ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಿಹಿ ಸುದ್ದಿ :  ತುಟ್ಟಿ ಭತ್ಯೆ ಹೆಚ್ಚಳ

60

ರಾಜ್ಯ ಸರ್ಕಾರಿ ನೌಕರರಿಗೆ 2025ರ ಜುಲೈ 1ರಿಂದ ಅನ್ವಯವಾಗುವಂತೆ ಶೇ. 2ರಷ್ಟು ತುಟ್ಟಿ ಭತ್ಯೆ ಹೆಚ್ಚಳ ತುಟ್ಟಿ ಭತ್ಯೆ ಹೆಚ್ಚಿಸಿದ ರಾಜ್ಯ ಸರ್ಕಾರ, ಕಡತಕ್ಕೆ ಅನುಮೋದನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಶೇ. 3ರಷ್ಟು ತುಟ್ಟಿ ಭತ್ಯೆ ಘೋಷಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರದಿಂದಲೂ ತೀರ್ಮಾನ ತುಟ್ಟಿ ಭತ್ಯೆ ಏರಿಕೆಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ.

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಲಭಿಸಿದ್ದು, ಅವರ ತುಟ್ಟಿ ಭತ್ಯೆಯನ್ನು (ಡಿ.ಎ) ಶೇ. 2ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕೆ ಸಂಬಂಧ ಪಟ್ಟ ಕಡತಕ್ಕೆ ಅನುಮೋದನೆ ನೀಡಿದ್ದಾರೆ. ಈ ತುಟ್ಟಿ ಭತ್ಯೆ ಹೆಚ್ಚಳವು 2025ರ ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ. ಈ ಕುರಿತ ಅಧಿಕೃತ ಸರ್ಕಾರಿ ಆದೇಶವು ಇನ್ನೆರಡು ದಿನಗಳಲ್ಲಿ ಹೊರಬೀಳುವ ನಿರೀಕ್ಷೆ ಇದೆ.

ಸರ್ಕಾರದ ಈ ನಿರ್ಧಾರವನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಸ್ವಾಗತಿಸಿದ್ದು, ನೌಕರರ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿ ಭತ್ಯೆ ಘೋಷಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ಏರಿಕೆ ಮಾಡುವುದು ವಾಡಿಕೆ. ಇತ್ತೀಚೆಗೆ ಕೇಂದ್ರ ಸರ್ಕಾರವು ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿ ತನ್ನ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ಶೇ. 3ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿತ್ತು.

ಇದೇ ಮಾದರಿಯಲ್ಲಿ ರಾಜ್ಯ ನೌಕರರಿಗೂ ಶೇ. 3ರಷ್ಟು ತುಟ್ಟಿ ಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಬೇಕೆಂದು ನೌಕರರ ಸಂಘವು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತ್ತು. ಸಂಘದ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ಇದೀಗ ಶೇ. 2ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಕೇಂದ್ರ ನೌಕರರಿಗೆ ಸಿಕ್ಕಿತ್ತು ದಸರಾ ಗಿಫ್ಟ್‌ ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಹಬ್ಬದ ಕೊಡುಗೆಯಾಗಿ ಶೇ. 3ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಿನೌಕರರ ತುಟ್ಟಿ ಭತ್ಯೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿತ್ತು.

ಪ್ರಸ್ತುತ ಶೇ. 55ರಷ್ಟಿರುವ ಮೂಲ ವೇತನ ಹಾಗೂ ಪಿಂಚಣಿಗೆ ಹೆಚ್ಚುವರಿಯಾಗಿ ಶೇ. 3 ರಷ್ಟು ತುಟ್ಟಿಭತ್ಯೆ ನೀಡಲು ನಿರ್ಧರಿಸಲಾಗಿತ್ತು. 7ನೇ ವೇತನ ಆಯೋಗದ ಶಿಫಾರಸಿನಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿತ್ತು. ಇದು ಅಕ್ಟೋಬರ್‌ 1ರಿಂದಲೇ ಅನ್ವಯವಾಗಲಿದೆ. ತುಟ್ಟಿ ಭತ್ಯೆ ಹೆಚ್ಚಳದಿಂದ ಸರ್ಕಾರದ ಬೊಕ್ಕಸದ ಮೇಲೆ ವಾರ್ಷಿಕ 10,083,96 ಕೋಟಿ ರೂ. ಹೊರೆ ಬೀಳಲಿದೆ. 49.19 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 68.72 ಲಕ್ಷ ಪಿಂಚಣಿದಾರರಿಗೆ ಹೆಚ್ಚಳದಿಂದ ಅನುಕೂಲವಾಗಲಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿತ್ತು.”

Leave a comment

Leave a Reply

Your email address will not be published. Required fields are marked *

Related Articles

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....