ಹಿರಿಯ ರಂಗಭೂಮಿ ಕಲಾವಿದ ಮತ್ತು ಹಾಸ್ಯ ಚಿತ್ರನಟ ರಾಜು ತಾಳಿಕೋಟೆ ನಿಧನ

64

ಧಾರವಾಡ ರಂಗಾಯಣ ನಿರ್ದೇಶಕ, ಹಾಸ್ಯ ಚಿತ್ರನಟ ರಾಜು ತಾಳಿಕೋಟಿ ನಿಧನ ಹಿರಿಯ ರಂಗಭೂಮಿ ಕಲಾವಿದ ಮತ್ತು ಹಾಸ್ಯನಟ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಜಯಪುರದ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದ ರಾಜು ತಾಳಿಕೋಟೆ ಅವರು, ಕುಡುಕನ ಪಾತ್ರಗಳ ಮೂಲಕ ಮನೆಮಾತಾಗಿದ್ದರು.

ಉಡುಪಿಯಲ್ಲಿ ಸಿನಿಮಾವೊಂದರ ಚಿತ್ರೀಕರಣ ಮುಗಿಸಿ ಕೋಣೆಯಲ್ಲಿ ಮಲಗಿದ್ದಾಗ ಹಾರ್ಟ್ ಅಟ್ಯಾಕ್ ಆಗಿದೆ. ಕೂಡಲೇ ಅವರನ್ನು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು. ವೃತ್ತಿ ರಂಗಭೂಮಿ ಮೂಲಕ ಸಿನಿಮಾ ರಂಗಕ್ಕೆ ರಾಜು ತಾಳಿಕೋಟೆ ಎಂಟ್ರಿ ಕೊಟ್ಟಿದ್ದರು.

ರಾಜು ತಾಳಿಕೋಟೆ ಅವರು ಮನಸಾರೆ, ಪಂಚರಂಗಿ, ಮತ್ತೊಂದು ಮದುವೆನಾ, ಮೈನಾ ಸಿನಿಮಾಗಳಲ್ಲಿ ನಟಿಸಿದ್ದಾರೆ. ಉತ್ತರ ಕರ್ನಾಟಕದ ರಂಗಭೂಮಿಯಲ್ಲಿ ‘ಖಾಸ್ಗತೇಶ್ವರ’ ನಾಟಕ ಮಂಡಳಿಯ ಮಾಲೀಕರಾಗಿ, ಕುಡುಕನ ಪಾತ್ರಗಳ ಮೂಲಕ ಮನೆಮಾತಾಗಿದ್ದರು. ಅವರ ನಿಧನದ ಸುದ್ದಿ ತಿಳಿದು ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸುತ್ತಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಜೂನ್ 27 ರಂದು ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ :: ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ಬೆಂಗಳೂರು: ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ ಜೂನ್ 27 ರಂದು...

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕಾರ್ಯ ಪ್ರಾರಂಭಿಸಿದ ::ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು: ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮಾರನೇ ದಿನವೇ ಆಡಳಿತ ಯಂತ್ರಕ್ಕೆ ಚುರುಕು...

ಜಾತಿ, ಧರ್ಮ ಯಾವುದೇ ಪ್ರಭಾವಕ್ಕೂ ಮಣಿಯಬೇಡಿ: ಅಧಿಕಾರಿಗಳಿಗೆ ಸೂಚನೆ ನೀಡಿದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಬೆಂಗಳೂರು: ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ಇಂದು ವಿಧಾನಸೌಧದಲ್ಲಿ...

ಸಂಪುಟ ರಚನೆಯ ಕಸರತ್ತು ದೆಹಲಿಗೆ ತೆರಳಿದ ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಸಂಪುಟ ರಚನೆಯ ಕಸರತ್ತು ಆರಂಭಿಸಿದ್ದು, ಸೋಮವಾರ ದೆಹಲಿಗೆ ತೆರಳಿ...