ಎರಡು ದಿನಗಳಲ್ಲಿ 1.50 ಲಕ್ಷಕ್ಕೂ ಹೆಚ್ಚು ಭಕ್ತರಿಂದ ಹಾಸನಾಂಬೆ ದೇವಿಯ ದರ್ಶನ  1 ಕೋಟಿಗೂ ಅಧಿಕ ಆದಾಯ ಸಂಗ್ರಹ

28

ಹಾಸನ: ಹಾಸನಾಂಬ ದರ್ಶನೋತ್ಸವ ಆರಂಭಗೊಂಡು ಕೇವಲ ಎರಡು ದಿನಗಳಲ್ಲಿ 1.50 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. 1 ಕೊಟಿ ರೂಪಾಯಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ. ಈ ಬಾರಿ ವಿಐಪಿ, ವಿವಿಐಪಿ ಪಾಸ್‌ಗಳನ್ನು ರದ್ದುಪಡಿಸಿರುವುದರಿಂದ ಭಕ್ತರು ಸುಗಮವಾಗಿ ದರ್ಶನ ಪಡೆಯುತ್ತಿದ್ದಾರೆ.

ಇದರಿಂದಾಗಿ ಭಕ್ತರಲ್ಲಿ ಸಂತಸ ಮೂಡಿದೆ. ನಾಡಿನ ನಾನಾ ಭಾಗಗಳಿಂದ ಭಕ್ತರ ದಂಡೇ ಹಾಸನಾಂಬೆಯ ದರ್ಶನಕ್ಕೆ ಹರಿದು ಬರುತ್ತಿದೆ. ಶುಕ್ರವಾರ 60 ಸಾವಿರ ಮತ್ತು ಶನಿವಾರ 90 ಸಾವಿರ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ ಎಂದು ಜಿಲ್ಲಾಡಳಿತ ಅಂದಾಜಿಸಿದೆ. ವಾರಾಂತ್ಯದ ಹಿನ್ನೆಲೆಯಲ್ಲಿ ಶನಿವಾರ ಭಕ್ತರ ಸಂಖ್ಯೆ ನಿರೀಕ್ಷೆಗಿಂತ ಕಡಿಮೆಯಿದ್ದರೂ, ಜನಜಾತ್ರೆ ಕಂಡುಬಂದಿದೆ.

ಪ್ರತಿನಿತ್ಯ 2 ಲಕ್ಷ ಜನರ ನಿರೀಕ್ಷೆ ಇದ್ದು, ಈ ಭಾರಿ 15 ಕೋಟಿ ರೂಪಾಯಿ ಸಂಗ್ರಹವಾಗುವ ನಿರೀಕ್ಷೆಯಿದೆ. ಆದರೆ ಸಚಿವ ಕೃಷ್ಣ ಬೈರೇಗೌಡ ಅವರು ಮಾತನಾಡಿ, ಆದಾಯಕ್ಕಿಂತ ಭಕ್ತರ ಸಂತೋಷವೇ ಮುಖ್ಯ. ದೇವಾಲಯಕ್ಕೆ ಬಂದ ಭಕ್ತರ ಟಿಕೆಟ್‌ ಹಣದಿಂದಲ್ಲ, ಸರ್ಕಾರವೇ ವೆಚ್ಚ ಭರಿಸಲಿದೆ ಎಂದು ಹೇಳಿದ್ದಾರೆ.

ಹೆಚ್ಚೆಂದರೆ ಒಂದೂವರೆ ಗಂಟೆಯಲ್ಲಿ ದರ್ಶನ ಭಾಗ್ಯ ಹಾಸನಾಂಬೆ ಶೀಘ್ರ ದರ್ಶನಕ್ಕೆ ತಲಾ 300 ರೂ. ಮತ್ತು 1000 ರೂ. ಟಿಕೆಟ್ ಕೌಂಟರ್‌ಗಳನ್ನು ತೆರೆಯಲಾಗಿತ್ತು. ಆದರೆ, ಭಕ್ತರು ಸುಗಮವಾಗಿ ದರ್ಶನ ಪಡೆಯುತ್ತಿರುವುದರಿಂದ ಟಿಕೆಟ್ ಕೌಂಟರ್‌ಗಳ ಮುಂದೆ ಭಕ್ತರ ಸರತಿ ಸಾಲು ಖಾಲಿಯಾಗಿತ್ತು.

“ಸಾಮಾನ್ಯ ಸರತಿ ಸಾಲಿನಲ್ಲಿಯೇ ಅರ್ಧ ಗಂಟೆಯಿಂದ ಒಂದೂವರೆ ಗಂಟೆಯಲ್ಲಿ ದೇವಿ ದರ್ಶನ ಪಡೆಯುತ್ತಿರುವ ಕಾರಣ ಟಿಕೆಟ್ ಖರೀದಿಸಿ ದರ್ಶನ ಪಡೆಯಲು ಭಕ್ತರು ಹೆಚ್ಚಿನ ಆಸಕ್ತಿ ತೋರುತ್ತಿಲ್ಲ” ಎಂದು ಸ್ವತಃ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಅವರೇ ತಿಳಿಸಿದ್ದಾರೆ. ಸಿಎಂ- ಡಿಸಿಎಂ ಭೇಟಿ ಯಾವಾಗ? ಅ.15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಸನಾಂಬ ದರ್ಶನಕ್ಕೆ ಆಗಮಿಸಲಿದ್ದಾರೆ.

ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಮಯ ನಿಗದಿ ಮಾಡಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಜನರು ಕಡಿಮೆ ಇರುವ ಸಮಯದಲ್ಲಿ ಅವರನ್ನು ಕರೆತಂದು ದರ್ಶನ ಮಾಡಿಸುತ್ತೇವೆ. ಇದರಿಂದ ಸಾಮಾನ್ಯ ಭಕ್ತರಿಗೂ ತೊಂದರೆ ಆಗುವುದಿಲ್ಲ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದರು. ಈ ಬಾರಿ ವಿಐಪಿ, ವಿವಿಐಪಿ ಪಾಸ್‌ಗಳನ್ನು ರದ್ದುಪಡಿಸಿರುವುದು ಭಕ್ತರಿಗೆ ಅನುಕೂಲವಾಗಿದೆ. ಕಳೆದ ವರ್ಷಗಳಲ್ಲಿ ಪಾಸ್‌ಗಳ ಹಂಚಿಕೆಯಿಂದ ಗೊಂದಲ ಉಂಟಾಗಿ, ಸ್ಥಳೀಯರು ಹಾಗೂ ಭಕ್ತರ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಅವರು ಜಿಲ್ಲಾಡಳಿತ, ಶಾಸಕರು, ಸಂಸದರೊಂದಿಗೆ ಚರ್ಚಿಸಿ ಪಾಸ್ ಪದ್ಧತಿಯನ್ನು ರದ್ದುಪಡಿಸಿದ್ದಾರೆ. ಇದರಿಂದ ಭಕ್ತರು ಸುಗಮವಾಗಿ ದರ್ಶನ ಪಡೆದು ಹಿಂತಿರುಗುತ್ತಿದ್ದಾರೆ. ಭಕ್ತರಿಂದಲೂ ಈ ನಿರ್ಧಾರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಪ್ರತಿ ದಿನ ಮಧ್ಯಾಹ್ನ ಮತ್ತು ರಾತ್ರಿ ನೈವೇದ್ಯದ ಸಮಯ ಹೊರತುಪಡಿಸಿ ಉಳಿದ ಅವಧಿಯಲ್ಲಿ ಹಾಸನಾಂಬೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಗಣ್ಯರಿಗೆ ನಿಗದಿತ ಸಮಯದಲ್ಲಿ ಮಾತ್ರ ದರ್ಶನಾವಕಾಶ ನೀಡಿ, ಸಾಮಾನ್ಯ ಭಕ್ತರಿಗೆ ಹೆಚ್ಚಿನ ಸಮಯ ಮೀಸಲಿಡಲಾಗಿದೆ. ಇದರಿಂದಾಗಿ ಭಕ್ತರು ಸರತಿ ಸಾಲಿನಲ್ಲಿ ನಿಂತು ಒಂದರಿಂದ ಒಂದೂವರೆ ಗಂಟೆ ಅವಧಿಯಲ್ಲಿ ದರ್ಶನ ಪಡೆದು ನಿರ್ಗಮಿಸುತ್ತಿದ್ದಾರೆ. ಸರತಿ ಸಾಲಿನಲ್ಲಿ ಅಳವಡಿಸಿದ್ದ ಬ್ಯಾರಿಕೇಡ್‌ಗಳ ಪ್ಲೇಟ್‌ಗಳು ಕೆಲ ಭಕ್ತರ ಕಾಲಿಗೆ ತಗುಲಿ ಗಾಯಗಳಾಗಿದ್ದವು. ಈ ಬಗ್ಗೆ ಭಕ್ತರು ದೂರು ನೀಡಿದ ತಕ್ಷಣ, ಬ್ಯಾರಿಕೇಡ್‌ಗಳ ಪ್ಲೇಟ್‌ಗಳನ್ನು ಮುಚ್ಚಿ ಭಕ್ತರ ಸುರಕ್ಷತೆಗೆ ಕ್ರಮ ವಹಿಸಲಾಯಿತು.

ದೇವಿ ದರ್ಶನ ಪಡೆದು ಭಾವೈಕ್ಯತೆ ಮೆರೆದ ಅನ್ಯಧರ್ಮೀಯರು ಹಾಸನಾಂಬೆ ದರ್ಶನಕ್ಕೆ ನಾಡಿನ ನಾನಾ ಭಾಗಗಳಿಂದ ಭಕ್ತರ ದಂಡೇ ಹರಿದು ಬರುತ್ತಿದೆ. ವಿಶೇಷವೆಂದರೆ, ಅನ್ಯ ಧರ್ಮಿಯರು ಸಹ ಆಗಮಿಸಿ ಹಾಸನಾಂಬೆಯ ದರ್ಶನ ಪಡೆದು ಭಕ್ತಿ ಸಮರ್ಪಿಸುತ್ತಿದ್ದಾರೆ. ಬಿಜಾಪುರದ ವಕೀಲ ಅನ್ವರ್ ಹುಸೇನ್ ಅವರು ಸ್ನೇಹಿತರೊಂದಿಗೆ ಆಗಮಿಸಿ 300 ರೂ. ಟಿಕೆಟ್ ಪಡೆದು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.

  ಹಾಸನಾಂಬಾ ದೇಗುಲದ ಬಾಗಿಲು ಓಪನ್‌! ದೇವಿಯ ದರ್ಶನಕ್ಕೆ ಭಕ್ತ ಸಾಗರ “ಸೃಷ್ಟಿಕರ್ತ ಎಲ್ಲರೂ ಒಂದೇ. ನಾವು ಬೇರೆ ಬೇರೆ ಹೆಸರಿನಿಂದ ಕರೆಯುತ್ತೇವೆ. ದೇವರು, ದೈವ ಭಕ್ತಿಗೆ ಭೇದ-ಭಾವ ಇಲ್ಲ. ಭಕ್ತಿ, ದಯೆ, ಕರುಣೆಯಲ್ಲಿ ಇಲ್ಲದ ಭಿನ್ನತೆ ನಮ್ಮಲ್ಲಿ ಯಾಕೆ? ಎಲ್ಲರೂ ಒಂದೇ. ಹೀಗಾಗಿ ನಾನು ಹಾಸನಾಂಬೆ ದರ್ಶನಕ್ಕೆ ಆಗಮಿಸಿದ್ದೇನೆ” ಎಂದು ಭಕ್ತ ಅನ್ವರ್ ಹುಸೇನ್ ಭಾವೈಕ್ಯತಾ ಸಂದೇಶ ಸಾರಿದರು. ಅನ್ವರ್ ಹುಸೇನ್ ಅವರು, “ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಹಾಸನಾಂಬೆ ದರ್ಶನ ಪಡೆಯುತ್ತಿದ್ದೇನೆ. ನಮ್ಮ ಸ್ನೇಹಿತರು ನಮ್ಮ ದರ್ಗಾಗೆ ಬರುತ್ತಾರೆ. ನಾವು ಅವರೊಟ್ಟಿಗೆ ದೇವರ ದರ್ಶನಕ್ಕೆ ಬರುತ್ತೇವೆ” ಎಂದರು.”

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...