ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಮತ್ತು ಅವರ ಪತ್ನಿ ವೈಯಕ್ತಿಕ ಕಾರಣ ಸ್ಪಷ್ಟತೆ ನೀಡಿ ಸಮೀಕ್ಷೆಯಿಂದ ಹೊರಗುಳಿದಿದ್ದಾರೆ.

50

ಜಾತಿ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್ ಮುಖ್ಯಸ್ಥರು ಹಿಂದೇಟು ಕಾರಣಾಂತರಗಳಿಂದ ಸಮೀಕ್ಷೆಯಲ್ಲಿ ಭಾಗಿಯಾಗಲ್ಲ ಎಂದ ನಾರಾಯಣ ಮೂರ್ತಿ, ಸುಧಾ ಮೂರ್ತಿ ಯಾರನ್ನು ಬಲವಂತ ಮಾಡುವಂತಿಲ್ಲ ಎಂದ ಡಿಸಿಎಂ ಡಿಕೆ ಶಿವಕುಮಾರ್ ಜಾತಿ ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸಿದ ನಾರಾಯಣಮೂರ್ತಿ ದಂಪತಿ

ಬೆಂಗಳೂರು: ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದೆ. ಸದ್ಯ ಈ ಪ್ರಕ್ರಿಯೆ ಸುಸೂತ್ರವಾಗಿ ಸಾಗಿದೆ. ಡಿಸೆಂಬರ್‌ ಅಂತ್ಯದೊಳಗೆ ಹಿಂದುಳಿದ ವರ್ಗಗಳ ಆಯೋಗ ಅಂತಿಮ ವರದಿಯನ್ನು ಸರ್ಕಾರಕ್ಕೆ ಕೊಡುವ ಭರವಸೆಯಿದೆ. ಜನಸಾಮಾನ್ಯರು ಸೇರಿದಂತೆ ರಾಜಕೀಯ ಗಣ್ಯರು ಸಮೀಕ್ಷೆಯಲ್ಲಿ ಸಮರೋಪದಿ ಭಾಗವಹಿಸುತ್ತಿದ್ದಾರೆ.

ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ ಎನ್ನಲಾಗಿದ್ದು, ಸದ್ಯ ನಾರಾಯಣ ಮೂರ್ತಿ ದಂಪತಿ ಈ ಸಮೀಕ್ಷೆಯಿಂದ ಹೊರಗುಳಿದಿದೆ. ಹೌದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ಎನ್‌.ಆರ್‌. ನಾರಾಯಣಮೂರ್ತಿ ಸ್ವಯಂ ದೃಢೀಕರಣ ಪತ್ರ ಸರ್ಕಾರಕ್ಕೆ ನೀಡಿದ್ದಾರೆ.  

ನಾವು ಹಿಂದುಳಿದ ಜಾತಿಯವರಲ್ಲ ʻವೈಯಕ್ತಿಕ ಕಾರಣಗಳಿಂದ ಮಾಹಿತಿ ನೀಡಲು ನಿರಾಕರಿಸುತ್ತಿದ್ದೇನೆ. ನಾನು ಮತ್ತು ನನ್ನ ಕುಟುಂಬ ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಈ ಮೂಲಕ ತಿಳಿಸುತ್ತಿದ್ದೇನೆ. ನಾವು ಹಿಂದುಳಿದ ಯಾವ ಜನಾಂಗಕ್ಕೂ ಸೇರಿದವರಲ್ಲ.

ಈ ಸಮೀಕ್ಷೆಯಿಂದ ಸರಕಾರಕ್ಕೆ ಏನೂ ಉಪಯೋಗವಿಲ್ಲ. ಆದ್ದರಿಂದ ನಾವು ಇದರಲ್ಲಿ ಭಾಗವಹಿಸುವುದಿಲ್ಲ,ʼ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಗಣತಿದಾರರು ಸಮೀಕ್ಷೆಗಾಗಿ ಜಯನಗರ 4ನೇ ಬ್ಲಾಕ್‌ನಲ್ಲಿರುವ ನಾರಾಯಣಮೂರ್ತಿ ಅವರ ಮನೆಗೆ ತೆರಳಿದ್ದ ವೇಳೆ ನಾರಾಯಣ ಮೂರ್ತಿ ದಂಪತಿಯಿಂದ ಅನಿರೀಕ್ಷಿತ ಉತ್ತರ ಸಿಕ್ಕಿದೆ.

ಜಾತಿ ಜನಗಣತಿ ಸಮೀಕ್ಷೆದಾರರು ನಿಮ್ಮ ಮನೆಗೆ ಬಂದಿದ್ರಾ? ಏನ್‌ ಪ್ರಶ್ನೆ ಕೇಳಿದ್ರು? ಎಲ್ಲವೂ ಹೇಳಿದ್ರಾ, ಹೇಗಿದೆ ಸಮೀಕ್ಷೆ? ಜನ ಏನಂದ್ರು? ಯಾರನ್ನು ಬಲವಂತ ಮಾಡಲ್ಲ ನಾರಾಯಣಮೂರ್ತಿ ಸ್ವಯಂ ದೃಢೀಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌, ‘‘ನಾವು ಯಾರನ್ನೂ ಬಲವಂತ ಮಾಡುವಂತಿಲ್ಲ. ಭಾಗವಹಿಸುವುದು, ಬಿಡುವುದು ಅವರ ವಿವೇಚನೆಗೆ ಬಿಟ್ಟದ್ದು,’’ ಎಂದಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...

ಜೂನ್ 27 ರಂದು ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ :: ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ಬೆಂಗಳೂರು: ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ ಜೂನ್ 27 ರಂದು...