ಕರ್ನಾಟಕದ 2 ಜಿಲ್ಲೆಗಳಲ್ಲಿ ನಿಮ್ಹಾನ್ಸ್‌ ಮಾದರಿ ಆಸ್ಪತ್ರೆ ನಿರ್ಮಾಣ;ಪ್ರತಿ ಸಂಸ್ಥೆಗೆ 100 ಕೋಟಿ ರೂ. ವೆಚ್ಚದಲ್ಲಿಸ್ಥಾಪಿಸಲು ಸರ್ಕಾರ ಮಹತ್ವದ ನಿರ್ಣಯ

36

ಮೈಸೂರು ಮತ್ತು ಕಲಬುರಗಿ ವೈದ್ಯಕೀಯ ಕಾಲೇಜುಗಳಲ್ಲಿ ನಿಮ್ಹಾನ್ಸ್‌ ಮಾದರಿ ಸಂಸ್ಥೆ. ತಲಾ 100 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಸರ್ಕಾರ ಮಹತ್ವದ ನಿರ್ಣಯ. ವಿಜಯಪುರ ಜಿಲ್ಲಾಆಸ್ಪತ್ರೆ ಆವರಣದಲ್ಲಿರುವ 100 ಹಾಸಿಗೆಯ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲು ಅಗತ್ಯ ನೆರವು. ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ.

ಬೆಂಗಳೂರು: ಮೈಸೂರು ಮತ್ತು ಕಲಬುರಗಿ ವೈದ್ಯಕೀಯ ಕಾಲೇಜುಗಳಲ್ಲಿ ನಿಮ್ಹಾನ್ಸ್‌ ಮಾದರಿ ಸಂಸ್ಥೆಗಳನ್ನು ತಲಾ 100 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸುವ ಮಹತ್ವದ ನಿರ್ಣಯವನ್ನು ಕರ್ನಾಟಕ ಸರ್ಕಾರ ಕೈಗೊಂಡಿದೆ. ನಿಮ್ಹಾನ್ಸ್‌ ಮಾದರಿಯ ಆಸ್ಪತ್ರೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಆಯಾ ಭಾಗದ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆಯನ್ನು ಕೈಗೆಟಕುವ ದರದಲ್ಲಿ ಒದಗಿಸಲು ಇದರಿಂದ ಅನುಕೂಲವಾಗಲಿದೆ ಎಂದು ಸಂಪುಟ ಸಭೆ ಬಳಿಕ ಕಾನೂನು ಸಚಿವ ಎಚ್‌ಕೆ ಪಾಟೀಲ್‌ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.

ಕಲಬುರಗಿ ನಿಮ್ಹಾನ್ಸ್‌ ಮಾದರಿ ಸಂಸ್ಥೆ ಸ್ಥಾಪನೆಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನವನ್ನು ವೆಚ್ಚ ಮಾಡಲಾಗುವುದು,” ಎಂದು ಹೇಳಿದರು. · ವಿಜಯಪುರದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ವಿಜಯಪುರ ಜಿಲ್ಲಾಆಸ್ಪತ್ರೆ ಆವರಣದಲ್ಲಿರುವ 100 ಹಾಸಿಗೆಯ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲು ಅಗತ್ಯವಿರುವ ಉಪಕರಣಗಳನ್ನು 54.92 ಕೋಟಿ ರೂ. ವೆಚ್ಚದಲ್ಲಿ ಖರೀದಿಸುವ ಪ್ರಸ್ತಾವನೆಗೆ ಒಪ್ಪಿಗೆ.

ಸಂಜಯಗಾಂಧಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆಯಲ್ಲಿನೂತನ ವಾಸ್ಕ್ಯೂಲರ್‌ ಶಸ್ತ್ರಚಿಕಿತ್ಸಾ ವಿಭಾಗಕ್ಕೆ ಅವಶ್ಯಕ ಉಪಕರಣಗಳನ್ನು 26.09 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲು ಅನುಮೋದನೆ. ಅಂಗನವಾಡಿಗಳಿಗೆ ಔಷಧ ಕಿಟ್‌ ರಾಜ್ಯದ 69,922 ಅಂಗನವಾಡಿ ಕೇಂದ್ರಗಳಿಗೆ 1,500 ಘಟಕ ವೆಚ್ಚದಲ್ಲಿಔಷಧ ಕಿಟ್‌ಗಳನ್ನು ಇ-ಟೆಂಡರ್‌ ಮೂಲಕ ಖರೀದಿಸಲು ಸಂಪುಟ ನಿರ್ಧರಿಸಿತು.

ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ 10.49 ಕೋಟಿ ರೂ.ಗಳನ್ನು ಈ ಉದ್ದೇಶಕ್ಕೆ ಬಳಕೆ ಮಾಡಲಾಗುವುದು. ಕನ್ನಡ ಭಾಷಾ ಪರೀಕ್ಷೆಯಿಂದ ವಿನಾಯಿತಿ ಗೆಜೆಟೆಡ್‌ ಪ್ರೊಬೆಷನರ್ಸ್ ಹುದ್ದೆಗಳಿಗೆ ನೇಮಕ ಪರೀಕ್ಷೆ ಹಂತದಲ್ಲೇ 150 ಅಂಕಗಳ ಕನ್ನಡ ಭಾಷಾ ಅರ್ಹತೆ ಪರೀಕ್ಷೆ ಇರುತ್ತದೆ.

ಇದರಲ್ಲಿ ತೇರ್ಗಡೆಯಾದ ನಂತರವೇ ಗೆಜೆಟೆಡ್‌ ಪ್ರೊಬೆಷನರ್ಸ್ ಹುದ್ದೆಗಳಿಗೆ ನೇಮಕ ಆಗುವುದರಿಂದ ಈ ಅಧಿಕಾರಿಗಳಿಗೆ ಕನ್ನಡ ಭಾಷಾ ಪರೀಕ್ಷೆಯಿಂದ ವಿನಾಯಿತಿ ನೀಡುವ ತೀರ್ಮಾನವನ್ನು ಕ್ಯಾಬಿನೆಟ್‌ ತೆಗೆದುಕೊಂಡಿದೆ. ಈ ಸಂಬಂಧ ‘ಕರ್ನಾಟಕ ಸಿವಿಲ್‌ ಸೇವೆಗಳು (ಸೇವಾ ಮತ್ತು ಕನ್ನಡ ಭಾಷಾ ಪರೀಕ್ಷೆಗಳು) ತಿದ್ದುಪಡಿ ನಿಯಮ – 2025 ಕ್ಕೆ ಸಂಪುಟ ಅನುಮೋದನೆ ನೀಡಿದೆ.

Leave a comment

Leave a Reply

Your email address will not be published. Required fields are marked *

Related Articles

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ಪರೀಕ್ಷೆ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡುವಂತೆ :: ಹೈಕೋರ್ಟ್ ಆದೇಶ

ಬೆಂಗಳೂರು: 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮೂರನೇ ಭಾಷಾ ಪರೀಕ್ಷೆಯ ಉತ್ತರಪತ್ರಿಕೆಗಳನ್ನು ಮೌಲ್ಯಮಾಪನ ಮಾಡುವಂತೆ ರಾಜ್ಯ ಸರ್ಕಾರಕ್ಕೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ಉಪ ಚುನಾವಣೆ ರಣಾಂಗಣ ದಿನಕಳೆದಂತೆ ತೀವ್ರ ಕುತೂಹಲ ಕೆರಳಿಸುತ್ತಿದ್ದು ಪ್ರಮುಖವಾಗಿ ದಾವಣಗೆರೆ ದಕ್ಷಿಣ...