ವರ್ಷಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ ದರ್ಶನಕ್ಕೆ ಸಕಲ ಸಿದ್ಧತೆ

59

ಹಾಸನ: ವರ್ಷಕ್ಕೊಮ್ಮೆ ಮಾತ್ರ ತೆರಯುವ ಹಾಸನಾಂಬ ದೇವಿ ದೇವಾಲಯದ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 12 ಗಂಟೆ ನಂತರ ಹಾಸನಾಂಬೆಯ ಗರ್ಭಗುಡಿ ಬಾಗಿಲು ತೆರೆಯಲಿದೆ. ಪುರಾಣ ಪ್ರಸಿದ್ದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವವು ಇಂದಿನಿಂದ ಅಕ್ಟೊಬರ್ 23 ರವರೆಗೆ ನಡೆಯಲಿದೆ. ಕೊನೆಯ ದಿನ ಹೊರತುಪಡಿಸಿ 13 ದಿನಗಳ ಕಾಲ ಸಾರ್ವಜನಿಕರಿಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶವಿರುತ್ತದೆ.

ಅರಸು ವಂಶಸ್ಥರು ಬನ್ನಿ ಕಡಿದ ನಂತರ ಶಾಸ್ತ್ರೋಕ್ತವಾಗಿ ದೇವಾಲಯದ ಗರ್ಭಗುಡಿಯನ್ನು ತೆರೆಯಲಾಗುವುದು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ, ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್, ಸಂಸದ ಶ್ರೇಯಸ್ ಪಟೇಲ್ ಸಮ್ಮುಖದಲ್ಲಿ ಗರ್ಭಗುಡಿಯ ಬಾಗಿಲನ್ನು ತೆರೆಯಲಾಗುವುದು.

ಕಳೆದ ವರ್ಷ ಅಕ್ಟೋಬರ್ 24 ರಿಂದ ನವೆಂಬರ್ 3ರವರೆಗೆ ಹಾಸನಾಂಬೆ ಜಾತ್ರೋತ್ಸವ ನಡೆದಿತ್ತು. ಈ ವೇಳೆ 20 ಲಕ್ಷಕ್ಕೂ ಅಧಿಕ ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದರು. ಕಳೆದ ನ.3 ರಂದು ಮುಚ್ಚಿದ್ದ ಗರ್ಭಗುಡಿ ಬಾಗಿಲು ಇಂದು ತೆರೆಯಲಿದೆ. ಈ ಬಾರಿ 25 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆಯಿದೆ.


ಜಾತ್ರಾ ಮಹೋತ್ಸವಕ್ಕೆ ಜಿಲ್ಲಾಡಳಿತವು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗಾಗಿ ಹಲವು ವಿಶೇಷ ವ್ಯವಸ್ಥೆ ಮಾಡಿದೆ. ಜಾತ್ರೋತ್ಸವದಲ್ಲಿ ಹೆಲಿ ಟೂರಿಸಂ, ಟೂರ್ ಪ್ಯಾಕೇಜ್, ಶ್ವಾನ ಪ್ರದರ್ಶನ, ಪಾಕ ಸ್ಪರ್ಧೆ, ಜಾನಪದ ಉತ್ಸವ ಸೇರಿದಂತೆ ಹಲವು ಆಕರ್ಷಣೆಯಿರಲಿದೆ.

Leave a comment

Leave a Reply

Your email address will not be published. Required fields are marked *

Related Articles

ಜೂನ್ 27 ರಂದು ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ :: ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ಬೆಂಗಳೂರು: ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ ಜೂನ್ 27 ರಂದು...

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕಾರ್ಯ ಪ್ರಾರಂಭಿಸಿದ ::ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು: ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮಾರನೇ ದಿನವೇ ಆಡಳಿತ ಯಂತ್ರಕ್ಕೆ ಚುರುಕು...

ಜಾತಿ, ಧರ್ಮ ಯಾವುದೇ ಪ್ರಭಾವಕ್ಕೂ ಮಣಿಯಬೇಡಿ: ಅಧಿಕಾರಿಗಳಿಗೆ ಸೂಚನೆ ನೀಡಿದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಬೆಂಗಳೂರು: ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ಇಂದು ವಿಧಾನಸೌಧದಲ್ಲಿ...

ಸಂಪುಟ ರಚನೆಯ ಕಸರತ್ತು ದೆಹಲಿಗೆ ತೆರಳಿದ ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಸಂಪುಟ ರಚನೆಯ ಕಸರತ್ತು ಆರಂಭಿಸಿದ್ದು, ಸೋಮವಾರ ದೆಹಲಿಗೆ ತೆರಳಿ...