ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ಇನ್ಮುಂದೆ ಅನುಮತಿ ಪಡೆದುಕೊಳ್ಳುವುದು ಕಡ್ಡಾಯ

49

ಸರ್ಕಾರಿ ಶಾಲೆಗಳ ಮೈದಾನ ಬಳಕೆ ಸಂಬಂಧ ಸದ್ಬಳಕೆ ಮಾಡುವ ಸಂಬಂಧ ನಿಯಮ ರೂಪಿಸಲು ಸಚಿವ ಸಂಪುಟ ಮಾಡಲು ತೀರ್ಮಾನ ಒತ್ತಡದಿಂದ, ಅತಿಕ್ರಮ ಪ್ರವೇಶ ಮಾಡುವುದನ್ನು ತಡೆಯಲು ಈ ತೀರ್ಮಾನ ಕೇರಳ ಮತ್ತು ತಮಿಳುನಾಡಿನಲ್ಲಿ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ. ಅದೇ ಮಾದರಿಯನ್ನು ಕರ್ನಾಟಕದಲ್ಲಿ ಅಳವಡಿಕೆ ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ಅನುಮತಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಆದ ನಿರ್ಣಯ ಏನು?

ಬೆಂಗಳೂರು: ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ಇನ್ಮುಂದೆ ಅನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ಈ ಕುರಿತಾಗಿ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಖಾಸಗಿ ಸಂಘ ಸಂಸ್ಥೆಗಳು / ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ಕಾನೂನುಬದ್ದವಾಗಿ ನಡೆಸಲು ಅನುಮತಿ ನೀಡಲು ಅನುಮೋದನೆ ನೀಡಲಾಗಿದೆ.

ಸಾರ್ವಜನಿಕ ಸ್ಥಳ, ಸರ್ಕಾರಿ ಶಾಲೆಗಳ ಮೈದಾನ ಬಳಕೆ ಸಂಬಂಧ ಸದ್ಬಳಕೆ ಮಾಡುವ ಸಂಬಂಧ ನಿಯಮ ರೂಪಿಸಲು ಸಚಿವ ಸಂಪುಟ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್ ಕೆ ಪಾಟೀಲ್ ಮಾಹಿತಿ ನೀಡಿದರು.

ಬೆಂಗಳೂರಲ್ಲೇ RSS ಮುಖ್ಯಸ್ಥ, ಏನಿದರ ರಹಸ್ಯ? ಈ ಬಗ್ಗೆ ವಿಸ್ತೃತವಾಗಿ ಜಿಒ ಹೊರಡಿಸಲಾಗುವುದು. ಈ ಮುಂಚೆ ಈ ಸಂಬಂಧ ಕಾನೂನಿನಲ್ಲಿ ಗೊಂದಲ ಇತ್ತು.‌ ಈ ಬಗ್ಗೆ ಸ್ಪಷ್ಟತೆ ಕೊಡಲು, ಕೆಲ ನಿಯಮಗಳನ್ನು ಸೇರ್ಪಡಿಸಿ ನೀತಿ ನಿಯಮ ರೂಪಿಸಲಾಗುವುದು. ಒತ್ತಡದಿಂದ, ಅತಿಕ್ರಮ ಪ್ರವೇಶ ಮಾಡುವುದನ್ನು ತಡೆಯಲು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಆರ್ ಎಸ್ ಎಸ್ ಚಟುವಟಿಕೆಗೆ ಸರ್ಕಾರಿ ಶಾಲಾ ಆವರಣದಲ್ಲಿ ಮೂಗುದಾರ ಹಾಕುವ ನಿಟ್ಟಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಪ್ರಿಯಾಂಕ್ ಖರ್ಗೆ ಈ ಪತ್ರ ವಿವಾದ ಸೃಷ್ಟಿಸಿತ್ತು. ಇದೇ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಆಯಿತು. ಕೇರಳ ಮತ್ತು ತಮಿಳುನಾಡಿನಲ್ಲಿ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ. ಅದೇ ಮಾದರಿಯನ್ನು ಕರ್ನಾಟಕದಲ್ಲಿ ಅಳವಡಿಸುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಹಾಗೂ ತೀರ್ಮಾನ ಕೈಗೊಳ್ಳಲಾಗಿದೆ.”

Leave a comment

Leave a Reply

Your email address will not be published. Required fields are marked *

Related Articles

ಗ್ಯಾರೆಂಟಿ ಯೋಜನೆ ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು: ಗ್ಯಾರೆಂಟಿ ಯೋಜನೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಮತ್ತು ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು...

ವಿಧಾನಪರಿಷತ್ ಚುನಾವಣೆ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆಲುವಿನ ನಗೆ

“ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಸಾಧಿಸಿದ್ದು ಜೆಡಿಎಸ್ ಅಭ್ಯರ್ಥಿಗೆ ಸೋಲಾಗಿದೆ. ಕಾಂಗ್ರೆಸ್...

ಕೊಲ್ಲೂರು ಮೂಕಾಂಬಿಕಾ ತಾಯಿಯ ದರ್ಶನ ಪಡೆದ ಉದ್ಯಮಿ ಅನಂತ ಅಂಬಾನಿ

“ಉಡುಪಿ: ಸದ್ದು ಗದ್ದಲವಿಲ್ಲದೆ ದೇಶದ ಪ್ರತಿಷ್ಠಿತ ಉದ್ಯಮ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಅಂಬಾನಿ ಕುಟುಂಬದ ಅನಂತ ಅಂಬಾನಿ...

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ

“ಬೆಂಗಳೂರು: ಡಿಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ...