ಸರ್ಕಾರಗಳ ನಿರ್ಲಕ್ಷ್ಯದಿಂದ ಶಿಥಿಲಗೊಂಡಿರುವ ಸಂಗೀತ ಸಾಮ್ರಾಜ್ಞಿ ಗಂಗೂಬಾಯಿ ಹಾನಗಲ್ ಅವರ ನಿವಾಸ

53

ಶೋಚನೀಯ ಸ್ಥಿತಿಯಲ್ಲಿ ಸಂಗೀತ ಸಾಮ್ರಾಜ್ಞಿ ಡಾ.ಗಂಗೂಬಾಯಿ ಹಾನಗಲ್ ನಿವಾಸ: ನವೀಕರಣಕ್ಕೆ ಸರ್ಕಾರಕ್ಕೆ ಆಗ್ರಹ ಧಾರವಾಡದ, ಹೊಸ ಯಲ್ಲಾಪುರ ರಸ್ತೆಯಲ್ಲಿರುವ ಹಿಂದೂಸ್ಥಾನಿ ಸಂಗೀತದ ಗಾನಸಾಮ್ರಾಜ್ಞಿ, ಸಂಗೀತ ಶಿರೋಮಣಿ, ಸಂಗೀತ ಕಲಾರತ್ನ, ಪದ್ಮವಿಭೂಷಣ ಪುರಸ್ಕೃತ ಡಾ.ಗಂಗೂಬಾಯಿ ಹಾನಗಲ್ ಅವರ ನಿವಾಸ ಶಿಥಿಲಗೊಂಡಿದೆ.

ಸಂಗೀತ ಸಾಮ್ರಾಜ್ಞಿ ದಿವಂಗತ ಗಂಗೂಬಾಯಿ ಹಾನಗಲ್ ಅವರ ನಿವಾಸ ಶಿಥಿಲಗೊಂಡಿದ್ದು ಸರ್ಕಾರ ಕೂಡಲೇ ಗಮನ ಹರಿಸಬೇಕೆಂಬ ಕೂಗು ಬಹಳ ವರ್ಷಗಳ ಹಿಂದಿನಿಂದಲೂ ಕೇಳಿಬರುತ್ತಿದೆ. ಈ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ.

ಧಾರವಾಡದ, ಹೊಸ ಯಲ್ಲಾಪುರ ರಸ್ತೆಯಲ್ಲಿರುವ ಹಿಂದೂಸ್ಥಾನಿ ಸಂಗೀತದ ಗಾನಸಾಮ್ರಾಜ್ಞಿ, ಸಂಗೀತ ಶಿರೋಮಣಿ, ಸಂಗೀತ ಕಲಾರತ್ನ, ಪದ್ಮವಿಭೂಷಣ ಪುರಸ್ಕೃತ ಡಾ.ಗಂಗೂಬಾಯಿ ಹಾನಗಲ್ ಅವರ ನಿವಾಸ ಶಿಥಿಲಗೊಂಡಿದೆ.”

ಈ ಹಿಂದೆ ಸರ್ಕಾರ ಅವರ ನಿವಾಸವನ್ನು ಸ್ಮಾರಕವನ್ನಾಗಿ ಮಾಡಲು ಹಣ ಬಿಡುಗಡೆ ಮಾಡಿದರೂ ಸಹ ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ, ಸರ್ಕಾರಗಳ ನಿರ್ಲಕ್ಷ್ಯದಿಂದ ಈ ಮಟ್ಟಕ್ಕೆ ತಲುಪಿರುವುದು ಶೋಚನೀಯ ಸಂಗತಿ ಎಂದು ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಡಿಯೊವೊಂದನ್ನು ಬಿಡುಗಡೆ ಮಾಡಿದ್ದಾರೆ.



ಸ್ಮಾರಕ ಕಟ್ಟಡವು ಹತ್ತೇ ವರ್ಷದಲ್ಲಿ ಪಾಳು ಬಿದ್ದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ, ಕನ್ನಡ & ಸಂಸ್ಕೃತಿ ಇಲಾಖೆಯ ಅಸಡ್ಡೆಗೆ ಹಿಡಿದ ಕೈಗನ್ನಡಿ. ಸಂಗೀತ ಕ್ಷೇತ್ರದ ಬೆಳವಣಿಗೆಗೆ ಇಡೀ ತಮ್ಮ ಜೀವನದುದ್ದಕ್ಕೂ ಸೇವೆಯನ್ನು ಸಲ್ಲಿಸಿ ನಮ್ಮ ನಾಡು ಹಾಗೂ ದೇಶದ ಕೀರ್ತಿಯನ್ನು ವಿಶ್ವವ್ಯಾಪಿ ಪಸರಿಸುವಂತೆ ಮಾಡಿದ ಸಂಗೀತ ದಿಗ್ಗಜೆ ಗಂಗವ್ವರವರ ನಿವಾಸವನ್ನು ಸಂಪೂರ್ಣವಾಗಿ ನವೀಕರಿಸಿ ಅವರಿಗೆ ಗೌರವ ಸಲ್ಲಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಸಚಿವ ಸ್ಥಾನಗಳಿಗಾಗಿ ಲಾಬಿ ಮಾಡುವವರನ್ನು ಪಕ್ಷ ಸಹಿಸುವುದಿಲ್ಲ. ಲಾಬಿಗಳಿಗೆ ಮಣಿಯಬೇಡಿ- ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಸೂಚನೆ

ಬೆಂಗಳೂರು: ಜುಲೈ ಮೊದಲ ವಾರದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಮಯದಲ್ಲಿ ಸಂಪುಟಕ್ಕೆ ಸೇರ್ಪಡೆಗೊಳ್ಳಲು...

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...