ನೆರೆ ಸಂತ್ರಸ್ತರನ್ನು ಭೇಟಿ ಮಾಡುವ ಸಾಧ್ಯತೆ ನಿರ್ಮಲಾ ಸೀತಾರಾಮನ್ ಅವರು ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ಬರಲಿದ್ದಾರೆ. ಬೀದರ್, ಕಲಬುರಗಿ ಯಾದಗಿರಿ ಸೇರಿದಂತೆ ಇನ್ನಿತರ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.
ಇಲ್ಲಿ ಆಯೋಜನೆಯಾಗಿರುವ ಹಲವು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದರೆ ಎನ್ನಲಾಗಿದೆ. ಇದರ ಜೊತೆಗೆ ನೆರೆಯಿಂದ ಬೆಳೆ ನಾಶವಾಗಿ ಆರ್ಥಿಕವಾಗಿ ಕುಗ್ಗಿರುವ ರೈತರನ್ನು ಭೇಟಿ ಮಾಡಿ ಪರಿಸ್ಥಿತಿ ಪರಿಶೀಲನೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕರ್ನಾಟಕಕ್ಕೆ ಬರುವ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಎರಡು ದಿನ ಕಲ್ಯಾಣ ಕರ್ನಾಟಕ ಪ್ರವಾಸ ಕೈಗೊಂಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಯಾದಗಿರಿ, ರಾಯಚೂರು, ಬೀದರ್, ಕಲಬುರಗಿಯಲ್ಲಿ ಆಯೋಜನೆಗೊಂದ ಕಾರ್ಯಕ್ರಮಕ್ಕೆ ಭೇಟಿ ಭೀಮಾ ನದಿ ಪ್ರವಾಹದಿಂದ ಬೆಳೆ ನಾಶ, ನೆರೆ ಸಂತ್ರಸ್ತ ರೈತರನ್ನು ಭೇಟಿಯಾಗುವ ಸಾಧ್ಯತೆ ಇದೆ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ.

ಹೊಸದಿಲ್ಲಿ: ಬುಧವಾರ (ಅ.15)ರಿಂದ ಎರಡು ದಿನ ಕಾಲ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭೇಟಿ ನೀಡಲಿದ್ದಾರೆ. ಬೀದರ್, ಕಲಬುರಗಿ, ಬಳ್ಳಾರಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕೇಂದ್ರ ಸಚಿವೆ ಟ್ವೀಟ್‌ನಲ್ಲಿ ಏನಿದೆ? ʻನಾಳೆಯಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಪ್ರವಾಸಕ್ಕೆ ಹೊರಡುತ್ತಿದ್ದೀನೆ.

ಅಲ್ಲಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಘಟಕಗಳನ್ನು ಸ್ಥಾಪಿಸಲಾಗಿದ್ದು -ಸದರಿ ರೈತರ ತರಬೇತಿ ಕೇಂದ್ರ ಮತ್ತು ಕಾಮನ್ ಫೆಸಿಲಿಟಿ ಸೆಂಟರ್‌ಗಳನ್ನು ಭೇಟಿಯಾಗಿ ಅವುಗಳ ಉತ್ಪಾದನಾ ಚಟುವಟಿಕೆಗಳನ್ನು ವೀಕ್ಷಿಸಲಿದ್ದೇನೆ.
ನನ್ನ ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿ (MPLADS) ಬಳಸಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ತಲಾ ಒಂದು ಘಟಕವನ್ನು ಸ್ಥಾಪಿಸಲಾಗಿದೆ ಎಂದು ಟ್ವೀಟ್‌ನಲ್ಲಿ ಅವರು ಉಲ್ಲೇಖಿಸಿದ್ದಾರೆ.”
Leave a comment