್ತಿ ಪ್ರಥಮ ಪಿಯುಸಿ ಪರೀಕ್ಷೆಯೊಂದರಲ್ಲಿ ಅನುತ್ತೀರ್ಣನಾಗಿದ್ದರಿಂದ ಕಾಲೇಜಿನಲ್ಲಿ ಪೋಷಕರನ್ನು ಕರೆದುಕೊಂಡು ಬರುವಂತೆ ಸೂಚಿಸಿದ್ದರು. ಇದರಿಂದ‌ ಭಯಗೊಂಡ ಅನಂತ ಕೃಷ್ಣಮೂರ್ತಿ ಮನೆಯಲ್ಲಿ‌ ವಿಷಯ ಪ್ರಸ್ತಾಪಿಸದೆ,‌ ಮನೆಯವರಿಗೆ ಹೆದರಿ ಬೆಂಗಳೂರಿಗೆ ತೆರಳಿದ್ದನು. ಬೆಂಗಳೂರಿನಲ್ಲಿ ಅವರಿವರ ಸಹಕಾರದಿಂದ ಕೆಲಸ‌ ಮಾಡುತ್ತಾ ತನ್ನ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿಕೊಂಡು ಸದ್ಯ ಯಶಸ್ವಿ ಇಂಟೀರಿಯರ್ ಡಿಸೈನರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾನೆ.

ಒಟ್ಟಿನಲ್ಲಿ 13 ವರ್ಷಗಳಿಂದ‌ ನಾಪತ್ತಯಾಗಿದ್ದ ಅನಂತ ಕೃಷ್ಣಮೂರ್ತಿ ಅವರನ್ನು ವಿವಿಧ ಆಯಾಮಗಳಲ್ಲಿ ತನಿಖೆ‌ ನಡೆಸಿ ಪತ್ತೆ ಹಚ್ಚಿ ನಾಪತ್ತೆ ಪ್ರಕರಣವನ್ನು ಸುಖಾಂತ್ಯಗೊಳಿಸಿದ್ದಾರೆ”

Leave a comment

Leave a Reply

Your email address will not be published. Required fields are marked *

Related Articles

ಪಡುಬಿದ್ರಿ  ಕಡಲು ಕೊರೆತದಿಂದ ರಕ್ಷಣೆಗೆ  ತಡೆಗೋಡೆ ನಿರ್ಮಾಣಕ್ಕೆ ಸಚಿವ ಯು.ಟಿ. ಖಾದರ್ ಅವರಿಗೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ ವಿ ಅಮೀನ್ ಮನವಿ

ಪಡುಬಿದ್ರಿ, ಜು. 4:** ಉಡುಪಿ ಜಿಲ್ಲೆಯ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ...

ಕಾರ್ಕಳ ಟೈಗರ್ಸ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ರಕ್ತದೊತ್ತಡ–ಮಧುಮೇಹ ತಪಾಸಣೆ ಶಿಬಿರ

ಕಾರ್ಕಳ ಟೈಗರ್ಸ್ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್...

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...