ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರದಿಂದ ವೇತನ ಸಹಿತ ಋತುಚಕ್ರ ರಜೆ ನೀತಿ ಜಾರಿ

67

ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಮಾಸಿಕ ಋತುಸ್ರಾವದ ರಜೆ ನೀತಿಯನ್ನು ಜಾರಿಗೆ ತರಲು ನಿರ್ಧರಿಸಿದ್ದು, ಈ ನೀತಿಯ ಅನ್ವಯ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನದ ವೇತನ ಸಹಿತ ರಜೆ ಸಿಗಲಿದೆ.

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಉದ್ಯೋಗಸ್ಥ ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದು, ವೇತನ ಸಹಿತ ‘ಋತುಚಕ್ರ ರಜೆ’ಗೆ ಸಚಿವ ಸಂಪುಟ ಸಭೆಯಲ್ಲಿ ಗುರುವಾರ ಒಪ್ಪಿಗೆ ಲಭಿಸಿದೆ. ಹೌದು.. ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಮಾಸಿಕ ಋತುಸ್ರಾವದ ರಜೆ ನೀತಿಯನ್ನು ಜಾರಿಗೆ ತರಲು ನಿರ್ಧರಿಸಿದ್ದು, ಈ ನೀತಿಯ ಅನ್ವಯ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನದ ವೇತನ ಸಹಿತ ರಜೆ ಸಿಗಲಿದೆ.

ಸಾರ್ವಜನಿಕ ಮತ್ತು ಖಾಸಗಿ ವಲಯದ ಎಲ್ಲ ಉದ್ಯೋಗದಾತರು ಈ ನೀತಿಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕಾಗುತ್ತದೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅನುಮೋದನೆ ನೀಡಲಾಗಿದೆ. ನೂತನ ನೀತಿಯ ಅನ್ವಯ ಇದರನ್ವಯ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನದ ವೇತನ ಸಹಿತ ರಜೆ ಸಿಗಲಿದೆ. ಸಾರ್ವಜನಿಕ ಮತ್ತು ಖಾಸಗಿ ವಲಯದ ಎಲ್ಲ ಉದ್ಯೋಗದಾತರು ಈ ನೀತಿಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕಾಗುತ್ತದೆ.

ಗುರುವಾರ ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ, ಅನುಮೋದನೆ ನೀಡಲಾಗಿದೆ. ರಾಜ್ಯದ ಎಲ್ಲಾ ವಲಯಗಳ ಮಹಿಳೆಯರಿಗೆ ತಿಂಗಳಲ್ಲಿ 1 ದಿನ ‘ಮುಟ್ಟಿನ ರಜೆ’ ನೀಡಲು ಸರ್ಕಾರ ಚಿಂತನೆ! ಮಾಹಿತಿ ನೀಡಿದ ಸಚಿವ ಎಚ್ ಕೆ ಪಾಟೀಲ್ ಇನ್ನು ಈ ಬಗ್ಗೆ ಕಾನೂನು ಸಚಿವ ಎಚ್‌ಕೆ ಪಾಟೀಲ್‌ ಮಾಹಿತಿ ನೀಡಿದ್ದು, ‘ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಎಂಎನ್‌ಸಿ, ಐಟಿ ಮತ್ತು ಇತರೆ ಖಾಸಗಿ ಸಂಸ್ಥೆ, ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀಡುವ “ಋತುಚಕ್ರ ರಜೆ ನೀತಿ”ಗೆ ಸಂಪುಟ ಒಪ್ಪಿಗೆ ನೀಡಿದೆ’ ಎಂದು ಹೇಳಿದರು.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರಸ್ತಾಪ ಇನ್ನು ಕಾರ್ಮಿಕ ಇಲಾಖೆಯು 2025 ರ ಮಾಸಿಕ ಋತುಸ್ರಾವದ ರಜೆ ನೀತಿಗಾಗಿ ಆಡಳಿತಾತ್ಮಕ ಅನುಮೋದನೆ ಕೋರಿತ್ತು. ಈಗಾಗಲೇ ಕೇರಳವು ಇಂಡಸ್ಟ್ರಿಯಲ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್‌ಗಳಲ್ಲಿನ ಮಹಿಳಾ ತರಬೇತಿದಾರರಿಗೆ ಎರಡು ದಿನಗಳ ಮಾಸಿಕ ಋತುಸ್ರಾವದ ರಜೆಯನ್ನು ಪರಿಚಯಿಸಿದೆ.

ಬಿಹಾರ ಮತ್ತು ಒಡಿಶಾದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಮಾತ್ರ 12 ದಿನಗಳ ವಾರ್ಷಿಕ ಮಾಸಿಕ ಋತುಸ್ರಾವದ ರಜೆ ನೀತಿ ಜಾರಿಯಲ್ಲಿದೆ. ಆದರೆ, ಕರ್ನಾಟಕವು ಈ ನೀತಿಯನ್ನು ಸಮಗ್ರವಾಗಿ ಜಾರಿಗೆ ತರುವ ಮೊದಲ ರಾಜ್ಯವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದರು”

Leave a comment

Leave a Reply

Your email address will not be published. Required fields are marked *

Related Articles

ಸಚಿವ ಸ್ಥಾನಗಳಿಗಾಗಿ ಲಾಬಿ ಮಾಡುವವರನ್ನು ಪಕ್ಷ ಸಹಿಸುವುದಿಲ್ಲ. ಲಾಬಿಗಳಿಗೆ ಮಣಿಯಬೇಡಿ- ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಸೂಚನೆ

ಬೆಂಗಳೂರು: ಜುಲೈ ಮೊದಲ ವಾರದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಮಯದಲ್ಲಿ ಸಂಪುಟಕ್ಕೆ ಸೇರ್ಪಡೆಗೊಳ್ಳಲು...

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...